ಹೂ ಬೆಳೆಗಾರರು ಮತ್ತು ಸಗಟು ವರ್ತಕರ ಸಭೆ ಅಳತೆಯಲ್ಲಿ ಮೋಸ ಮಾಡದಂತೆ ಕಟ್ಟುನಿಟ್ಟಿನ ಸೂಚನೆ

by | 25/06/24 | ಕೃಷಿ

ಚಿತ್ರದುರ್ಗ ಜೂನ್.25
ಚಿತ್ರದುರ್ಗ ಕೃಷಿ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿರುವ ಸಗಟು ಹೂವಿನ ಮಾರುಕಟ್ಟೆಯಲ್ಲಿ ಹೂವುಗಳನ್ನು ಮಾರಾಟಕ್ಕಾಗಿ ತರುವ ಹೂ ಬೆಳೆಗಾರರು ಹೂವಿನ ಅಳತೆಯಲ್ಲಿ ರೈತರಿಗೆ ಮೋಸವಾಗುತ್ತಿರುವ ಕುರಿತು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ದೂರಿಗೆ ಸಂಬಂಧಿಸಿದಂತೆ ಈಚೆಗೆ ಎ.ಪಿ.ಎಂ.ಸಿ. ಕಾರ್ಯದರ್ಶಿ ಬಿ.ಎಲ್.ಕೃಷ್ಣಪ್ಪ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿರ್ದೇಶಕ ಎಂ. ಗುರುಪ್ರಸಾದ್ ಸಮ್ಮುಖದಲ್ಲಿ ಹೂ ಬೆಳೆಗಾರರು ಮತ್ತು ಹೂವಿನ ಸಗಟು ವರ್ತಕರ ಸಭೆ ನಡೆಸಲಾಯಿತು.
ಈ ಹಿಂದೆ ಅನೇಕ ಬಾರಿ ತಿಳಿಸಿದಂತೆ ಹೂವಿನ ಅಳತೆಯಲ್ಲಿ ಯಾವುದೇ ಕಾರಣಕ್ಕೆ ಮೋಸ ಮಾಡದಂತೆ ಕಟ್ಟುನಿಟ್ಟಾಗಿ ಹೂವಿನ ವರ್ತಕರಿಗೆ ತಿಳಿಸಲಾಗಿದ್ದು, ಈ ಸಂಬಂಧ ದೂರುಗಳು ಕಂಡು ಬಂದಲ್ಲಿ ಹೂವಿನ ವರ್ತಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.
ಸಭೆಯಲ್ಲಿ ಎಪಿಎಂಸಿ ಕಾರ್ಯದರ್ಶಿ ಬಿ.ಎಲ್.ಕೃಷ್ಣಪ್ಪ, ಕಾನೂನು ಮಾಪನಶಾಸ್ತ್ರ ಇಲಾಖೆ ಸಹಾಯಕ ನಿರ್ದೇಶಕ ಎಂ.ಗುರುಪ್ರಸಾದ್, ಹೂ ಬೆಳೆಗಾರರು ಹಾಗೂ ಹೂವಿನ ವರ್ತಕರಾದ ತಿರುಮಲ ಪ್ಲವರ್ ಸ್ಟಾಲ್ ಮಾಲೀಕರು, ಲಕ್ಷ್ಮೀಪ್ರಿಯ ಪ್ಲವರ್ ಸ್ಟಾಲ್ ಮಾಲೀಕರು, ಆದಿಶಕ್ತಿ ಪ್ಲವರ್ ಸ್ಟಾಲ್ ಮಾಲೀಕರು ಸೇರಿದಂತೆ ಸಗಟು ಹೂವಿನ ವರ್ತಕರು ಇದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page