ಚಿತ್ರದುರ್ಗ ನ.02:
ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಪರುಶುರಾಂಪುರ ಹೋಬಳಿ ಜಾಜೂರು ಎಸ್.ಸಿ. ಕಾಲೋನಿ ಗ್ರಾಮಕ್ಕೆ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರಯುವುದಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 1 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನ.
ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲಿರುವ ಜಾಜೂರು ಎಸ್.ಸಿ.ಕಾಲೋನಿಯಲ್ಲಿ 5 ಎಎವೈ, 145 ಪಿಹೆಚ್‍ಹೆಚ್ ಸೇರಿದಂತೆ ಒಟ್ಟು 150 ಪಡಿತರ ಚೀಟಿಗಳಿವೆ.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ಧೃಡೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿನದೊಳಗೆ, ಜಂಟಿ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ, ಚಿತ್ರದುರ್ಗ ಇವರಿಗೆ ಸಲ್ಲಿಸಲು ತಿಳಿಸಿದೆ.
ನಿಗಧಿತ ಅವಧಿಯ ನಂತರ ಸಲ್ಲಿಕೆಯಾಗುವ ಅಥವಾ ಬೇರೆ ಯಾವುದೇ ಕಚೇರಿಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗಧಿತ ಫಾರಂ “ಎ” ಅನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಅಥವಾ ಚಳ್ಳಕೆರೆ ತಾಲ್ಲೂಕು ಕಚೇರಿಯಲ್ಲಿ ಪಡೆಯಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಹೊಸ ನ್ಯಾಯಬೆಲೆ ಅಂಗಡಿಗೆ ಅರ್ಜಿ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments