ಅಂತರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಕಳ್ಳಸಾಗಾಣಿಕೆ ವಿರೋದಿ ದಿನಾಚರಣೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ವಿಜಯ್ ಮಾದಕ ವಸ್ತುಗಳ ವ್ಯಸನ: ಯುವ ಜನತೆ ಜಾಗೃತಿ ವಹಿಸಿ

by | 26/06/24 | ಕಾನೂನು

ಚಿತ್ರದುರ್ಗ ಜೂನ್.26:
ಮಾದಕ ವಸ್ತುಗಳ ವ್ಯಸನ ಮತ್ತು ಕಳ್ಳ ಸಾಗಾಣಿಕೆಯನ್ನು ಯುವ ಜನತೆ ಜಾಗೃತಿ ವಹಿಸಿ ತಡೆಗಟ್ಟಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಹೇಳಿದರು.
ನಗರದ ಎಸ್‍ಜೆಎಂ ತಾಂತ್ರಿಕ ಮಹಾವಿದ್ಯಾಲಯದ ಸರ್‍ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಜಿಲ್ಲಾ ಪೆÇಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ವತಿಯಿಂದ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಾದಕ ವಸ್ತುಗಳ ವ್ಯಸನ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿ ವರ್ಷ ಜೂನ್ 26 ಅನ್ನು ವಿಶ್ವದಾದ್ಯಂತ ಅಂತರಾಷ್ಟ್ರೀಯ ಮಾದಕ ವಸ್ತುಗಳ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಮಾದಕ ವಸ್ತುಗಳ ವ್ಯಸನವು ಯುವ ಜನತೆಗೆ ಮಾರಕವಾಗಿದೆ. ಮಾದಕ ವಸ್ತುಗಳ ವ್ಯಸನ ಮತ್ತು ಕಳ್ಳ ಸಾಗಾಣಿಕೆಯನ್ನು ಯುವಜನರು ಜಾಗೃತ ವಹಿಸಿ ತಡೆಗಟ್ಟಬೇಕು ಎಂದು ಹೇಳಿದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಜೆ.ಕುಮಾರಸ್ವಾಮಿ ಮಾತನಾಡಿ, ಮಾದಕ ವಸ್ತುಗಳ ದುಷ್ಪರಿಣಾಮಗಳನ್ನು ತಡೆದು ಭವಿಷ್ಯ ರೂಪಿಸಿಕೊಳ್ಳಬೇಕು. ಪ್ರಪಂಚದ ದೊಡ್ಡ ಬಿಸಿನೆಸ್ ಗಳಲ್ಲಿ ಡ್ರಗ್ಸ ಮೊದಲನೆಯದಾಗಿದೆ, ಡ್ರಗ್ಸ್‍ನಿಂದ ಅಪರಾಧಗಳು ಪ್ರಾರಂಭವಾಗುತ್ತವೆ. ವ್ಯಸನಿಗಳಾಗುತ್ತಾರೆ ಎಂದು ತಿಳಿಸಿದ ಅವರು, ಒಳ್ಳೆಯ ಪ್ರಜೆಯಾಗಿ ಬಾಳಬೇಕು. ವಿದ್ಯಾರ್ಥಿಗಳು ಡ್ರಗ್ಸ್‍ನಿಂದ ದೂರವಿರಬೇಕು. ತಂದೆ ತಾಯಿಗೆ ಒಳ್ಳೆಯ ಮಕ್ಕಳಾಗಿ ಬಾಳಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಮಾತನಾಡಿ, ಮಾದಕ ವ್ಯಸನಕ್ಕೆ ಒಳಗಾದರೆ ಯುದ್ದವಿಲ್ಲದೇ ದೇಶ ಸರ್ವನಾಶವಾಗುತ್ತದೆ. ಮಾದಕ ವಸ್ತುಗಳು ಮನುಷ್ಯನ ದೇಹ ಮತ್ತು ಮನಸ್ಸು ಹಾಳು ಮಾಡುತ್ತದೆ. ಡ್ರಗ್ಸ್ ಮಾಫಿಯಾ ತಡೆಗಟ್ಟುವ ಸಾಮಾಜಿಕ ಜವಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಜಿ.ಓ.ನಾಗರಾಜ್ ಮಾತನಾಡಿ, ಕಾಲೇಜು, ಹಾಸ್ಟೆಲ್ ಯುವಕರಲ್ಲಿ ಮಾದಕ ವಸ್ತುಗಳ ವ್ಯಸನ ಹೆಚ್ಚಾಗುತ್ತಿದೆ. ಮಾನಸಿಕ ಆರೋಗ್ಯ ಕಾರ್ಯಕ್ರಮದಲ್ಲಿ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗಿ ಮಾದಕ ವಸ್ತುಗಳ ದಾಸರಾಗದಂತೆ ಮನೋವೈದ್ಯರಿಂದ ಮನೋಚೈತನ್ಯ ಶಿಬಿರಗಳಲ್ಲಿ ಚಿಕಿತ್ಸೆ ಮತ್ತು ಸಮಾಲೋಚನೆಯಿಂದ ಗುಣಪಡಿಸಬೇಕು. ಟೆಲಿಮಾನಸ 14416 ಉಚಿತ ಸಹಾಯವಾಣಿ ಸಂಖ್ಯೆಗೆ ಕರೆಮಾಡಿ ಚಿಕಿತ್ಸೆ, ಸಮಾಲೋಚನೆ ಪಡೆಯಬಹುದು ಎಂದು ಕೋರಿದರು.
ಮನೋವೈದ್ಯ ಡಾ.ಆರ್.ಮಂಜುನಾಥ್ ಉಪನ್ಯಾಸ ನೀಡಿದರು. ಎಸ್‍ಜೆಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಪಿ.ಬಿ.ಭರತ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ಬಿ.ಎಂ.ಅನಿಲ್ ಕುಮಾರ್, ಪ್ರಧಾನ ಕಾರ್ಯದರ್ಶಿ ಆರ್.ಗಂಗಾಧರ್, ಕಾಲೇಜಿನ ಎನ್‍ಎಸ್‍ಎಸ್ ಸಂಚಾಲಕ ಡಾ.ನಿರಂಜನ್, ತಾಲ್ಲೂಕು ಆರೋಗ್ಯಾಧಿಕಾರಿ ಎನ್.ಎಸ್.ಮಂಜುನಾಥ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ, ಕಾಲೇಜು ವಿದ್ಯಾರ್ಥಿಗಳು ಇದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page