ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಹೀರೇಗುಂಟನೂರು ಹೋಬಳಿ ವ್ಯಾಪ್ತಿಯಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಸಾಂಪ್ರದಾಯಿಕ ಎತ್ತಿನ ಬಂಡಿಯ ಮೆರವಣಿಗೆ ಮೂಲಕ ಮತದಾನ ಜಾಗೃತಿ ಜಾಥ ನಡೆಯಿತು.
ಎತ್ತಿನ ಬಂಡಿ ಮೆರವಣಿಗೆ ಮೂಲಕ ಮತದಾನ ಜಾಗೃತಿ ಮೂಡಿಸಿದ್ದು ಎಲ್ಲರ ಗಮನ ಸೆಳೆಯಿತು. ಇದರ ಜೊತೆಗೆ ಬಣ್ಣ ಬಣ್ಣದ ರಂಗೋಲಿಗಳ ಚಿತ್ತಾರಗಳ ಮೂಲಕ “ನನ್ನ ಮತ ನನ್ನ ಹಕ್ಕು”ಎಂಬ ಮತದಾನದ ಮಹತ್ವ ಸಾರುವ ಮೂಲಕ ಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು.ಇದೇ ವೇಳೆ ನೆರೆದಿದ್ದ ನಾಗರಿಕರಿಗೆ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಚಿತ್ರದುರ್ಗ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗಳಾದ ಅನಂತರಾಜು, ಪಿಆರ್.ಡಿ.ಇಇ ಪಾತಪ್ಪ, ಪಿಡಿಓಗಳಾದ ಸಿ.ಎಲ್ ಬಸವರಾಜಪ್ಪ, ಲಾಲಾನಾಯ್ಕ್, ಬಸಪ್ಪ, ವನಜಾಕ್ಷಿ, ಸೇರಿದಂತೆ ತಾಲ್ಲೂಕಿನ ವಿವಿಧ ಇಲಾಖಾ ಮಟ್ಟದ ಅಧಿಕಾರಿಗಳು ಮತ್ತು ಹಾಗೂ ಸಿಬ್ಬಂದಿ ವರ್ಗದವರು , ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಇದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments