ಅಂಗನ್ಯೂನ್ಯತೆ ಎತ್ತಿಹಿಡಿಯುವ ಬದಲು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್

by | 03/12/23 | ಸುದ್ದಿ

ಚಳ್ಳಕೆರೆ ಡಿ.3 ಅಂಗವಿಲತೆ ಶಾಪವಲ್ಲ ಅಂತಹ ಮಕ್ಕಳಲ್ಲಿ ವಿಷೇಶ ಬುದ್ದಿ ಶಕ್ತಿ, ಕಛಶಲ್ಯವಿರುತ್ತದೆ ಅಂಗನ್ಯೂನ್ಯತೆ ಎತ್ತಿಹಿಡಿಯುವ ಬದಲು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ಹೇಳಿದರು.


ನಗರದ ಗಾಂಧಿನಗರದ ಸರಕಾರಿ ಹಿರಿಯಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆವತಿಯಿಂದ ಆಯೋಜಿಸಿದ್ದ ವಿಶ್ವ ವಿಕಲಚೇತನ ಮಕ್ಕಳ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಹುಟ್ಟು ಆಕಸ್ಮಿಕ, ಸಾವು ನಿಶ್ಚಿತ, ಈ ನಡುವೆ ಬರುವ ಸುಮಧುರ ಕ್ಷಣಗಳು ಅವಿಸ್ಮರಣೀಯವಾಗಿವೆ. ಸಾಮಾನ್ಯರಿಗಿಂತ ವಿಕಲಚೇತನರು ವಿಶ್ವಮಟ್ಟದಲ್ಲಿ ಅಸಾಮಾನ್ಯ ಸಾಧನೆ ಮಾಡಿದ ಉದಾಹರಣೆಗಳಿವೆ. ವಿಶ್ವದ ಶ್ರೇಷ್ಠ ವಿಜ್ಞಾನಿ ಐನ್ಸ್ಟಿನ್ ಅವರು ಕೂಡ ಒಬ್ಬ ವಿಕಲಚೇತನರು. ವಿಶ್ವ ಸಂಸ್ಥೆಯು 1992ರಿಂದ ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸಲು ವಿಶ್ವ ವಿಕಲಚೇತನರ ದಿನಾಚರಣೆ ಆಚರಿಸುತ್ತಿದೆ ಎಂದು ಹೇಳಿದರು.


ಪ್ರತಿಯೊಬ್ಬರು ಅರ್ಥಪೂರ್ಣ ಹಾಗೂ ಪರಿಪೂರ್ಣವಾಗಿ ಬದುಕು ನಡೆಸಬೇಕು. ಭೌದಿಕ ಹಾಗೂ ಭಾವನಾತ್ಮಕ ಬೆಸೆಯುವ ಕೆಲಸವಾಗಬೇಕು. ವಿಕಲಚೇತನ ಮಕ್ಕಳು ಜನಿಸಿದರೆಂದು ತಂದೆ-ತಾಯಿಗಳು ಕೊರಗದೆ ಅವರಿಗೆ ಸಮಾಜದಲ್ಲಿ ಉತ್ತಮ ವೇದಿಕೆ, ಕೌಶಲ್ಯ ನೀಡಬೇಕು. ಪ್ರತಿ ಹಂತದಲ್ಲಿ ಪೂರಕ ವ್ಯವಸ್ಥೆ ಕಲ್ಪಿಸಬೇಕು. ಅವರಿಗೆ ಅಭಿರುಚಿ ಇರುವ ಕ್ಷೇತ್ರದಲ್ಲಿ ಪ್ರೋತ್ಸಾಹ ನೀಡಿದಲ್ಲಿ ಅಸಮಾನ್ಯ ಸಾಧನೆ ಮಾಡುತ್ತಾರೆ.
ವಿಕಲ ಚೇತನ ಮಕ್ಕಳಿಗಾಗಿ ಸರಕಾರ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸಿ ಶಿಕ್ಷಣ , ಉದ್ಯೋಗ, ಸೇರಿದಂತೆ ಹಲವು ರಂಗಳಲ್ಲಿ ವಿಕಲಚೇತನಿರಿಗೆ ಮೀಸಲಾತಿ ನೀಡುತ್ತಿದ್ದೆ ಸ್ವವಲಂಭಿ ಜೀವನ ನಡೆಸಲು ಸಾಲಸೌಲಭ್ಯ , ವಾಹನ ಸೌಲಭ್ಯ ನೀಡಲಾಗುತ್ತಿದೆ ಇದನ್ನು ಸದ್ಬಳಕೆ ಮಾಡಿಕೊಂಡು ಗುಣ ಮಟ್ಟದ ಶಿಕ್ಷಣ ಪಡೆದು ಆರ್ಥಿಕವಾಗಿ ಮುಂದೆ ಬರುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಾಭಾರ ಬಿಆರ್ ಸಿ ತಿಪ್ಪೇಸ್ವಾಮಿ, ಬಿಆರ್ ಪಿ ಶಭಿನ ಕೌಸರ್ ಮಾತನಾಡಿದರು , ವಿಕಲ ಚೇತನ ನೋಡೆಲ್ ಅಧಿಕಾರಿ ರಾಮನಾಯ್ಕ, ಸಹ ಶಿಕ್ಷಕರು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.
ವಿಕಲಚೇತನರ ದಿನಾಚರಣೆ ಅಂಗವಾಗಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page