ಆರೋಗ್ಯ ಇಲಾಖೆ ಹಾಗೂ ನಗರಸಭೆವತಿಯಂದ ಡೆಂಗ್ಯೂ ಜಾಗೃತಿ.

by | 19/07/24 | ಆರೋಗ್ಯ


ಚಳ್ಳಕೆರೆ ಜು.19ಡೆಂಘಿ ಜಾಗೃತಿ
ಆರೋಗ್ಯ ಇಲಾಖೆ ಮತ್ತು ನಗರಸಭೆ ಚಳ್ಳಕೆರೆ ಇವರ ಸಹಭಾಗಿತ್ವದಲ್ಲಿ ಸ್ಪೆಷಲ್ ಲಾರ್ವ ಸಮೀಕ್ಷೆಯನ್ನು ಚಳ್ಳಕೆರೆ ನಗರದಲ್ಲಿ ಹಮ್ಮಿಕೊಳ್ಳಲಾಯಿತು ಈ ಸರ್ವೆಯಲ್ಲಿ 150 ಜನ ಆಶಾ ಕಾರ್ಯಕರ್ತೆಯರು 30 ಜನ ಮೇಲ್ವಿಚಾರಕರು ಭಾಗವಹಿಸಿದ್ದರು ಈ ಕಾರ್ಯಕ್ರಮದ ಚಾಲನೆಯನ್ನು ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ತಿಪ್ಪೇಸ್ವಾಮಿ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಗಣೇಶ್ ನಗರಸಭೆ ಮತ್ತು ಸಾರ್ವಜನಿಕ ಆಸ್ಪತ್ರೆಯ ಮಂಜುಳಮ್ಮ ರವರು ಚಾಲನೆ ನೀಡಿದರು ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತರು ಮನೆಮನೆ ಭೇಟಿ ನೀಡಿ ಲಾರ್ವ ಸಮೀಕ್ಷೆ ಮಾಡುತ್ತಾರೆ ಹಾಗೂ ಈ ಕೆಳಕಂಡ ಆರೋಗ್ಯ ಶಿಕ್ಷಣವನ್ನು ನೀಡುತ್ತಾರೆ
ಡೆಂಘಿ ಮಾರಣಾಂತಿಕ ಖಾಯಿಲೆಯಾಗಿದ್ದು, ಪರಿಪೂರ್ಣ ಚಿಕಿತ್ಸೆ ಸದ್ಯಕ್ಕೆ ಲಭ್ಯವಿಲ್ಲ. ಇದನ್ನು ಹರಡದಂತೆ ತಡೆಗಟ್ಟುವುದು, ಬಾರದಂತೆ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಈಗ ಇರುವ ಸೂಕ್ತ ಮಾರ್ಗಗಳಾಗಿವೆ.


ಡೆಂಘಿ ಈಡೀಸ್ ಸೊಳ್ಳೆಯಿಂದ ಹರಡುತ್ತದೆ. ಇದು ಹಗಲಿನ ವೇಳೆ ಮನುಷ್ಯನಿಗೆ ಕಚ್ಚಿ ಡೆಂಘಿಯನ್ನು ಹರಡುತ್ತದೆ. ಈ ಸೊಳ್ಳೆಗಳ ಉತ್ಪತ್ತಿ ಸ್ಥಾನ ನಿಂತ ನೀರು, ಮನೆಯ ಸುತ್ತಮುತ್ತ ನೀರು ನಿಲ್ಲದಂತೆ, ಹಳೆಯ ಟೈರು, ತೆಂಗಿನಸಿಪ್ಪೆ, ತೆರೆದ ತೊಟ್ಟಿ ಇತ್ಯಾದಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಿ. ಮನೆಯಲ್ಲಿ ನೀರು ಸಂಗ್ರಹಿಸುವುದಾದರೆ ಮುಚ್ಚಿದ ಪಾತ್ರೆಗಳಲ್ಲಿ ನೀರನ್ನು ಸಂಗ್ರಹಿಸಿ. ಪೂರ್ತಿ ದೇಹ ಮುಚ್ಚುವಂತೆ ತುಂಬುತೋಳಿನ ಬಟ್ಟೆಗಳನ್ನು ಧರಿಸಿ. ಹಗಲಿನಲ್ಲಿ ಮಲಗುವುದಾದರೆ ಸೊಳ್ಳೆ ಪರದೆಗಳನ್ನು ಬಳಸಿ. ಕಿಟಕಿಗಳಿಗೆ ಸೊಳ್ಳೆ ಬಾರದಂತೆ ಜಾಲರಿಗಳನ್ನು ಅಳವಡಿಸಿ.

ಡೆಂಘಿ ಲಕ್ಷಣಗಳಾದ ತೀವ್ರ ಜ್ವರ, ತಲೆನೋವು, ಮೈಕೈ ನೋವು, ವಾಂತಿ, ದೇಹದಲ್ಲಿ ರಕ್ತ ಹೆಪ್ಪುಗಟ್ಟಿದ ಕಲೆಗಳು, ಸುಸ್ತು ಕಂಡುಬಂದರೆ ತಕ್ಷಣ ಹತ್ತಿರದ ವೈದ್ಯರನ್ನು ಸಂಪರ್ಕಿಸಿ.

ಮನೆಯ ಒಳಗಡೆ ಸೊಳ್ಳೆ ಇರದಂತೆ ಲವಂಗ, ಕರ್ಪೂರ, ಬೆಳ್ಳುಳ್ಳಿ ಸಿಪ್ಪೆ, ಬೇವಿನಸೊಪ್ಪು ಇವುಗಳನ್ನು ಬಳಸಿ ಪ್ರತಿದಿನ ಮುಂಜಾನೆ ಮತ್ತು ಸಂಜೆ ಎರಡು ಬಾರಿ ಧೂಪವನ್ನು ಹಾಕಿ.

ಮನೆಯ ಒಳಗಡೆ ಹೊಂಗೆ ಎಣ್ಣೆ, ಸಾಸಿವೆ ಎಣ್ಣೆ ದೀಪ ಹಚ್ಚಿಡಿ. ಈ ಕ್ರಮಗಳು ಮನೆ ಒಳಗಡೆ ಸೊಳ್ಳೆಗಳು ಇರದಂತೆ ತಡೆಗಟ್ಟುತ್ತವೆ.

ಮನೆಯ ಸುತ್ತಮುತ್ತ ಕೈತೋಟದಲ್ಲಿ ಸೊಳ್ಳೆಗಳನ್ನು ವಿಕರ್ಷಿಸುವ ಚಂಡು ಹೂವು, ಪುದೀನಾ, ನಾಗದಾಳಿ, ದವನ, ತುಳಸಿ, ಕಾಮಕಸ್ತೂರಿ ಗಿಡಗಳನ್ನು ಬೆಳಸಿ.

ಖಾಯಿಲೆ ಯಾವುದೇ ಇರಲಿ, ರೋಗಾಣು ಯಾವುದೇ ಇರಲಿ ರೋಗ ಬರದಂತೆ ತಡೆಯುವ ರೋಗನಿರೋಧಕ ಶಕ್ತಿಯನ್ನು ಉತ್ತಮ ಆಹಾರ, ವಿಹಾರ, ಜೀವನ ಶೈಲಿ, ಯೋಗ, ಧ್ಯಾನ, ಪ್ರಾಣಾಯಾಮ ಇವುಗಳನ್ನು ರೂಡಿಸಿಕೊಂಡು ಹೆಚ್ಚಿಸಿಕೊಳ್ಳಿ

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page