ಕೆರೆಗೆ ಕೊಳಚೆ ನೀರು ಹರಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಸಚುವ ಈಶ್ವರ ಖಂಡ್ರೆ ಬೆಂಗಳೂರು ಬೆಳ್ಳಂದೂರು ಕೆರೆಗೆ ಪರಿಸರ ಸಚಿವರ ಭೇಟಿ

by | 31/05/23 | ಕರ್ನಾಟಕ


ಬೆಂಗಳೂರು : ಕೊಳಚೆ ನೀರು ಸೇರ್ಪಡೆಯಿಂದ ಶಾಪಗ್ರಸ್ತವಾಗಿರುವ ಬೆಂಗಳೂರಿನ ಬೆಳ್ಳಂದೂರು ಕೆರೆಗೆ ಸಂಸ್ಕರಿಸದೆ ತ್ಯಾಜ್ಯಜಲ ಹರಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.

ಇಂದು ಬೆಳ್ಳಂದೂರು ಕೆರೆಗೆ ಭೇಟಿ ನೀಡಿ ಖುದ್ದು ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಪ್ರಸ್ತುತ 14 ತ್ಯಾಜ್ಯ ಜಲ ಸಂಸ್ಕರಣೆ ಘಟಕ (ಎಸ್.ಟಿ.ಪಿ.) ಕಾರ್ಯ ನಿರ್ವಹಿಸುತ್ತಿದ್ದು, ಇವುಗಳ ಸಾಮರ್ಥ್ಯ 560 ಎಂ.ಎಲ್.ಡಿ. ಆಗಿದೆ. ಈ ಪೈಕಿ 5ನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ನಿರ್ದೇಶನದಂತೆ ತ್ಯಾಜ್ಯ ಜಲ ಸಂಸ್ಕರಣೆ ಘಟಕ (ಎಸ್.ಟಿ.ಪಿ)ಗಳ ನಿರ್ಮಾಣ ಕಾಮಗಾರಿಯನ್ನು ತ್ವರಿತಗೊಳಿಸುವಂತೆ ಸೂಚಿಸಿದರು.

ಬೆಂಗಳೂರಿನಲ್ಲಿರುವ ಎಲ್ಲ ಕೆರೆಗಳ ನೀರು ಕುಡಿಯಲು ಯೋಗ್ಯವಾದರೆ, ನೀರಿನ ಸಮಸ್ಯೆ ಪರಿಹರಿಸಬಹುದು, ಆದರೆ ಹೆಚ್ಚುತ್ತಿರುವ ಜನಸಂಖ್ಯೆ, ಅನಧಿಕೃತವಾಗಿ ತಲೆಎತ್ತುತ್ತಿರುವ ಕಟ್ಟಡಗಳು, ಒತ್ತುವರಿಯ ಪರಿಣಾಮವಾಗಿ ದೊಡ್ಡ ಪ್ರಮಾಣದಲ್ಲಿ ಘನಮತ್ತು ದ್ರವ ತ್ಯಾಜ್ಯ ಕೆರೆಗಳನ್ನು ಮತ್ತು ಜಲ ಮೂಲಗಳನ್ನು ಸೇರುತ್ತಿವೆ. ಇದನ್ನು ನಿಯಂತ್ರಿಸುವ ಗುರುತರ ಜವಾಬ್ದಾರಿ ಇದ್ದು, ಜಲ ಕಾಯಿದೆಯ ರೀತ್ಯ ತ್ಯಾಜ್ಯ ಹರಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಐಟಿ, ಬಿಟಿ ನಗರಿಯಾದ ಬೆಂಗಳೂರಿನತ್ತ ಇಡೀ ವಿಶ್ವವೇ ತಿರುಗಿ ನೋಡುತ್ತಿದೆ. ಹೀಗಾಗಿ ರಾಜ್ಯದ ಅಭಿವೃದ್ಧಿಗೆ ಬೆಂಗಳೂರು ಅಭಿವೃದ್ಧಿ ಆಗಲೇಬೇಕು. ಬೆಂಗಳೂರಿನ ಜನಸಂಖ್ಯೆಗೆ ಶುದ್ಧ ಕುಡಿಯುವ ನೀರು ಪೂರೈಕೆಯೂ ಸವಾಲಾಗಿದೆ. ಮುಂದಿನ ದಿನಗಳಲ್ಲಿ ಜಲ ಕ್ಷಾಮ ತಲೆದೋರುವ ಸಾಧ್ಯತೆಯೂ ಇದ್ದು, ಭವಿಷ್ಯದ ದೃಷ್ಟಿಯಿಂದ ಉಳಿದಿರುವ ಎಲ್ಲ ಕೆರೆಗಳ ಸಂರಕ್ಷಣೆ ನಮ್ಮ ಹೊಣೆಯಾಗಿದೆ. ಈ ಕೆರೆಗಳಿಗೆ ತ್ಯಾಜ್ಯ ಜಲ ಸೇರದಂತೆ ಪರಿಸರ ಮಾಲಿನ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.

2017ರಲ್ಲಿ ಬೆಳ್ಳಂದೂರು ಕೆರೆಯಲ್ಲಿ ನೊರೆ ಉಕ್ಕಿ ಹರಿದಿದ್ದಷ್ಟೇ ಅಲ್ಲದೆ, ಬೆಂಕಿಯ ಜ್ವಾಲೆ ಕಾಣಿಸಿಕೊಂಡು ದೊಡ್ಡ ಸುದ್ದಿಯಾಗಿತ್ತು. ಆಗ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು. ಮಂಡಳಿಯು ರಾಜ್ಯ ಸರ್ಕಾರದ 5 ಇಲಾಖೆಗಳಿಗೆ ನಿರ್ದೇಶನ ನೀಡಿದೆ. ತಮ್ಮ ಸಚಿವಾಲಯದ ವ್ಯಾಪ್ತಿಯಲ್ಲಿ ಬರುವ ಅರಣ್ಯ ಮತ್ತು ಪರಿಸರ ಇಲಾಖೆ ಈ ನಿಟ್ಟಿನಲ್ಲಿ ಮಾಲಿನ್ಯ ತಡೆಗೆ ತನ್ನ ಪಾಲಿನ ಕರ್ತವ್ಯವನ್ನು ಯಾವುದೇ ಲೋಪಕ್ಕೆ ಆಸ್ಪದವಿಲ್ಲದಂತೆ ನಿರ್ವಹಿಸಬೇಕು. ಯಾರೇ ಕೆರೆಗೆ ತ್ಯಾಜ್ಯ ತಂದು ಸುರಿದರೆ, ರಾಸಾಯನಿಕ ಮತ್ತು ಸಂಸ್ಕರಿಸದ ತ್ಯಾಜ್ಯವನ್ನು ನೇರವಾಗಿ ಹರಿಯಬಿಟ್ಟರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುವಂತೆ ಸೂಚಿಸಿದರು.

ಬೆಂಗಳೂರಿನ ಯಾವುದೇ ಕೆರೆಯಲ್ಲಿ ಇಂತಹ ಪರಿಸ್ಥಿತಿ ನಿರ್ಮಾಣವಾಗದಂತೆ ಎಚ್ಚರ ವಹಿಸಬೇಕು, ಕೆರೆಯಲ್ಲಿ ತ್ಯಾಜ್ಯ ಸುರಿಯದಂತೆ ನೋಡಿಕೊಳ್ಳಬೇಕು ಎಂದರು.
ರಾತ್ರಿಯ ವೇಳೆ ಮಾತ್ರ ಕೊಳಚೆ ಸ್ಥಳಾಂತರಿಸುವುಜು ಸೂಕ್ತ ಎಂಬ ಅಭಿಪ್ರಾಯವಿದೆ. ಹೀಗಾಗಿ ಹೆಚ್ಚುವರಿ ವಾಹನ ಬಳಕೆ ಮಾಡಿ ಕಾಮಗಾರಿ ಶೀಘ್ರ ಮುಗಿಸಿ, ಕೆರೆ ಪುನಶ್ಚೇತನ ಮಾಡಿದರೆ ಒಳಿತಾಗುತ್ತದೆ ಎಂದರು.

ಹೊಸ ಎಸ್.ಟಿ.ಪಿ.ಗಳ ನಿರ್ಮಾಣದ ಜೊತೆಗೆ ಹಳೆಯ 5 ಎಸ್.ಟಿ.ಪಿ.ಗಳನ್ನು ಮೇಲ್ದರ್ಜೆಗೇರಿಸುವ ಕಾರ್ಯ ನಡೆಯುತ್ತಿದೆ. ಮುಂದಿನ 10 ವರ್ಷಗಳ ಅವಧಿಗೆ ಅಗತ್ಯವಾದ ಎಸ್.ಟಿ.ಪಿ.ಗಳ ನಿರ್ಮಾಣವೂ ಆಗಬೇಕು. ಕೆಲಸ ಅರ್ಧಕ್ಕೆ ನಿಂತರೆ ಮಾಡಿದ ಹಣವೂ ವ್ಯರ್ಥವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ನೋಟಿಸ್ ಜಾರಿ:

ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಕುಡಿದು ಮಗು ಮೃತಪಟ್ಟು ಹಲವರು ಆಸ್ಪತ್ರೆಗೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ. ಜೀವ ಜಲ ವಿಷವಾದರೆ ಬದುಕುವುದು ಹೇಗೆ. ಇಂತಹ ನಿರ್ಲಕ್ಷ್ಯ ತಾಳುವ ಅಧಿಕಾರಿ ಎಷ್ಟೇ ದೊಡ್ಡವರಾದರೂ, ಪ್ರಭಾವಿಯಾದರೂ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದೂ ತಿಳಿಸಿದರು.

ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ತಿಮ್ಮಯ್ಯ, ಪ್ರಧಾನ ಕಾರ್ಯದರ್ಶಿ ವಿಜಯ ಮೋಹನ್ ರಾಜ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page