ಚಿತ್ರದುರ್ಗ ಅ.21 ಭ್ರಷ್ಟಾಚಾರ ಮುಕ್ತ ಹಾಗೂ ಜನಸ್ನೇಹಿ ಆಡಳೀತ ನೀಡಲು ಕೇಂದ್ರ ಹಾಗೂ ರಾಜ್ಯ ಸರಕಾರ ರಾಜ್ಯದ ಅಭಿವೃದ್ಧಿಗೆಂದು ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತಿದೆ ಇದನ್ನೇ ಬಂಡವಾಳ ಮಾಡಿಕೊಂಡ ಅಧಿಕಾರಿಗಳು ಅನುದಾನವನ್ನು ದುರ್ಭಳಕೆ ಮಾಡಿಕೊಂಡು ತಮ್ಮ ಖಜಾನೆ ತುಂಬಿಸಿಕೊಳ್ಳಲು ಮುಂದಾಗಿದ್ದಾರೆ.



ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 2022-23 ನೇಒಟ್ಟು ಎಂಟು ಕೋಟಿ 36 ಲಕ್ಷ 1 ಸಾವಿರ 412 ರೂಪಾಯಿ ಸಮಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದು ಖರ್ಚು ಮಾಡಲಾಗಿದೆ. ಆ ಮೂಲಕ ಕೆ.ಟಿ.ಪಿ.ಪಿ ನಿಯಮವನ್ನು ಅಧಿಕಾರಿಗಳು ಉಲ್ಲಂಘಿಸಿದ್ದಾರೆ.
ಭ್ರಷ್ಟಾಚಾರ ರಹಿತ ಆಡಳಿತ ಎಂಬುದು ಕೇವಲ ಘೋಷಣೆಗೆ ಮಾತ್ರ ಸೀಮಿತವಾದಂತಾಗಿದೆ. ವಿವಿಧ ಇಲಾಖೆಗಳಲ್ಲಿ ಎಗ್ಗಿಲ್ಲದೆ ಬ್ರಹ್ಮಾಂಡ ಬ್ರಷ್ಟಾಚಾರ ನಡೆಯುತ್ತಲೇ ಇದೆ. ಈ ಮಾತಿಗೆ ಸಾಕ್ಷಿಯೆಂಬಂತೆ ಚಿತ್ರದುರ್ಗದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಆಡಳಿತಾತ್ಮಕ ಅನುಮೋದನೆ ಪಡೆಯದೆ ಎಂಟೂವರೆ ಕೋಟಿ ರೂಪಾಯಿ ಹಣ ಖರ್ಚು ಮಾಡಿದ್ದು ಹಣ ದುರ್ಬಳಕೆ ನಡೆಸಿದ ಆರೋಪ ಕೇಳಿ ಬಂದಿದೆ.
ವಿದ್ಯಾರ್ಥಿ ನಿಲಯಗಳ ಆಹಾರ ವೆಚ್ಚ, ಮಾನವ ಸೇವೆ ಸಂಸ್ಥೆಗಳಿಗೆ ಬಿಲ್ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಖರ್ಚು ಮಾಡಲಾಗಿದೆ. ಆದ್ರೆ, ಅಧಿಕಾರಿಗಳು ವೈಯಕ್ತಿಕ ಖಾತೆಗೆ ಹಣ ಹಾಕಿಕೊಂಡು ದುರ್ಬಳಕೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಜಿಲ್ಲಾ ಪಂಚಾಯತಿ ಸಿಇಓ, ಜಿಲ್ಲಾಧಿಕಾರಿ ಮತ್ತು ಸರ್ಕಾರಕ್ಕೆ ದೂರು ಸಲ್ಲಿಸಿದ್ದೇನೆ. ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದೆ ನಿರ್ಲಕ್ಷ ತೋರಿದ್ದು ಲೋಕಾಯುಕ್ತದ ಮೊರೆ ಹೋಗಿದ್ದೇನೆ ಎಂದು ರೈತ ಮುಖಂಡ ಕೊಂಚೆ ಶಿವರುದ್ರಪ್ಪ ಹೇಳಿದ್ದಾರೆ.
ಇನ್ನು ಈಗಾಗಲೇ ಕೋಟೆನಾಡು ಚಿತ್ರದುರ್ಗದಲ್ಲೇ ಕೇಂದ್ರ ಕಚೇರಿ ಹೊಂದಿರುವ ಬಯಲುಸೀಮೆ ಅಭಿವೃದ್ಧಿ ಮಂಡಳಿಯಲ್ಲೂ ಸಹ ಇದೇ ರೀತಿ ಪ್ರಕರಣ ನಡೆದಿತ್ತು. ಆಡಳಿತಾತ್ಮಕ ಅನುಮೋದನೆ ಪಡೆಯದೆ ನೂರಾರು ಕೋಟಿ ವೆಚ್ಚದ ವರ್ಕ್ ಆರ್ಡರ್ ನೀಡಿದ ಪ್ರಕರಣ ಭಾರೀ ಸುದ್ದಿ ಆಗಿತ್ತು. ಇದೀಗ ಚಿತ್ರದುರ್ಗದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿದೆ. ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೊಂಚೆಶಿವರುದ್ರಪ್ಪ ಸರಕಾರಕ್ಕೆ ಆಗ್ರಹಿಸಿದ್ದಾರೆ.
0 Comments