ಹಿಂಗಾರು ಹಂಗಾಮು ಬೆಳೆ ಸಮೀಕ್ಷೆ: ಮೊಬೈಲ್ ಆ್ಯಪ್ ಮೂಲಕ ಬೆಳೆ ಮಾಹಿತಿ ರೈತರೇ ಅಪ್‍ಲೋಡ್ ಮಾಡಲು ಸೂಚನೆ.

by | 22/12/23 | ಕೃಷಿ

ಚಿತ್ರದುರ್ಗ ಡಿ.22:
ಚಿತ್ರದುರ್ಗ ಜಿಲ್ಲೆಯಲ್ಲಿ 2023-24ನೇ ಸಾಲಿನ ಹಿಂಗಾರು ಹಂಗಾಮು ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ ಮಾಡಲಾಗಿದ್ದು, ರೈತರು ಗೂಗಲ್ ಪ್ಲೇಸ್ಟೋರ್‍ನಿಂದ “Rabi Crop Survey App -2023-24 (ಹಿಂಗಾರು ರೈತರ ಬೆಳೆ ಸಮೀಕ್ಷೆ -2023)” ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ತಾವು ಬೆಳೆದ ಬೆಳೆ ಮಾಹಿತಿ ಹಾಗೂ ಛಾಯ ಚಿತ್ರವನ್ನು ಅಪ್‍ಲೋಡ್ ಮಾಡಬಹುದಾಗಿದೆ.
ಈ ಮಾಹಿತಿಯನ್ನು ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಗಳಡಿ ಸವಲತ್ತುಗಳನ್ನು ಒದಗಿಸಲು ಪಹಣಿಯಲ್ಲಿ ಅಳವಡಿಸಲು ಬಳಸಲಾಗುತ್ತದೆ.
ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ತಾವೇ ಖುದ್ದಾಗಿ ದಾಖಲಿಸಲು ಕೋರಿದೆ. ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರ, ಗ್ರಾಮ ಲೆಕ್ಕಾಧಿಕಾರಿಗಳು ಅಥವಾ ಗ್ರಾಮಗಳಿಗೆ ನಿಯೋಜಿಸಿದ ಖಾಸಗಿ ನಿವಾಸಿಗಳ ಸಹಾಯದೊಂದಿಗೆ ಸಹ ಬೆಳೆ ಮಾಹಿತಿಯನ್ನು ದಾಖಲಿಸಬಹುದು.
ಬೆಳೆ ವಿವರಗಳನ್ನು ದಾಖಲು ಮಾಡದಿದ್ದಲ್ಲಿ ಇಲಾಖೆಗಳಿಂದ ದೊರೆಯುವ ಸವಲತ್ತುಗಳಿಂದ ವಂಚಿತರಾಗುತ್ತೀರಿ. ಹೆಚ್ಚಿನ ಮಾಹಿತಿಗಾಗಿ ರೈತರು ಬೆಳೆ ಸಮೀಕ್ಷೆ ಸಹಾಯವಾಣಿ ಸಂಖ್ಯೆ 18004253553 ಗೆ ಕರೆ ಮಾಡಬಹುದು ಅಥವಾ ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ/ರೈತ ಸಂಪರ್ಕ ಕೇಂದ್ರ, ಅಥವಾ ಗ್ರಾಮ ಲೆಕ್ಕಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page