ದಕ್ಷಿಣಕಾಶಿ ಖ್ಯಾತಿಯ ಹಿರಿಯೂರಿನ ಮೂಲಸೌಕರ್ಯ ಅಭಿವೃದ್ಧಿಗೆ ವೇಗವನ್ನು ನೀಡಲು ಸ್ಮಾರ್ಟ್ ಸಿಟಿ ಸ್ಪರ್ಷ ನೀಡಲಾಗುವುದು:ಉಸ್ತುವಾರಿಸಚಿವರಾದ ಡಿ.ಸುಧಾಕರ್

by | 23/07/24 | ಸುದ್ದಿ


ಹಿರಿಯೂರು:
ದಕ್ಷಿಣಕಾಶಿ ಖ್ಯಾತಿಯ ಹಿರಿಯೂರಿನ ಮೂಲ ಸೌಕರ್ಯ ಅಭಿವೃದ್ಧಿಗೆ ವೇಗವನ್ನು ನೀಡುವ ಉದ್ದೇಶದಿಂದ ಸ್ಮಾರ್ಟ್ ಸಿಟಿ ಸ್ಪರ್ಷ ನೀಡಲಾಗುವುದು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ ಸುಧಾಕರ್ ಹೇಳಿದರು.
ನಗರದ ಗೋಪಿ ಬಡಾವಣೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಸ್ವಚ್ಛ ಸುಂದರ ನಗರವನ್ನಾಗಿಸಲು ಜನರ ಸುರಕ್ಷತೆ, ಶುದ್ಧ ಕುಡಿವ ನೀರು, ವಾರ್ಡ್ ಗಳ ಅಭಿವೃದ್ಧಿ, ನಗರದಲ್ಲಿ ಹಾದು ಹೋಗಿರುವ ವಿವಿ ಸಾಗರ ಎಡ-ಬಲ ದಂಡೆ ನಾಲೆಗಳ ಸ್ವಚ್ಛತೆ, ತಡೆಗೋಡೆ ನಿರ್ಮಾಣ, ವೇದಾವತಿ ನದಿಶುದ್ಧೀಕರಣ, ವಸತಿ ಯೋಜನೆ ಸೇರಿದಂತೆ,
ಯುಜಿಡಿ, ತ್ಯಾಜ್ಯನೀರು ಸಂಸ್ಕರಣೆ, ಜನಸ್ನೇಹಿ ಆಡಳಿತ, ಗುಣಮಟ್ಟದ ಆರೋಗ್ಯಸೇವೆ, ಶಿಕ್ಷಣ, ರಸ್ತೆ, ವಿಸ್ತರಣೆ, ಉದ್ಯಾನವನಗಳ ಪುನಶ್ಚೇತನ ಸೇರಿ ಅಗತ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲಾಗುವುದು ಎಂಬುದಾಗಿ ಅವರು ಹೇಳಿದರು.
ನಗರದಲ್ಲಿ ವಾಸಮಾಡುವವರ ಜೀವನಮಟ್ಟ ಸುಧಾರಿಸಲು ವಿಶೇಷ ಯೋಜನೆ ರೂಪಿಸಲಾಗಿದೆ. ನಗರದ ಸರ್ವಾಂಗೀಣ ಅಭಿವೃದ್ಧಿಗೆ ಜನರ ಸಹಕಾರ ತುಂಬಾ ಅಗತ್ಯ ಎಂದರಲ್ಲದೆ,
ತಾಲ್ಲೂಕಿನ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು 25 ಕೋಟಿ ರೂ. ವೆಚ್ಚದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಬಿಇಒ ಕಚೇರಿ, ತಾ.ಪಂ. ಕಟ್ಟಡ, ನಗರಸಭೆ, ಸಾರಿಗೆ ಡಿಪೋ ಇತರ ಅಭಿವೃದ್ಧಿಗೆ ಕಾಮಗಾರಿಗಳು ತಾಲ್ಲೂಕಿನ ಪ್ರಗತಿಗೆ ವರದಾನವಾಗಲಿವೆ ಎಂಬುದಾಗಿ ಅವರು ಹೇಳಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಮಮತಾ, ಈರಲಿಂಗೇಗೌಡ, ಟಿ. ಚಂದ್ರಶೇಖರ್, ರವಿಚಂದ್ರ ನಾಯ್ಕ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ಜೆ. ರಮೇಶ್, ಉದ್ಯಮಿ ನರೇಂದ್ರಬಾಬು, ಮುಖಂಡರುಗಳಾದ ಮಹೇಶ್, ನಾಗೇಂದ್ರನಾಯ್ಕ್, ಉಮಾದೇವಿ, ಮಂಜುಳಾ, ಗಾಯಿತ್ರಿ, ಸುಜಾತ, ವರ್ಷಿಣಿ, ಹನುಮಂತರಾಯಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page