ಜನಸ್ಪಂದನ ಕಾರ್ಯಕ್ರಮಕ್ಕೆ ಸುಮಾರು ನಾಲ್ಕೈದು ಸಾವಿರ ಜನರು ತಮ್ಮ ಅಹವಾಲುಗಳೊಂದಿಗೆ ಆಗಮಿಸಿದ್ದಾರೆ, ಜನರು ನಮ್ಮ ಸರ್ಕಾರದ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸುವ ಪ್ರಯತ್ನ ಮಾಡಲಾಗಿದೆ. ಸಿ.ಎಂ ಸಿದ್ದರಾಮಯ್ಯ.

by | 27/11/23 | ಕರ್ನಾಟಕ

ಬೆಂಗಳೂರು ಮುಖ್ಯಮಂತ್ರಿ Siddaramaiah ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿ, ಜನರ ಅಹವಾಲು ಆಲಿಸಿ ನಂತರ ಮಾಧ್ಯಮದವರ ಜೊತೆ ಮಾತನಾಡಿದರು.

ಜನಸ್ಪಂದನ ಕಾರ್ಯಕ್ರಮಕ್ಕೆ ಸುಮಾರು ನಾಲ್ಕೈದು ಸಾವಿರ ಜನರು ತಮ್ಮ ಅಹವಾಲುಗಳೊಂದಿಗೆ ಆಗಮಿಸಿದ್ದಾರೆ, ಜನರು ನಮ್ಮ ಸರ್ಕಾರದ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸುವ ಪ್ರಯತ್ನ ಮಾಡಲಾಗಿದೆ.
ಜನರ ಸಮಸ್ಯೆಗೆ ಪರಿಹಾರ ಒದಗಿಸುವ ಜನಸ್ಪಂದನೆ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರು. ಸುಮಾರು 3500 ಮನವಿಗಳು ಸ್ವೀಕೃತವಾಗಿದೆ. ನಾನು ಬೆಳಿಗ್ಗೆಯಿಂದಲೇ ಜನರ ಬಳಿಗೆ ತೆರಳಿ ಅವರ ಕುಂದುಕೊರತೆಗಳನ್ನು ಖುದ್ದು ಆಲಿಸಿದ್ದೇನೆ. ಸ್ವೀಕೃತವಾಗಿರುವ ಎಲ್ಲ ಅರ್ಜಿಗಳ ಬಗ್ಗೆ ಕಾನೂನು ರೀತ್ಯ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.

ಇಂದಿನ ಜನಸ್ಪಂದನಕ್ಕೆ ಉದ್ಯೋಗ ಬೇಡಿಕೆಯೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನರು ಆಗಮಿಸಿದ್ದು, ಸಾಧ್ಯವಾದ ಕಡೆಗಳಲ್ಲಿ ಉದ್ಯೋಗ ಹಾಗೂ ಮಾಸಾಶನ ಒದಗಿಸಲು ಸೂಚನೆ ನೀಡಲಾಗಿದೆ. ಜಿಲ್ಲಾ ಮಂತ್ರಿಗಳು, ಜಿಲ್ಲಾಧಿಕಾರಿಗಳು ಸ್ಥಳೀಯವಾಗಿ ಜನರ ಸಮಸ್ಯೆ ಬಗೆಹರಿಸಬೇಕೆಂದು ಸೂಚನೆ ನೀಡಲಾಗಿದೆ. ಮೂರು ತಿಂಗಳ ನಂತರ ಮತ್ತೊಮ್ಮೆ ಜನಸ್ಪಂದನ ನಡೆಸಲಾಗುವುದು. ಆಗ ಈ ಪ್ರಮಾಣದಲ್ಲಿ ಜನರು ತಮ್ಮ ಸಮಸ್ಯೆಗಳೊಂದಿಗೆ ಬರದಂತೆ ಜಿಲ್ಲಾಧಿಕಾರಿಗಳು ತಹಶೀಲ್ದಾರರು, ಉಪವಿಭಾಗಾಧಿಕಾರಿಗಳು ನೋಡಿಕೊಳ್ಳಬೇಕು ಎಂಬ ಎಚ್ಚರಿಕೆಯನ್ನು ನೀಡಲಾಗಿದೆ.

ಕ್ಯಾನ್ಸರ್, ಕಿಡ್ನಿ, ಹೃದಯ ಸಂಬಂಧಿ ಸಮಸ್ಯೆ ಸೇರಿದಂತೆ ಆರೋಗ್ಯ ಸಮಸ್ಯೆಯಿಂದಾಗಿ ವೈದ್ಯಕೀಯ ವೆಚ್ಚ ಭರಿಸುವ ಮನವಿಗಳು ಹೆಚ್ಚು ಸ್ವೀಕೃತವಾಗಿವೆ. ನಾನು ಮುಖ್ಯಮಂತ್ರಿಯಾದ ನಂತರ ಜನರ ಆರೋಗ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಸುಮಾರು 25 ಕೋಟಿ ರೂ.ಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಬಿಡುಗಡೆ ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ಲಭಿಸುತ್ತದೆ ಎಂಬ ನಂಬಿಕೆಯಿಂದ ಜನರು ಸರ್ಕಾರಿ ಆಸ್ಪತ್ರೆ ಬಿಟ್ಟು, ಖಾಸಗಿ ಆಸ್ಪತ್ರೆಯತ್ತ ಮುಖ ಮಾಡುವ ಕಾರಣ, ಅವರ ವೈದ್ಯಕೀಯ ವೆಚ್ಚಗಳೂ ಹೆಚ್ಚಾಗುತ್ತವೆ. ಆ ವೆಚ್ಚದಲ್ಲಿ ಸಣ್ಣಪ್ರಮಾಣವನ್ನು ಸರ್ಕಾರ ಈ ರೀತಿ ಭರಿಸಲು ಪ್ರಯತ್ನಿಸುತ್ತದೆ.

ಮಕ್ಕಳ ಪೌಷ್ಟಿಕಾಂಶ ಸಮಸ್ಯೆಗಳ ಬಗ್ಗೆ ಇಂದು ಅಹವಾಲುಗಳ ಬಂದಿವೆ, ಮಕ್ಕಳ ಪೌಷ್ಠಿಕಾಂಶ ವೃದ್ಧಿಸುವ ಸರ್ಕಾರದ ವಿವಿಧ ಕಾರ್ಯಕ್ರಮಗಳಿಗೆ 185 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. ಅನೀಮಿಯಾ ಇರುವ ಮಕ್ಕಳಿಗೆ ಔಷಧಿ, ಶಾಲಾಮಕ್ಕಳಿಗೆ ವಾರದಲ್ಲಿ 2 ದಿನ ಮೊಟ್ಟೆ, ಪ್ರತಿದಿನವು ಹಾಲು, ಬಿಸಿಯೂಟಗಳನ್ನು ನೀಡಲಾಗುತ್ತಿದೆ.

ಶಕ್ತಿ ಯೋಜನೆ ಅಭೂತಪೂರ್ವ ಯಶಸ್ವಿಯಾದರೂ, ಕೆಲವೆಡೆ ಬಸ್ ಕೊರತೆಯಿಂದ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈಗಾಗಲೇ 971 ಬಸ್ಸಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. ಅಗತ್ಯವಿರುವೆಡೆ ಹೆಚ್ಚು ಬಸ್ ಗಳನ್ನು ಹಾಕಲು ತಿಳಿಸಲಾಗಿದೆ.

#ಜನತಾದರ್ಶನ #ಜನಸ್ಪಂದನ

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page