ದಾವಣಗೆರೆ: ಎಲ್ಲಾ ಪದವಿ ವಿದ್ಯಾರ್ಥಿಗಳಿಗೂ ಸಂಪೂರ್ಣವಾಗಿ ವಿದ್ಯಾರ್ಥಿವೇತನ ಬಿಡುಗಡೆ ಮಾಡಿ, ಹಾಸ್ಟೆಲ್ ಸಂಖ್ಯೆಗಳನ್ನು ಹೆಚ್ಚಿಸಬೇಕೆಂಬುದು ಸೇರಿದಂತೆ, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಎಐಡಿಎಸ್ ಒ ಕಾರ್ಯಕರ್ತರು ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎ ಐ ಡಿ ಎಸ್ ಓ ನ ಜಿಲ್ಲಾ ಕಾರ್ಯದರ್ಶಿ ಪೂಜಾ ನಂದಿಹಳ್ಳಿ ರಾಜ್ಯದ ಪದವಿ ವಿದ್ಯಾರ್ಥಿಗಳ ಸಮಸ್ಯೆ ಬಗ್ಗೆ ಸರ್ಕಾರ ಅತ್ಯಂತ ನಿರ್ಲಕ್ಷ್ಯ ತೋರಿಸುತ್ತಿದೆ. ಈಗಾಗಲೇ ಎನ್ ಇಪಿ ಮೊದಲ ಬ್ಯಾಚ್ ನ ವಿದ್ಯಾರ್ಥಿಗಳ ಪರೀಕ್ಷೆ ಮುಗಿದು ಮುಂದಿನ ಹಂತಕ್ಕೆ ತಲುಪಿದ್ದಾರೆ. ಆದರೆ ಫಲಿತಾಂಶದಲ್ಲಿ ಹಲವಾರು ಗೊಂದಲಗಳು ಸೃಷ್ಟಿಯಾಗಿದ್ದು ಎಲ್ಲಾ ವಿಷಯವಾರು ಉತ್ತೀರ್ಣರಾಗಿದ್ದು ಕೊನೆಯಲ್ಲಿ ಅನುತ್ತೀರ್ಣವೆಂದು ತೋರಿಸುತ್ತಿದೆ. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಹಾಜರಿದ್ದರು ಸಹ ಗೈರು ಹಾಜರು ಎಂದು ತೋರಿಸುತ್ತದೆ ಹಾಗೆಯೇ ಮೌಲ್ಯಮಾಪನದಲ್ಲಿ ಹಲವಾರು ಗೊಂದಲಗಳಾಗಿದ್ದು ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳು ಅನುತೀರ್ಣರಾಗಿರುವುದು ವಿದ್ಯಾಲಯದಿಂದ ಆಗಿರುವ ದೋಷಗಳು ವಿದ್ಯಾರ್ಥಿಗಳಿಗೆ ಹೊರೆ ಮಾಡದೆ ಮರು ಮೌಲ್ಯಮಾಪನದ ಶುಲ್ಕ ತೆಗೆದುಕೊಳ್ಳದೆ ಮರುಮೌಲ್ಯಮಾಪನ ಮಾಡಬೇಕೆಂದು ಒತ್ತಾಯಿಸಿದರು.
ವಿದ್ಯಾರ್ಥಿಗಳು ಸ್ಕಾಲರ್ ಶಿಪ್ ಗಾಗಿ ಅರ್ಜಿ ಸಲ್ಲಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ, ಇದರೊಂದಿಗೆ, ವಿದ್ಯಾರ್ಥಿವೇತನ ವಿತರಣೆ ಆಗದಿರುವುದು ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿದೆ. ಒಂದೆಡೆ ವಿದ್ಯಾರ್ಥಿವೇತನ ಹಕ್ಕನ್ನು ಸರ್ಕಾರ ಕಸಿಯುತ್ತಿದೆ, ಇನ್ನೊಂದೆಡೆ ಪ್ರತಿವರ್ಷದಂತೆ ಶೈಕ್ಷಣಿಕ ಶುಲ್ಕವನ್ನು ಏರಿಕೆ ಮಾಡುತ್ತಿದೆ. ಸರ್ಕಾರಿ ಪದವಿ ಕಾಲೇಜುಗಳಲ್ಲಿ ಈಗಾಗಲೇ ಮೂರು ಬಾರಿ ಪದವಿ ಕೋರ್ಸ್ ನ ಶುಲ್ಕವನ್ನು ಏರಿಕೆ ಮಾಡಲಾಗಿದೆ. ಈ ಕೂಡಲೇ ಪದವಿ ಇಂತಹ ವಿದ್ಯಾರ್ಥಿವಿರೋಧಿ ನಿಲುವನ್ನು ಸರ್ಕಾರ ಕೈಬಿಡಬೇಕು ಮತ್ತು ಈ ಕೂಡಲೇ ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ವಿದ್ಯಾರ್ಥಿವೇತನ ಬಿಡುಗಡೆ ಮಾಡಬೇಕು. ಪದವಿ ವಿದ್ಯಾರ್ಥಿಗಳಿಗೆ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಸಂಖ್ಯೆಗಳನ್ನು ಹೆಚ್ಚಿಸಬೇಕು ಮತ್ತು ದಾಖಲಾತಿಯನ್ನು ಹೆಚ್ಚಿಸಬೇಕು” ಹಾಗೂ ಹಳ್ಳಿಯಿಂದ ಕಾಲೇಜಿಗೆ ಓಡಾಡುವ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕಾವ್ಯ, ಪುಷ್ಪ ಜಿ ಸೇರಿದಂತೆ ಅನೇಕರಿದ್ದರು.
0 Comments