ಹಿರಿಯೂರು :
ಸಾರ್ವಜನಿಕರ ಸುರಕ್ಷತೆಗಾಗಿ ಹೋಟೆಲ್ ನ ಮಾಲೀಕರು ನಿಮ್ಮ ಹೋಟೆಲ್ ಗಳಲ್ಲಿ ಸ್ವಚ್ಛತೆ ಹಾಗೂ ಶುಚಿತ್ವವನ್ನು ಕಾಪಾಡಿಕೊಳ್ಳುವ ಮೂಲಕ ಹಸಿದು ಬರುವ ಜನರಿಗೆ ಮನೆಯ ರೀತಿಯಲ್ಲಿ ಶುಚಿ-ರುಚಿಯಾದ ಆಹಾರ ನೀಡಬೇಕು ಎಂಬುದಾಗಿ ನಗರಸಭೆ ಪೌರಾಯುಕ್ತರಾದ ಹೆಚ್.ಮಹಂತೇಶ್ ಹೇಳಿದರು.
ನಗರದ ವಿವಿಧ ಹೋಟೆಲ್ ಗಳಿಗೆ ನಗರಸಭೆ ಸಿಬ್ಬಂದಿಗಳೊಂದಿಗೆ ಭೇಟಿ ನೀಡಿ, ಸ್ವಚ್ಛತೆ ಹಾಗೂ ಶುಚಿತ್ವವನ್ನು ಪರಿಶೀಲಿಸಿ, ನಂತರ ಹೋಟೆಲ್ ಗಳ ಮಾಲೀಕರೊಂದಿಗೆ ಅವರು ಮಾತನಾಡಿದರು.
ನೂರಾರು ಜನ ಸಾರ್ವಜನಿಕರು ಊಟಕ್ಕಾಗಿ ನಿಮ್ಮ ಹೋಟೆಲ್ ಗಳಿಗೆ ಬರುತ್ತಾರೆ, ಅವರಿಗೆ ಉತ್ತಮ ಆಹಾರ ನೀಡುವುದು ನಿಮ್ಮ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಹೋಟೆಲ್ ಒಳಗೆ ಹಾಗೂ ಹೊರಗಡೆ ಸ್ವಚ್ಛತೆ ಹಾಗೂ ಶುಚಿತ್ವವನ್ನು ಕಾಪಾಡಿಕೊಳ್ಳುವ ಮೂಲಕ ಜನರ ಸುರಕ್ಷತೆಗೆ ಸಹಕರಿಸಬೇಕು ಎಂಬುದಾಗಿ ಹೇಳಿದರು.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತರಾದ ಹೆಚ್.ಮಹಂತೇಶ್, ನಗರಸಭೆ ಅಧಿಕಾರಿಗಳು ಹಾಗೂ ಹೋಟೆಲ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೋಟೆಲ್ ನ ಮಾಲೀಕರು ಸ್ವಚ್ಛತೆ ಹಾಗೂ ಶುಚಿತ್ವವನ್ನು ಕಾಪಾಡಿಕೊಳ್ಳಲು ಆಯುಕ್ತರಾದ ಮಹಂತೇಶ್ ಸೂಚನೆ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments