ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ

by | 09/02/24 | ಸುದ್ದಿ

ನಾಯಕನಹಟ್ಟಿ. ಫೆ.09:
ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಹೋಬಳಿ ಮುಷ್ಟಲಗುಮ್ಮಿ ಹಾಗೂ ಗುಂತಕೋಲಮ್ಮನಹಳ್ಳಿ ಗ್ರಾಮಗಳಿಗೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 7 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲಿರುವ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಹೋಬಳಿ ಮುಷ್ಟಲಗುಮ್ಮಿ ಗ್ರಾಮದಲ್ಲಿ 88 ಎಎವೈ, 397 ಪಿಹೆಚ್‍ಹೆಚ್, 66 ಎನ್‍ಪಿಹೆಚ್ ಸೇರಿದಂತೆ ಒಟ್ಟು 551 ಪಡಿತರ ಚೀಟಿಗಳಿವೆ.
ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲಿರುವ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಹೋಬಳಿ ಗುಂತಕೋಲಮ್ಮನಹಳ್ಳಿ ಗ್ರಾಮದಲ್ಲಿ ಮೂಲ ನ್ಯಾಯಬೆಲೆ ಅಂಗಡಿಯ ಪಡಿತರ ಚೀಟಿಗಳನ್ನು ಹೊರತುಪಡಿಸಿ, ಹೊಸ ನ್ಯಾಯಬೆಲೆ ಅಂಗಡಿಗೆ ನಿಯೋಜಿಸಲು 09 ಎಎವೈ, 250 ಪಿಹೆಚ್‍ಹೆಚ್ ಸೇರಿದಂತೆ ಒಟ್ಟು 259 ಪಡಿತರ ಚೀಟಿಗಳಿವೆ.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ಧೃಡೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿನದೊಳಗೆ ಜಂಟಿ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ, ಚಿತ್ರದುರ್ಗ ಇವರಿಗೆ ಸಲ್ಲಿಸಲು ತಿಳಿಸಿದೆ. ನಿಗಧಿತ ಅವಧಿಯ ನಂತರ ಸಲ್ಲಿಕೆಯಾಗುವ ಅಥವಾ ಬೇರೆ ಕಚೇರಿಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ನಿಗಧಿತ ಅರ್ಜಿ “ಎ” ಅನ್ನು ಜಂಟಿ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಚಿತ್ರದುರ್ಗ ಕಚೇರಿಯಿಂದ ಅಥವಾ ಚಳ್ಳಕೆರೆ ತಾಲ್ಲೂಕು ಕಚೇರಿಯಲ್ಲಿ ಪಡೆಯಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
=========

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page