ಹೊಸದುರ್ಗ ಅ.17:
ಜಿಲ್ಲಾಧಿಕಾರಿ ದಿವ್ಯಪ್ರಭು ನೇತೃತ್ವದಲ್ಲಿ ಇದೇ ಅಕ್ಟೋಬರ್ 30ರಂದು ಬೆಳಿಗ್ಗೆ 10ಕ್ಕೆ ಹೊಸದುರ್ಗ ನಗರದ ಶ್ರೀ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ತಾಲ್ಲೂಕು ಮಟ್ಟದ “ಜನತಾ ದರ್ಶನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪ್ರತಿ 15 ದಿನಗಳಿಗೊಮ್ಮೆ ತಾಲ್ಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡು, ಜನರ ಅಹವಾಲು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸಲಾಗುತ್ತದೆ.
ಸಾರ್ವಜನಿಕರು ತಾಲ್ಲೂಕು ಮಟ್ಟದ ಜನತಾ ದರ್ಶನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಹೊಸದುರ್ಗ: ಅ.30ರಂದು ತಾಲ್ಲೂಕುಮಟ್ಟದ “ಜನತಾ ದರ್ಶನ”
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments