ಬಾಲ್ಯ ವಿವಾಹ ನಿಯಂತ್ರಣದಿಂದ ದೇಶ ಪ್ರಗತಿ : ಡಿವೈಎಸ್ಪಿ.ಟಿ.ಬಿ.ರಾಜಣ್ಣ*

by | 13/07/24 | ಕಾನೂನು


ಚಳ್ಳಕೆರೆ : ವಿಶ್ವದಲ್ಲೇ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಭಾರತದಲ್ಲಿ ಬಾಲ್ಯ ವಿವಾಹಗಳನ್ನು ನಿಯಂತ್ರಿಸಬೇಕು ಇದರಿಂದ ಮಕ್ಕಳ ಜನನ ಮತ್ತು ಶಿಶು ಮರಣ ಧರ ಕಡಿಮೆಯಾಗುತ್ತದೆ ಇದರಿಂದ ದೇಶದ ಪ್ರಗತಿ ಕಾಣಲು ಸಹಕಾರಿಯಾಗುತ್ತದೆ ಎಂದು ಡಿವೈಎಸ್.ಟಿ.ಬಿ.ರಾಜಣ್ಣ ಹೇಳಿದರು.

ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಮಡಿಲು ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ವತಿಯಿಂದ ಬಾಪೂಜಿ ಗ್ರಾಮಾಂತರ ಪ್ರೌಢಶಾಲೆ ಗೋಪನಹಳ್ಳಿಯಲ್ಲಿ ಬಾಲ್ಯ ವಿವಾಹ ಹಾಗೂ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮಕ್ಕೆ ಗಿಡಕ್ಕೆ ನೀರು ಎರೆಯುವ ಮೂಲಕ ಚಾಲನೆ ನೀಡಿ ಮಾತನಾಡಿದ ಡಿವೈಎಸ್ಪಿ ರಾಜಣ್ಣನವರು ಬಾಲ್ಯ ವಿವಾಹ ಎಂದರೆ ಚಿಕ್ಕ ವಯಸ್ಸಿನಲ್ಲಿ ಹುಡುಗ-ಹುಡುಗಿಯನ್ನು ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡುವುದು. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಹುಡುಗಿಯರಿಗೆ 18 ಹಾಗೂ ಹುಡುಗರಿಗೆ 21 ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ.

ಬಾಲ್ಯ ವಿವಾಹವನ್ನು ನಡೆಸುವವರಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು. ಅಲ್ಲದೆ ಅಂತಹವರನ್ನು ಬಂಧಿಸಲು ಹಿಂಜರಿಯುವುದಿಲ್ಲ. ಒಂದು ವೇಳೆ ತಮ್ಮ ಸುತ್ತ ಮುತ್ತಲು ಯಾವುದೇ ಬಾಲ್ಯ ವಿವಾಹ ನಡೆಯುವ ಬಗ್ಗೆ ಸಾರ್ವಜನಿಕರ ಗಮನಕ್ಕೆ ಬಂದಲ್ಲಿ ಕೂಡಲೆ 1098 ಸಹಾಯವಾಣಿ ಉಚಿತ ಕರೆಗೆ ಮಾಹಿತಿ ನೀಡಿ, ಮಾಹಿತಿ ನೀಡುವವರ ವಿವರವನ್ನು ಸಂಪೂರ್ಣ ಗೌಪ್ಯವಾಗಿಡಲಾಗುವುದು. ಸಾರ್ವಜನಿಕರು, ಪ್ರಜ್ಞಾವಂತರು ಬಾಲ್ಯ ವಿವಾಹ ಪದ್ಧತಿಯನ್ನು ನಿರ್ಮೂಲನೆಗೊಳಿಸಲು ಸರ್ಕಾರದೊಂದಿಗೆ ಕೈಜೋಡಿಸಿ, ಆರೋಗ್ಯಪೂರ್ಣ ಸಮಾಜ ನಿರ್ಮಿಸಲು ಸಹಕರಿಸಬೇಕು.

ಮಕ್ಕಳಿಗೆ ನಿಯಮಗಳ ಅರಿವು: ಬಾಲ್ಯ ವಿವಾಹಕ್ಕೆ ಕಡಿವಾಣ ಹಾಕಲು ಸರ್ಕಾರ ಹಾಗೂ ಸಂಘಸಂಸ್ಥೆಗಳು ವಿವಿಧ ಇಲಾಖೆಗಳ ಅಧಿಕಾರಿಗಳು ಮುಂದಾಗುತ್ತಿದ್ದಾರೆ. ಇದಕ್ಕಾಗಿ ಪೋಕ್ಸೋ ಹಾಗೂ ಬಾಲ್ಯ ವಿವಾಹದ ಕಾನೂನು ಅರಿವು ಎನ್ನುವ ಕಾರ್ಯಕ್ರಮ ಕೈಗೊಂಡಿದ್ದಾರೆ. ಈ ಮೂಲಕ ತಾಲ್ಲೂಕಿನ ಶಾಲಾ, ಕಾಲೇಜು, ಹಾಸ್ಟೆಲ್‌ಗ‌ಳ ಮಕ್ಕಳಿಗೆ ಬಾಲ್ಯ ವಿವಾಹಕ್ಕೆ ಕಾನೂನಿನ ನಿಯಮಗಳ ಬಗ್ಗೆ ತಿಳಿಸಲಾಗುತ್ತಿದೆ

ಸುಳ್ಳು ಜನನ ದಿನಾಂಕ: ಬಾಲ್ಯ ವಿವಾಹಕ್ಕೆ ಒಳಗಾಗುವ ಹೆಣ್ಣು ಮಕ್ಕಳ ಸ್ನೇಹಿತರು, ಕೆಲವೊಮ್ಮೆ ಆ ಹೆಣ್ಣು ಮಕ್ಕಳೇ ಮಕ್ಕಳ ಸಹಾಯವಾಣಿಗೆ ಕರೆ ಮಾಡುತ್ತಾರೆ. ಇಷ್ಟರ ಮಟ್ಟಿಗೆ ಜಾಗೃತಿ ಮೂಡಿದೆ. ಆದರೆ, ಹಲವು ಪ್ರಕರಣಗಳು ಬೆಳಕಿಗೆ ಬದಿಲ್ಲ. ಇದರ ಜತೆಗೆ ಕೆಲ ಮದುವೆ ಸ್ಥಳಕ್ಕೆ ಹೋಗಿ ದಾಖಲೆ ಕೇಳಿದರೆ, ಬಾಲಕಿಯ ಆಧಾರ್‌ ಕಾರ್ಡ್‌ ಅಥವಾ ಅದರ ಜೆರಾಕ್ಸ್ ಪ್ರತಿಯಲ್ಲಿ ತಿದ್ದಿ ನೀಡುತ್ತಾರೆ. ಸುಳ್ಳು ಜನನ ದಿನಾಂಕವನ್ನು ನಮೂದಿಸಿ ಜೆರಾಕ್ಸ್ ಮಾಡಿರುತ್ತಾರೆ. ಇದರಿಂದ ನಿಜವಾದ ವಯಸ್ಸು ತಿಳಿಯಲು ಜನನ ಪ್ರಮಾಣ ಪತ್ರ ಅಥವಾ ಟಿಸಿ, ಎಸ್ಸೆಸ್ಸೆಲ್ಸಿ ಅಂಕಪಟ್ಟಿಯನ್ನು ಪರೀಕ್ಷಿಸಲಾಗುತ್ತಿದೆ ‌ಎಂದರು.

ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿಯರಾದ ಸುಮಿತ್ರಮ್ಮ ರವರು ಮಾತನಾಡಿ ಬಾಲ್ಯ ವಿವಾಹವು ಬಡತನ,ಹೆಣ್ಣುಮಕ್ಕಳ ಕಡಿಮೆ ಶಿಕ್ಷಣ ಮಟ್ಟ, ಹಾಗೂ ಹೆಣ್ಣು ಮಕ್ಕಳನ್ನು ಆರ್ಥಿಕವಾಗಿ ಹೊರೆ ಎಂದು ಭಾವಿಸುವುದರಿಂದ ಮತ್ತು ಹೆಣ್ಣುಮಕ್ಕಳಿಗೆ ಕಡಿಮೆ ಸ್ಥಾನಮಾನ ಸಾಮಾಜಿಕ ಪದ್ಧತಿ ಮತ್ತು ಸಂಪ್ರದಾಯಗಳು ಇವೆಲ್ಲವುಗಳು ಇರುವುದರಿಂದ ಹೆಚ್ಚಿನದಾಗಿ ಬಾಲ್ಯಾವಿವಾಹಗಳು ಆಗುತ್ತಿವೆ ಇದರಿಂದ ಮಕ್ಕಳಿಗೆ ಹಲವಾರು ದುಷ್ಪರಿಣಾಮಗಳು ಸಹ ಬೀರುತ್ತವೆ ವಯಸ್ಸಿಗೆ ಮೀರಿದ ಜವಾಬ್ದಾರಿಯನ್ನ ಹೆರಿಸಿದಂತಾಗುತ್ತದೆ, ಇದರಿಂದ ಮುಂದೆ ವಿಕಲಾಂಗ ಮಕ್ಕಳ ಜನನ ಉಂಟಾಗುತ್ತದೆ, ಲೈಂಗಿಕ ಕಾಯಿಲೆಗಳಿಂದ ಎಚ್ಐವಿ ಏಡ್ಸ್ ಗೆ ಗುರಿಯಾಗುವ ಸಾಧ್ಯತೆ ಹೆಚ್ಚಿರುತ್ತದೆ, ಶಿಶು ಮರಣ ಹಾಗೂ ಮಕ್ಕಳ ಮರಣ ಹೆಚ್ಚಾಗುತ್ತಿದ್ದು, ದೈಹಿಕ ಬೆಳವಣಿಗೆ ಕುಂಠಿತವಾಗುತ್ತದೆ, ಇದರಿಂದ ಗರ್ಭಪಾತ ಹೆಚ್ಚಾಗುತ್ತದೆ ಎಂದು ತಿಳಿಸಿದರು.

ಮಡಿಲು ಸಂಸ್ಥೆಯ ಅಧ್ಯಕ್ಷ ಕುಮಾರಸ್ವಾಮಿ.ಹಚ್ ರವರು ಮಾತನಾಡಿ ಬಯಲು ಸೀಮೆ ಪ್ರದೇಶವಾದ ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲೂಕಿನಲ್ಲಿ ಹೆಚ್ಚಿನ ಬಾಲ್ಯ ವಿವಾಹಗಳು ಕಂಡುಬರುತ್ತಿವೆ ಇದರ ಬಗ್ಗೆ ಸರ್ಕಾರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಂಘ ಸಂಸ್ಥೆಯವರು ಅರಿವು ಮೂಡಿಸಿದರು ಸಹ ಪೋಷಕರು ಮೂಢನಂಬಿಕೆಗಳಿಂದಹೊರಬರದೆ ಮಕ್ಕಳ ಬಾಲ್ಯಜೀವನವನ್ನು ಕಸಿದುಕೊಳ್ಳುತ್ತಿದ್ದಾರೆ. ಆಟ ಆಡಿ ಬೆಳೆಯುವ ವಯಸ್ಸಿನಲ್ಲಿ ತಾಯಂದಿರಾಗಿ ನೋವು ಅನುಭವಿಸುತ್ತಿದ್ದಾರೆ. ಕೆಲವು ಮಕ್ಕಳು ಚಿಕ್ಕ ವಯಸ್ಸಿನಲ್ಲಿ ಗರ್ಭ ಧರಿಸುವುದರಿಂದ ತನ್ನ ಪ್ರಾಣವನ್ನ ಕಳೆದುಕೊಳ್ಳುತ್ತಿದ್ದಾರೆ ಇದರಿಂದ ಪೋಷಕರು ಹಾಗೂ ಮಕ್ಕಳು ಜಾಗೃತರಾಗಿರಬೇಕೆಂದು ತಿಳಿಸಿದರು…

ಈ ಸಂದರ್ಭದಲ್ಲಿ ಪತ್ರಕರ್ತರಾದ ಸುರೇಶ್ ಬೆಳಗೆರೆ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ರಾಧಾ ತಿಪ್ಪೇಸ್ವಾಮಿ, ಗ್ರಾಮ ಪಂಚಾಯತಿ ಸದಸ್ಯರಾದ ನಾಗರಾಜ್, ಮುಖಂಡರಾದ ಉಮೇಶ್ ಮುಖ್ಯ ಶಿಕ್ಷಕರಾದ ರಾಮಲಿಂಗಪ್ಪ ಓ, ಅಂಗನವಾಡಿ ಕಾರ್ಯಕರ್ತೆಯರು, ಸಂಸ್ಥೆಯ ಕಾರ್ಯದರ್ಶಿಗಳಾದ ಆನಂದ್ ಡಿ ಆಲಘಟ್ಟ ನಿರ್ದೇಶಕರುಗಳಾದ ದ್ಯಾಮಕುಮಾರ್ ಟಿ, ಪ್ರವೀಣ್ ಎ, ಅರುಣ್, ಮನು, ಸುದೀಪ್, ದಿನೇಶ್, ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page