ಹಿರಿಯೂರು ದಕ್ಷಿಣಕಾಶಿ ಶ್ರೀತೇರುಮಲ್ಲೇಶ್ವರ ದೇವಸ್ಥಾನದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ವಿಶೇಷ ಗೋಪೂಜೆ ಸಲ್ಲಿಸಿದ ಆಡಳೀತ ಮಂಡಳಿ

by | 14/11/23 | ಸುದ್ದಿ


ಹಿರಿಯೂರು 14. ಮುಜರಾಯಿ ಇಲಾಖೆಗೆ ಸೇರಿದ ಹಿರಿಯೂರು ನಗರದ ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಮುಜರಾಯಿ ಅಧಿಸೂಚಿತ “ಬಿ” ಪ್ರವರ್ಗದ ಶ್ರೀ ತೇರುಮಲ್ಲೇಶ್ವರ ದೇವಸ್ಥಾನದಲ್ಲಿ ಸರಕಾರದ ಆದೇಶದಂತೆ ಮಂಗಳವಾರ ಸಂಜೆ 5.30 ರ ಸಮಯದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ವಿಶೇಷವಾಗಿ ಗೋ ಪೂಜೆ ನೆರವೇಸಲಾಯಿತು.

ತಹಶೀಲ್ದಾರ್ ರಾಜೇಶ್ ಕುಮಾರ್ ಮಾತನಾಡಿ ಎಲ್ಲಾ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಗೋ ಪೂಜೆ ನಡೆಸಬೇಕು ಎಂದು ಸುತ್ತೋಲೆ ಹೊರಡಿಸಿಸಿದ ಆದೇಶದ ಮೇರೆಗೆ ಮಂಗಳವಾರ ಸಂಜೆ 5.30 ರಿಂದ 6.30ರ ಗೋಧೂಳಿ ಲಗ್ನದಲ್ಲಿ
ಗೋವಿಗೆ ಸ್ನಾನ ಮಾಡಿಸಿ ದೇವಾಲಯಕ್ಕೆ ಕರೆತರಲಾಯಿತು. ನಂತರ ಅರಿಶಿಣ, ಕುಂಕುಮ ಹಚ್ಚಿ, ಹೂಗಳಿಂದ ಅಲಂಕರಿಸಿ, ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ನೀಡುವ ಮೂಲಕ ಗೋ ಪೂಜೆ ನೆರವೇರಿಸಲಾಯಿತು.

ಇತ್ತೀಚಿನ ದಿನಗಳಲ್ಲಿ ದನಗಳ‌ ಸಂಖ್ಯೆ ಇಳಿಮುಖವಾಗುತ್ತಿರುವುದನ್ನು ಮನಗಂಡು ಸರಕಾರ ಗೋವುಗಳ ರಕ್ಷಣೆಗಾಗಿ ದೇವಾಲಯಗಳಲ್ಲಿ ಗೋ ಪೂಜೆ; ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಸಂರಕ್ಷಣೆಯ ಬಗ್ಗೆ ಜಾಗೃತಿ ಉದ್ದೇಶದಿಂದ ಮಾನ್ಯ ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ ಆದೇಶದಂತೆ ದೇವಾಲಯಗಳಲ್ಲಿ ದೀಪಾವಳಿ ಬಲಿಪಾಡ್ಯಮಿ ದಿನದಂದು ಗೋಧೂಳಿ ಲಗ್ನದಲ್ಲಿ ಗೋವುಗಳಿಗೆ ಗೋಗ್ರಾಸವನ್ನು ನೀಡಿ ಗೋ ಪೂಜೆ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.


ಹಿಂದೂ ಧರ್ಮದಲ್ಲಿ ಗೋವುಗಳಿಗೆ ಮಾತೃ ಸ್ಥಾನವನ್ನು ಕೊಡಲಾಗಿದೆ. ದೀಪಾವಳಿಯ ಸಂದರ್ಭದಲ್ಲಿ ಗೋ ಪೂಜೆ ಅತ್ಯಂತ ಪ್ರಮುಖವಾದ ಪೂಜೆಗಳಲ್ಲೊಂದು. ದೀಪಾವಳಿ ಹಬ್ಬದಲ್ಲಿ ಗೋಪೂಜೆಗೆ ವಿಶೇಷ ಪ್ರಾಧಾನ್ಯತೆ ಇದೆ.

ಗೋ ಮಾತೆಯಲ್ಲಿ 33 ಕೋಟಿ ದೇವಾನುದೇವತೆಗಳು ನೆಲೆಸಿದ್ದಾರೆಂದು ನಂಬಲಾಗುತ್ತದೆ. ಗೋ ಮಾತೆಯನ್ನು ಪೂಜಿಸಿದರೆ ಅನೇಕ ಸಮಸ್ಯೆಗಳು ಪರಿಹಾರವಾಗುತ್ತವೆ ಎಂಬ ನಂಬಿಕೆ ಇಂದಿಗೂ ಜನರಲ್ಲಿ ಮನೆ ಮಾಡಿದೆ . ಗೃಹ ಪ್ರವೇಶ. ವಿವಾಹ ಇತರೆ ಶುಭ ಕಾರ್ಯಗಳಲ್ಲಿ ಗೋ ಪೂಜೆ ಮಾಡುವ ಪದ್ದತಿ ಆಚರಣೆಯಲ್ಲಿದೆ. ಈಗ ಸರ್ಕಾರವೂ ಸಹ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಗೋ ಪೂಜೆ ಮಾಡಲು ಆದೇಶ ಹೊರಡಿಸಿದೆ.
ಉತ್ತಮ ರೀತಿಯಲ್ಲಿ ಮಳೆಯಾಗಿ, ಸಮೃದ್ಧವಾಗಿ ಬೆಳೆಗಳು ಬರಲೆಂದು ಹಾಗೂ ಸಸ್ಯರಾಶಿಗಳು ಸಮೃದ್ಧಿಯಾಗಿ ಸಕಲರಿಗೂ ಒಳಿತಾಗಲಿ ಎಂದು ಸಂಕಲ್ಪಿಸಿ ಪ್ರಾರ್ಥಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿತ್ತು ಅದರಂತೆ ದೇವಸ್ಥಾನ ಸಮಿತಿ ಹಾಗೂ ಕಂದಾಯ ಇಲಾಖೆ ಗೋಪೂಜೆ ಸಲ್ಲಿಸುವ ಮೂಲಕ ಉತ್ತಮ ಮಳೆ ಬೆಳೆ ಬರಲೆಂದು ಪ್ರಾರ್ಥನೆ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮುಜರಾಯಿ ಇಲಾಖೆ ಸಿಬ್ಬಂದಿ ವರ್ಗದವರು, ದೇವಸ್ಥಾನದ ಆಡಳಿತ ಅಧಿಕಾರಿಗಳು ಹಾಗೂ ರಾಜಸ್ವ ನಿರೀಕ್ಷಕರು ಕಸಬಾ ಹೋಬಳಿ ಹಾಗೂ ಕಸಬಾ ಹೋಬಳಿ ಕಂದಾಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *