ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

by | 26/07/24 | ಸುದ್ದಿ

ಚಿತ್ರದುರ್ಗ ಜು. 26:
ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿಯೂ ವ್ಯಸನ ಮುಕ್ತ ದಿನಾಚರಣೆ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮ ಆಯೋಜಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ನಗರದ ಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ವ್ಯಸನ ಮುಕ್ತ ದಿನಾಚರಣೆ ಹಾಗೂ ವ್ಯಸನ ಮುಕ್ತ ಶಿಬಿರ ಕಾರ್ಯಕ್ರಮ ಏರ್ಪಡಿಸುವ ಸಂಬAಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯನ್ನು ವ್ಯಸನಮುಕ್ತ ದಿನಾಚರಣೆಯನ್ನಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 01ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲು ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳಬೇಕು. ಕಾರ್ಯಕ್ರಮದ ಅಂಗವಾಗಿ ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂದು ಬೆಳಿಗ್ಗೆ 9ಕ್ಕೆ ನಗರದ ಒನಕೆ ಓಬವ್ವ ವೃತ್ತದಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ಏರ್ಪಡಿಸಬೇಕು. ಜಾಗೃತಿ ಜಾಥಾವು ಒನಕೆ ಓಬವ್ವ ವೃತ್ತದಿಂದ ಮದಕರಿ ವೃತ್ತ, ಅಂಬೇಡ್ಕರ್ ವೃತ್ತ, ಪ್ರವಾಸಿ ಮಂದಿರ ಬಳಿಯ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಆವರಣದವರೆಗೆ ನಡೆಸಿ, ಜಾಥಾ ಕಾರ್ಯಕ್ರಮದಲ್ಲಿ ಭಿತ್ತಿಪತ್ರ, ಜಾಗೃತಿ ಘೋಷವಾಕ್ಯಗಳ ಫಲಕಗಳನ್ನು ಪ್ರದರ್ಶಿಸಿ, ಜನರಲ್ಲಿ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು.
ತಾಲ್ಲೂಕು ಮಟ್ಟದ ಕಾರ್ಯಕ್ರಮದಲ್ಲಿ ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರವನ್ನು ಅನಾವರಣಗೊಳಿಸಿ ಗೌರವ ಸಲ್ಲಿಸಬೇಕು. ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಎಲ್ಲ ಸರ್ಕಾರಿ ಕಚೇರಿ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಬೇಕು. ಸಂಪನ್ಮೂಲ ವ್ಯಕ್ತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಬೇಕು ಎಂದು ಹೇಳಿದರು.
ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾಮಟ್ಟದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಗಸ್ಟ್ ತಿಂಗಳಿನಲ್ಲಿಯೇ ಒಂದು ಮದ್ಯ ವರ್ಜನ ಶಿಬಿರ ಏರ್ಪಡಿಸಲು ಅಗತ್ಯ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಅವರಿಗೆ ಸೂಚನೆ ನೀಡಿದರು.
ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮದ್ಯ ಮತ್ತು ಮಾದಕ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಆಗಸ್ಟ್ ತಿಂಗಳಿನಲ್ಲಿಯೇ ವಿಚಾರ ಸಂಕಿರಣ ಹಮ್ಮಿಕೊಳ್ಳುವಂತೆ ಜಿಲ್ಲಾ ವಾರ್ತಾಧಿಕಾರಿಗಳಿಗೆ ತಿಳಿಸಿದರು.
ತಾಲ್ಲೂಕು ಮಟ್ಟದಲ್ಲಿಯೂ ಕೂಡ ಆಯಾ ತಾಲ್ಲೂಕಿನ ತಹಸಿಲ್ದಾರರು ಆ. 01 ರಂದು ವ್ಯಸನಮುಕ್ತ ದಿನಾಚರಣೆಯನ್ನು ಹಮ್ಮಿಕೊಂಡು ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರವನ್ನು ಅನಾವರಣಗೊಳಿಸಿ ಗೌರವ ಸಲ್ಲಿಸಬೇಕು. ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಎಲ್ಲ ಸರ್ಕಾರಿ ಕಚೇರಿ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಬೇಕು. ಸಂಪನ್ಮೂಲ ವ್ಯಕ್ತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಬೇಕು ಈಗಾಗಲೆ ತಾಲ್ಲೂಕುಗಳ ತಹಸಿಲ್ದಾರರಿಗೆ ಸೂಚನೆ ನೀಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಹೇಳಿದರು.
ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಮಾತನಾಡಿ, ಪ್ರತಿ ವರ್ಷ ಆಗಸ್ಟ್ 01ರಂದು ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯನ್ನು ವ್ಯಸನಮುಕ್ತ ದಿನಾಚರಣೆಯನ್ನಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ. ಅದರನ್ವಯ ಜಿಲ್ಲಾ ಮಟ್ಟದಲ್ಲಿ ವ್ಯಸನಮುಕ್ತ ದಿನಾಚರಣೆಯನ್ನು ಆಗಸ್ಟ್ 01ರಂದು ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಕೋರಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಚಿದಾನಂದ, ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಸುಮಾ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹರೀಶ್, ಗ್ರೇಡ್-2 ತಹಶೀಲ್ದಾರ್ ನಾಗರಾಜ್ ಇದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page