,ಬೆಂಗಳೂರು: ಹಿರಿಯ ಐಎಎಸ್ ಮೇಜರ್ ಮಣಿವಣ್ಣನ್ ಸೇರಿದಂತೆ ಮೂವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ವರ್ಗಾವಣೆಗೊಳಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಸಮಾಜ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಮೇಜರ್ ಮಣಿವಣ್ಣನ್ ಅವರನ್ನು ವರ್ಗಾವಣೆ ಮಾಡಿ,ಅಲ್ವ ಸಂಖ್ಯಾತ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಿದೆ. ಬೆಂಗಳೂರಿನ ಬಿಬಿಎಂಪಿಯ ಸ್ಪೆಷಲ್ ಕಮೀಷನರ್ ಆಗಿದ್ದಂತ ಡಾ. ರಾಮ್ ಪ್ರಶಾಂತ್ ಮನೋಹರ್ ವಿ ಅವರನ್ನು ರಾಜ್ಯ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಇನ್ನೂ ಬೆಳಗಾವಿ ವಿಭಾಗದ ಪ್ರಾದೇಶಿಕ ಕಮೀಷನರ್ ಆಗಿದ್ದಂತ ಹಿರೇಮಠ್ ಎಂ.ಜಿ ಅವರನ್ನು ಕೆಆರ್ ಐಡಿಎಲ್ ನ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ನೇಮಿಸಿದೆ.
0 Comments