ಹೊಸದುರ್ಗ ಆ.5. ಬ್ಯಾಂಕ್ ಅಧಿಕಾರಿಯೊಬ್ಬರು ಲಾಡ್ಜ್ ನಲ್ಲಿ ಕೊಠಡಿ ಪಡೆದು ಆತ್ಮಹತ್ಯೆ ಮಾಡಿಕೊಂಡಿರುವುದುಪ್ರಕರಣ ಬೆಳಕಿಗೆ ಬಂದಿದೆ.
ಪಟ್ಟಣದ ಐಡಿಎಫ್‌ಸಿ ಬ್ಯಾಂಕ್‌ನಲ್ಲಿ ವ್ಯವಸ್ಥಾಪಕರಾಗಿದ್ದ ಸಂತೋಷ್ ಕುಮಾರ್ (38) ಬ್ಯಾಂಕ್ ಮೇಲಂತಸ್ತಿನಲ್ಲಿದ್ದ ಲಾಡ್ಜ್‌ನ ಕೊಠಡಿಯಲ್ಲಿ ಸೋಮವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೈಸೂರು ಮೂಲದ ಸಂತೋಷ್ ಕುಮಾರ್ ಅವರು ಭಗೀರಥ ಲಾಡ್ಜ್‌ನಲ್ಲಿ ತಂಗಿದ್ದರು.ಸೋಮವಾರ ಮಧ್ಯಾಹ್ನ 2 ಗಂಟೆ ವೇಳೆಗೆ ಲಾಡ್ಜ್‌ಗೆ ಬಂದು ಕೊಠಡಿ ಪಡೆದಿದ್ದರು. ಕಳೆದ 8 ತಿಂಗಳ ಹಿಂದಷ್ಟೇ ಅವರ ವಿವಾಹವಾಗಿತ್ತು. ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದರು.
ಮೈಸೂರಿನ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು ಅವರು ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುವುದು ಎಂದು ಪಟ್ಟಣ ಪೊಲೀಸರು ತಿಳಿಸಿದರು.
0 Comments