ನಾಯಕನಹಟ್ಟಿ ಡಿ.27 ಹಸುಗಳ ಮೇವಿಗಾಗಿ ಹುಲ್ಲು ಕೊಯ್ಯುವಾಗ ಹಾವು ಕಚ್ಚಿ ರೈತನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಸಮೀಪದ ರೇಖಲಗೆರೆ ಕಂಪಳಿಸಾಗರದ ತಿಪ್ಪೇಸ್ವಾಮಿ(52 ) . ಹುಲ್ಲು ಕೊಯ್ಯುವ ವೇಳೆ ಹಾವು ಕಚ್ಚಿದ್ದು, ಕುಟುಂಬದವರು ನಾಯಕನಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ಕರೆ ತಂದಿದ್ದಾರೆ.ಆದರೆ, ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮಾರ್ಗ ಮಧ್ಯದಲ್ಲಿಯೇ ತಿಪ್ಪೇಸ್ವಾಮಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments