ಹಿರಿಯೂರು :
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ವಕೀಲ ಮತ್ತು ಬಿಜೆಪಿ ಮುಖಂಡ ಜಿ.ದೇವರಾಜೇಗೌಡರನ್ನು ಹಿರಿಯೂರು ಗ್ರಾಮಾಂತರ ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ವಕೀಲ ದೇವರಾಜೇಗೌಡ ಮೇಲೆ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಆರೋಪ ಮಾಡಿ ವೀಡಿಯೋ ಕೂಡ ಬಿಡುಗಡೆ ಮಾಡಿದ್ದರು. ಈ ಸಂಬಂಧವಾಗಿ ಪ್ರಕರಣ ದಾಖಲಾದ ಬೆನ್ನಲ್ಲೇ ಆರೋಪಿ ಜಿ.ದೇವರಾಜೇಗೌಡ ತಲೆಮರೆಸಿಕೊಂಡಿದ್ದರು.
ಹಿರಿಯೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಜಿ.ದೇವರಾಜೇಗೌಡ ಸಂಚರಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಹಿರಿಯೂರು ಪೊಲೀಸರು ತಾಲೂಕಿನ ಗೂಯಿಲಾಳು ಟೋಲ್ ಬಳಿ ಇವರನ್ನು ಬಂಧಿಸಿದ್ದಾರೆ. ಬಿಜೆಪಿ ಮುಖಂಡ ದೇವರಾಜೇಗೌಡ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಕುರಿತು ಮಾಹಿತಿ ಹೊಂದಿದ್ದು, ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಪಾದನೆಗಳ ಸುರಿಮಳೆಗೈದಿದ್ದರು. ಬಿಜೆಪಿ-ಜೆಡಿಎಸ್ ಮೈತ್ರಿಗೂ ಮೊದಲು(2023 ರಲ್ಲಿ) ಬಿಜೆಪಿಗೆ ಪತ್ರ ಬರೆದಿದ್ದರು ಎನ್ನಲಾಗಿದೆ.
ವಕೀಲ ಜಿ.ದೇವರಾಜೇಗೌಡರ ವಿರುದ್ಧ ಹಾಸನ ಮೂಲದ 36 ವರ್ಷದ ಮಹಿಳೆ ತಮ್ಮ ಆಸ್ತಿ ಮಾರಾಟಕ್ಕೆ ಸಹಾಯ ಮಾಡುವ ನೆಪದಲ್ಲಿ ಲೈಂಗಿಕ ಕಿರುಕುಳ ಕೊಟ್ಟಿದ್ದರು ಎಂದು ಆರೋಪಿಸಿ ದೂರು ನೀಡಿದ್ದು, ಮಹಿಳೆಯ ಈದೂರು ಆಧರಿಸಿ ಹಾಸನ ಜಿಲ್ಲೆಯ ಹೊಳೆನರಸೀಪುರ ನಗರಠಾಣೆಯಲ್ಲಿ ದೇವರಾಜೇಗೌಡ ಮೇಲೆ ಎಫ್.ಐ.ಆರ್ ದಾಖಲು ಮಾಡಿಕೊಂಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ವಕೀಲ ದೇವರಾಜೇಗೌಡ ತಲೆಮರೆಸಿಕೊಂಡಿದ್ದ ಅವರನ್ನು ಹಿರಿಯೂರಲ್ಲಿ ಪೊಲೀಸರು ಬಂಧಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments