ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ಬಾಲ ಗರ್ಭಿಣಿ ಪ್ರಕರಣ : ಎಂ.ಎಲ್.ಸಿ ಹಾಗೂ ಎಫ್.ಐ.ಆರ್ ಕೈಗೊಳ್ಳಲು ಸೂಚನೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

by | 22/07/24 | ಸುದ್ದಿ


ಚಿತ್ರದುರ್ಗ ಜು 22:
ಆಸ್ಪತ್ರೆಗಳಲ್ಲಿ ಬಾಲ ಗರ್ಭಿಣಿ ಪ್ರಕರಣ ಪತ್ರೆಯಾದ ತಕ್ಷಣವೇ ಎಂ.ಎಲ್.ಸಿ (ಮೆಡಿಕೋ ಲೀಗಲ್ ಕೇಸ್) ಮಾಡಿ ಎಫ್.ಐ.ಆರ್. ದಾಖಲಿಸಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.
ಜುಲೈ 08 ಮತ್ತು 09 ರಂದು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಗಳ ಸಮ್ಮೇಳನದಲ್ಲಿ ಚರ್ಚಿಸಲಾದ ವಿಷಯಗಳ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ವಿವಿಧ ಇಲಾಖೆಗಳ ಅನುಪಾಲನಾ ಸಭೆ ನಡೆಸಿ ಅವರು ಮಾತನಾಡಿದರು.
2022-23ನೇ ಸಾಲಿನಲ್ಲಿ ಬೆಳಕಿಗೆ ಬಂದ 806 ಬಾಲ ಗರ್ಭಿಣಿಯರ ಪ್ರಕರಣಗಳಲ್ಲಿ ಸಂಬಂಧಪಟ್ಟ ವೈದ್ಯಾಧಿಕಾರಿಗಳು ಏಕೆ ಎಂ.ಎಲ್.ಸಿ ಮಾಡಿಲ್ಲ? ಆರ್.ಸಿ.ಹೆಚ್. ತಂತ್ರಾಂಶದಲ್ಲಿ ನೋಂದಣಿ ಮಾಡಿದರೆ ಮಾತ್ರ ಸಾಲದು. ಮೊದಲ ಹಂತದಲ್ಲಿ ಎಂ.ಎಲ್.ಸಿ ಮಾಡಿದರೆ, ಪೊಲೀಸ್ ಇಲಾಖೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳುವುದು. ಬಾಲ ಗರ್ಭಿಣಿ ಪ್ರಕರಣಗಳಲ್ಲಿ ಎಂ.ಎಲ್.ಸಿ ಮಾಡದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.
2022-23, 2023-24 ಹಾಗೂ 2024-25 ಸಾಲಿನಲ್ಲಿ ಜಿಲ್ಲೆಯಲ್ಲಿ ಪತ್ತೆಯಾದ ಬಾಲ ಗರ್ಭಿಣಿ ಪ್ರಕರಣಗಳ ಸಂಪೂರ್ಣ ವಿವರ ನೀಡಿ. ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿ ಪ್ರರಣಗಳೆರೆಡು ಸಹ ಸಂಬಂಧ ಹೊಂದಿವೆ. ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಮರ್ಪಕ ಕಾರ್ಯ ಕೈಗೊಳ್ಳದಿರುವುದು ಮೇಲ್ಮೋಟಕ್ಕೆ ಕಂಡು ಬರುತ್ತಿದೆ. ಸಿಡಿಪಿಓಗಳು ಕಚೇರಿಯಲ್ಲಿ ಕುಳಿತುಕೊಳ್ಳದೇ ಗ್ರಾಮೀಣ ಪ್ರದೇಶದಲ್ಲಿ ಸುತ್ತಾಡಿ, ಬಾಲ್ಯ ವಿವಾಹವನ್ನು ತಡೆಗಟ್ಟಲು ಪ್ರಯತ್ನಿಸಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆರೋಗ್ಯ, ಶಿಕ್ಷಣ, ಕಾರ್ಮಿಕ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಒಟ್ಟಾಗಿ ಸಮನ್ವಯದಿಂದ ಕಾರ್ಯ ನಿರ್ವಹಿಸಿದರೆ ಮಾತ್ರ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಯಂತಹ ಪಿಡುಗನ್ನು ಜಿಲ್ಲೆಯಿಂದ ನಿರ್ಮೂಲನೆ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ತಾಲ್ಲೂಕು ಮಟ್ಟದಲ್ಲಿ ಬಾಲ್ಯ ವಿವಾಹ ತಡೆ ಮೇಲ್ವಿಚಾರಣಾ ಸಮಿತಿ ಹಾಗೂ ಗ್ರಾಮಗಳಲ್ಲಿ ಬಾಲ್ಯ ವಿವಾಹ ಕಾವಲು ಸಮಿತಿಗಳನ್ನು ರಚಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳು ತಪ್ಪದೇ ಸಭೆಗಳನ್ನು ಆಯೋಜಿಸಿ ತಾಲ್ಲೂಕು ಮಟ್ಟದ ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳಲ್ಲಿ ಜಾಗೃತಿ ಮೂಡಿಸಬೇಕು. ಎಲ್ಲಾ ಶಾಲಾ ಕಾಲೇಜುಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿ ಪಿಡುಗಿನ ಕುರಿತು ಜಾಗೃತಿ ಮೂಡಿಸಬೇಕು ಎಂದು ಜಿ.ಪಂ.ಸಿಇಓ ಎಸ್.ಜೆ ಸೋಮಶೇಖರ್ ಸಭೆಯಲ್ಲಿ ಹೇಳಿದರು.
ಬಾಲ್ಯ ವಿವಾಹ ಹಲವು ಸಾಮಾಜಿಕ ಪಿಡುಗುಗಳಿಗೆ ನಾಂದಿಯಾಗುತ್ತದೆ. ಇದರಿಂದ ಬಾಲ ಗರ್ಭಿಣಿ, ಬಾಲ ತಾಯಿ, ಅನೀಮಿಯಾ, ತಾಯಿ ಹಾಗೂ ಮಗುವಿನ ಮರಣ ಸಹ ಉಂಟಾಗುತ್ತದೆ. ಈ ಸಾಮಾಜಿಕ ಅನಿಷ್ಠಗಳು ಜಿಲ್ಲೆಯ ಅಭಿವೃದ್ಧಿಗೆ ಕಳಂಕ ತರುತ್ತವೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಬಾಲ್ಯ ವಿವಾಹವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಬಾಲ್ಯ ವಿವಾಹ ತಡೆಗೆ ಕಾರ್ಯಪ್ರವೃತ್ತವಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.
ವಾರದೊಳಗೆ ಅಂಗನವಾಡಿ ನಿವೇಶನದ ಸಮಸ್ಯೆ ಬಗೆಹರಿಸಿ : ಜಿಲ್ಲೆಯ ಗ್ರಾಮೀಣ ಪ್ರದೇಶ ಹಾಗೂ ನಗರ ವ್ಯಾಪ್ತಿಯಲ್ಲಿ ಅಂಗನವಾಡಿ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಿವೇಶನ ಗುರುತಿಸಬೇಕು. ವಾರದೊಳಗೆ ಅಂಗನವಾಡಿ ಕಟ್ಟಡ ನಿವೇಶನದ ಸಮಸ್ಯೆ ಬಗೆಹರಿಸಿ ಸ್ಥಳ ಮೀಸಲಿರಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಜಾಗ ಗುರುತಿಸಿ, ಅಂಗನವಾಡಿ ಸ್ವಂತ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಇರುವ ಭೂಮಿಯನ್ನು ಮಂಜೂರು ಮಾಡಬೇಕು. ಈ ನಿಟ್ಟಿನಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ನಿವೇಶನ ಮೀಸಲಿರಿಸಬೇಕು. ಅಂಗನವಾಡಿ ನಿರ್ಮಾಣಕ್ಕೆ ಜಾಗದ ಸಮಸ್ಯೆ ಇರಬಾರದು. ಈ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಭಾರತಿ ಆರ್ ಬಣಕಾರ್ ಅವರಿಗೆ ಸೂಚನೆ ನೀಡಿದರು.
ಸಿಂಧುತ್ವ ಪ್ರಮಾಣ ಪತ್ರ ಬಾಕಿ ಪ್ರಕರಣ ಇತ್ಯರ್ಥಕ್ಕೆ ಸೂಚನೆ: ಜಿಲ್ಲಾ ಜಾತಿ ಪರಿಶೀಲನಾ ಸಮಿತಿಗಳ ಮೂಲಕ ಸಿಂಧುತ್ವ ಪ್ರಮಾಣ ಪತ್ರ ಬಾಕಿ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಬಾಕಿ ಇರುವ ಸಿಂಧುತ್ವ ಪ್ರಮಾಣ ಪತ್ರ ಬಾಕಿ ಪ್ರಕರಣಗಳ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು, ತಹಶೀಲ್ದಾರ್‍ಗಳು ನಿರಂತರವಾಗಿ ಗಮನಹರಿಸಿ, ಬಾಕಿ ಇರುವ ಎಲ್ಲ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಕ್ರಮವಹಿಸಬೇಕು ಎಂದರು.
ವಿದ್ಯಾರ್ಥಿ ವೇತನದ ಬ್ಯಾಂಕ್ ಖಾತೆಗೆ ಆಧಾರ್ ಜೋಡಿಸಿ: ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಎಲ್ಲಾ ವಿದ್ಯಾರ್ಥಿಗಳ ಖಾತೆಗಳಿಗೆ ಆಧಾರ್ ಜೋಡಣೆಗೆ ತುರ್ತಾಗಿ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿಲ್ಲಾ ಪಂಚಾ¬ತಿ ಸಿಇಒ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿದ್ಯಾರ್ಥಿ ವೇತನಕ್ಕೆ ಆಧಾರ್ ಜೋಡಣೆ ಕಡ್ಡಾಯವಾಗಿದ್ದು, ಆಧಾರ್ ಜೋಡಣೆಗೆ ಉಂಟಾಗಿರುವ ತಾಂತ್ರಿಕ ದೋಷಗಳು, ಕೆವೈಸಿ ಅಪ್‍ಡೇಟ್ ಸೇರಿದಂತೆ ಬಾಕಿ ಇರುವ ವಿದ್ಯಾರ್ಥಿಗಳ ಆಧಾರ್ ಜೋಡಣೆ ಪೂರ್ಣಗೊಳಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಶಾಲೆ, ವಸತಿ ನಿಲಯ, ಆಸ್ಪತ್ರೆ ಭೇಟಿ ಕಡ್ಡಾಯ: ಉಪವಿಭಾಗಾಧಿಕಾರಿ, ತಹಶೀಲ್ದಾರ್ ಹಾಗೂ ತಾ.ಪಂ. ಇ.ಓ ಗಳು ವಸತಿ ನಿಲಯ, ಶಾಲೆ, ಆಸ್ಪತ್ರೆಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿಗಳ ಕುರಿತು ಜಿ.ಪಿ.ಎಸ್ ಪೋಟೋದೊಂದಿಗೆ ವರದಿ ನೀಡುವಂತೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶನ ನೀಡಿದರು.
ವಾರಕ್ಕೆ ಕನಿಷ್ಟ ಎರಡು-ಮೂರು ಶಾಲೆ, ವಸತಿ ನಿಲಯ, ಆಸ್ಪತ್ರೆಗಳಿಗೆ ಭೇಟಿ ನೀಡಬೇಕು ಎಂದು ತಾಕೀತು ಮಾಡಿದರು. ಜಿಲ್ಲೆಯಲ್ಲಿರುವ ಎಲ್ಲಾ ಹಾಸ್ಟೆಲ್, ಶಾಲೆಗಳು ಹಾಗೂ ಅಂಗನವಾಡಿಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿ ಶೇ.100 ರಷ್ಟು ನೀರು ಪೂರೈಕೆಗೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಗ್ರಾಮೀಣ ಕುಡಿಯುವ ನೀರು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗಂಗಾ ಕಲ್ಯಾಣ ಯೋಜನೆ ಪಂಪಸೆಟ್‍ಗಳಿಗೆ ವಿದ್ಯುತ್ ಸಂಪರ್ಕಕ್ಕೆ ಸೂಚನೆ: ಅಂಬೇಡ್ಕರ್, ಬೋವಿ, ಅಲ್ಪ ಸಂಖ್ಯಾತ ಹಾಗೂ ದೇವರಾಜ ಅರಸು ಅಭಿವೃದ್ಧಿ ನಿಗಮಗಳಡಿ ಬರುವ ವಿವಿಧ ನಿಗಮಗಳ ಅನುದಾನದಲ್ಲಿ ಈಗಾಗಲೇ ಕೊರೆಸಿರುವ ಬೋರ್‍ವೆಲ್‍ಗಳಿಗೆ ಶೀಘ್ರವೇ ವಿದ್ಯುತ್ ಸಂಪರ್ಕ ನೀಡಬೇಕು.
ಪ್ರತಿಯೊಂದು ನಿಗಮಗಳು 2023 ಡಿಸೆಂಬರ್ ಅಂತ್ಯಕ್ಕೆ ಬೋರ್‍ವಲ್ ಕೊರೆಯಲು ನಿಗದಿ ಪಡಿಸಿದ ಗುರಿ, ಕೊರೆಸಿದ ಬೋರವೆಲ್, ಫಲಪ್ರಧವಾದ ಬೋರ್‍ವೆಲ್, ವಿದ್ಯುತ್ ಸಂಪರ್ಕ ಕಲ್ಪಿಸಿದ ಹಾಗೂ ಕಲ್ಪಿಸದ ಬೋರ್‍ವೆಲ್ ವಿವರಗಳನ್ನು ಮುಂದಿನ ಸಭೆಯ ವೇಳೆ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಶಾಲಾ ಕೊಠಡಿ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ : ವಿವೇಕ ಯೋಜನೆಯಡಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಹಾಗೂ ಪಿಯು ಇಲಾಖೆಗೆ ಮಂಜೂರಾದ ಶಾಲಾ ಕೊಠಡಿಗಳ ನಿರ್ಮಾಣವನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್ ಇಂಜಿನಿಯರಿಂಗ್ ಅಧಿಕಾರಿಗೆ ಸಭೆಯಲ್ಲಿ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಮಳೆಗಾಲ ಮುಂದುವರೆದಿದ್ದು, ಅತ್ಯಂತ ದುಸ್ಥಿತಿಯಲ್ಲಿರುವ ಶಾಲಾ ಕೊಠಡಿಗಳ ದುರಸ್ಥಿಗೆ ವಿಪತ್ತು ನಿರ್ವಹಣಾ ನಿಧಿಯಿಂದ ಅನುದಾನ ನೀಡಲಾಗುವುದು. ಯಾವುದೆ ಕಾರಣಕ್ಕೂ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳಲ್ಲಿ ಮಕ್ಕಳನ್ನು ಕೂರಿಸಿ ಪಾಠ ಮಾಡಬಾರದು. ಇದರ ಹೊರತಾಗಿ ಕೊಠಡಿಗಳ ದುರಸ್ಥಿ ಪಟ್ಟಿಯನ್ನು ಸಿದ್ದಪಡಿಸಿ ಇಲಾಖೆಗೆ ಸಲ್ಲಿಸುವಂತೆ ಹೇಳಿದರು.
ಜಿಲ್ಲೆಯಲ್ಲಿ ವಿವೇಕ ಯೋಜನೆಯಡಿ 191 ಶಾಲಾ ಕೊಠಡಿಗಳು ಮಂಜೂರಾಗಿದ್ದವು. ಇದರಲ್ಲಿ 171 ಕೊಠಡಿಗಳ ಕಾಮಗಾರಿ ಪೂರ್ಣಗೊಂಡಿದೆ. 13 ಪ್ರಗತಿಯಲ್ಲಿವೆ. 7 ಸ್ಥಳಗಳಲ್ಲಿ ಕೊಠಡಿ ನಿರ್ಮಾಣಕ್ಕೆ ಸ್ಥಳದ ಕೊರತೆ ಇದೆ. ಜಿಲ್ಲೆಯಲ್ಲಿ 560 ಕ್ಕೂ ಹೆಚ್ಚು ಶಾಲಾ ಕೊಠಡಿಗಳ ದುರಸ್ತಿಯಾಗಬೇಕಿದೆ. ಈ ಕುರಿತು ಪ್ರಸ್ತಾವನೆಯನ್ನು ಇಲಾಖೆ ಮುಖ್ಯಸ್ಥರಿಗೆ ಸಲ್ಲಿಸಲಾಗಿದೆ ಎಂದು ಡಿ.ಡಿ.ಪಿ.ಐ ಸಭೆಗೆ ಮಾಹಿತಿ ನೀಡಿದರು.
ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ಸೂಚನೆ :
ಶಾಲೆಯಿಂದ ಹೊರಗುಳಿದ 18 ವರ್ಷ ಒಳಗಿನ ಮಕ್ಕಳ ಸಮೀಕ್ಷೆ ಕಾರ್ಯ ಜಿಲ್ಲೆಯಲ್ಲಿ ನಡೆಯುತ್ತಿದೆ. ಶಾಲೆಯಿಂದ ಹೊರಗುಳಿದ ಮಕ್ಕಳೇ, ಬಾಲಕಾರ್ಮಿಕರು ಹಾಗೂ ಬಾಲ್ಯವಿವಾಹಕ್ಕೆ ತುತ್ತಾಗುತ್ತಾರೆ. ಆದ್ದರಿಂದ ಎಲ್ಲಾ ನಗರ ಪ್ರದೇಶ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿಯೂ ಮನೆ ಮನೆ ಸಮೀಕ್ಷೆ ಮಾಡುವ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಬೇಕು. ಇವರನ್ನು ಮುಖ್ಯವಾಹಿನಿಗೆ ತರಬೇಕು. ಎಲ್ಲಾ ತಾ.ಪಂ. ಇಓ ಹಾಗೂ ಪಿಡಿಓಗಳಿಗೆ ಸಮೀಕ್ಷೆ ಕುರಿತು ಎರಡು ಬಾರಿ ತರಬೇತಿ ನೀಡಲಾಗಿದೆ. ಸಮೀಕ್ಷೆ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಸೂಚಿಸಿದರು.
ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಚರ್ಚಿಸಿದ ವಿಷಯಗಳು ಕಡ್ಡಾಯವಾಗಿ ಅನುಷ್ಠಾನಗೊಳ್ಳಬೇಕು. ಇಲ್ಲದಿದ್ದರೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೆಶಕ ಬಿ.ಆನಂದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಹಿಂದು ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸುಬ್ರನಾಯ್ಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಸೇರಿದಂತೆ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್, ನಗರಸಭೆ ಪೌರಾಯುಕ್ತರು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page