ಉತ್ತಮ ಚಟುವಟಿಕೆ ಮೂಲಕ ಮೆದುಳು ಆರೋಗ್ಯ ಸುಧಾರಿಸಿ -ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ

by | 22/07/24 | ಆರೋಗ್ಯ


ಚಿತ್ರದುರ್ಗ. ಜುಲೈ.22:
ಉತ್ತಮ ಚಟುವಟಿಕೆಗಳ ಮೂಲಕ ಮೆದುಳು ಆರೋಗ್ಯವನ್ನು ಸುಧಾರಿಸಿಕೊಳ್ಳಬೇಕು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಹೇಳಿದರು.
ನಗರದ ಜಿಲ್ಲಾ ಆಸ್ಪತ್ರೆಯ ಬಿ.ಸಿ.ರಾಯ್ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಮತ್ತು ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮೆದುಳು ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಹೃದಯ, ಕಿಡ್ನಿ ಮತ್ತು ದೈಹಿಕ ಕಾಯಿಲೆಗಳ ಕಾರ್ಯಕ್ರಮಗಳಂತೆ ಈಚೆಗೆ ಮೆದುಳು ಆರೋಗ್ಯ ಕಾರ್ಯಕ್ರಮವು ಪ್ರಾರಂಭಿಸಿರುವುದು ಎಲ್ಲರೂ ಮಾನಸಿಕವಾಗಿ ಆರೋಗ್ಯವಾಗಿರಬೇಕು. ಒತ್ತಡದ ಜೀವನದಲ್ಲಿ ನಾವೆಲ್ಲರೂ ಆಧುನಿಕ ಸಾಧನ ಸಲಕರಣೆಗಳಾದ ಮೊಬೈಲ್ ಫೋನ್, ಇಂಟರ್ನೆಟ್, ಲ್ಯಾಪ್‍ಟ್ಯಾಪ್, ಯೂಟ್ಯೂಬ್ ಸೇರಿದಂತೆ ಮೊದಲಾದ ಸಾಮಾಜಿಕ ಜಾಲತಾಣಗಳಿಗೆ ಅಡಿಕ್ಟ್ ಆಗಿದ್ದೇವೆ. ಅವುಗಳಿಂದ ಹೊರಬಂದು ದೈಹಿಕ ವ್ಯಾಯಾಮ ಮನೋರಂಜನ ಕಾರ್ಯಕ್ರಮಗಳು ಮೊದಲಾದ ಉತ್ತಮ ಚಟುವಟಿಕೆಗಳ ಮೂಲಕ ಮೆದುಳು ಆರೋಗ್ಯ ಸುಧಾರಿಸಿಕೊಂಡು, ಮೆದುಳು ಆರೋಗ್ಯದ ಬಗ್ಗೆ ಜಾಗೃತಿ ವಹಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಟಾನಾಧಿಕಾರಿ ಡಾ.ಜಿ.ಓ.ನಾಗರಾಜ್ ಮಾತನಾಡಿ, ಜಿಲ್ಲೆಯಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಜೊತೆಯಲ್ಲಿ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮ ಪ್ರಾರಂಭವಾಗಿದೆ. ಮನುಷ್ಯನಿಗೆ ದಿನನಿತ್ಯದ ಕಾರ್ಯ ಚಟುವಟಿಕೆಗಳಿಗೆ ಮೆದುಳು ಆರೋಗ್ಯವು ಬಹು ಮುಖ್ಯ. ವಿಶೇಷವಾಗಿ ಮೆದುಳು ಆರೋಗ್ಯದಲ್ಲಿ ಡಿಮೆನ್ಷಿಯ, ಪಾಶ್ರ್ವವಾಯು, ತಲೆನೋವು, ಅಪಸ್ಮಾರ ಮತ್ತು ಮೂರ್ಛೆರೋಗಗಳನ್ನು ಒಳಗೊಂಡಿದೆ ಎಂದರು.
ನಿತ್ಯವೂ ವ್ಯಾಯಾಮ ಯೋಗ ಮತ್ತು ಧ್ಯಾನ ಮನೋರಂಜನ ಕಾರ್ಯಕ್ರಮಗಳು ಮೊದಲಾದವುಗಳ ಮೂಲಕ ದೈಹಿಕವಾಗಿ ಶ್ರಮವಹಿಸುವುದರ ಮೂಲಕ ಮೆದುಳು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಯ ನರರೋಗ ತಜ್ಞ ಡಾ.ಆರ್.ಕಿರಣ್ ಗೌಡ ಉಪನ್ಯಾಸ ನೀಡಿ, ಮೆದುಳು ಆರೋಗ್ಯ ಬಗ್ಗೆ ಜಾಗೃತಿ ವಹಿಸಬೇಕು. ಮೂರ್ಚಿ ರೋಗದಂತಹ ಕಾಯಿಲೆಗಳಲ್ಲಿ ಹಲವಾರು ಲಕ್ಷಣಗಳಿವೆ. ಬಾಯಲ್ಲಿ ನೊರೆ ಬರುವುದು, ಪ್ರಜ್ಞೆ ತಪ್ಪಿ ಬೀಳುವುದು ಸ್ವಲ್ಪ ಸಮಯ ಒಂದೇ ಬಂಗಿಯಲ್ಲಿರುವುದು, ಕಣ್ಣುಗಳು ಬಾಯಿ ಕೈಕರಗಳು ಚಲನೆ ಇಲ್ಲದಿರುವುದು ಮುಂತಾದ ಲಕ್ಷಣಗಳು ಇರುತ್ತವೆ. ಅದಕ್ಕೆ ನಾವು ನೋವು ನಿವಾರಕ ಮಾತ್ರೆಗಳನ್ನು ಸೇವಿಸಬಾರದು ಆಂಟಿ ಎಪಿಲೆಫ್ಟಿಕ್ ಮಾತ್ರೆಗಳನ್ನು ವೈದ್ಯರಿಂದ ಪಡೆದು ಗುಣಮುಖರಾಗಬೇಕು. ಅದೇ ರೀತಿ ಪಾಶ್ರ್ವ ವಾಯು ಆದಾಗ ತಲೆನೋವು ಬಂದಂತಹ ಸಂದರ್ಭದಲ್ಲಿ ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಳ್ಳಬಾರದು ಪಿಜೆಷನ್ ಅಥವಾ ನರರೋಗ ತಜ್ಞರಿಂದ ಸೂಕ್ತ ಚಿಕಿತ್ಸೆ ಪಡೆದು ಗುಣಮುಖರಾಗಬೇಕು. ದೈಹಿಕ ಚಟುವಟಿಕೆಗಳು ವ್ಯಾಯಾಮ, ವಾಕಿಂಗ್, ಯೋಗ ಮತ್ತು ದ್ಯಾನ, ಸರಿಯಾದ ನಿದ್ರೆ ಇವುಗಳ ಮೂಲಕ ಮೆದುಳು ಆರೋಗ್ಯಕರವಾಗಿ ಇರಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿಶ್ವ ಮೆದುಳು ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾಕ್ಕೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಹಾಗೂ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಟಾನಾಧಿಕಾರಿ ಡಾ.ಜಿ.ಓ.ನಾಗರಾಜ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಬಿ.ವಿ. ಗಿರೀಶ್ ಚಾಲನೆ ನೀಡಿದರು
ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಬಿ.ವಿ.ಗಿರೀಶ್, ಎಬಿಆರ್‍ಕೆ ಸಮಾಲೋಚಕ ಡಾ.ಚಂದ್ರಶೇಖರ್ ರಾಜು, ಪಿಜಿ ವೈದ್ಯರಾದ ಡಾ.ಪ್ರಮೋದ್ ಭಟ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ, ಕ್ಲಿನಿಕಲ್ ಸೈಕಲಾಜಿಸ್ಟ್ ಶ್ರೀಧರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವೈ.ತಿಪ್ಪೇಶ್, ಪ್ರವೀಣ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಸುನೀತಾ ರಶ್ಮಿ., ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ. ಜಾನಕಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page