ಭದ್ರಾಕಾಮಗಾರಿಯನ್ನು ತ್ವರಿತವಾಗಿ ಮುಗಿಸುವಂತೆ ಒತ್ತಾಯಿಸಿ ರೈತಸಂಘದಿಂದ ಸರ್ಕಾರಕ್ಕೆ ಮನವಿ.

by | 06/11/23 | ಪ್ರತಿಭಟನೆ


ಹಿರಿಯೂರು :
ತಾಲ್ಲೂಕು ತೀವ್ರ ಬರಗಾಲ ಎದುರುಸುತ್ತಿದ್ದು, ಹಿಂದೆ ಇದೇ ಸಮಯದಲ್ಲಿ ವಾಣಿವಿಲಾಸ ಜಲಾಶಯದಲ್ಲಿ 132 ಅಡಿ ನೀರು ಸಂಗ್ರವಾಗಿತ್ತು, ಈಗ 122 ಅಡಿ ಇದೆ, ಒಂದೇ ವರ್ಷಕ್ಕೆ 10 ಅಡಿ ನೀರು ಖಾಲಿಯಾಗಿದೆ, ಮುಂದಿನ ವರ್ಷ ಈ ಸಮಯಕ್ಕೆ ನೂರರ ಒಳಗೆ ಬರುತ್ತದೆ ಹೀಗೆ ಮುಂದುವರೆದರೆ ನಮ್ಮ ಅಡಿಕೆ ತೆಂಗು, ಸೇರಿದಂತೆ ಎಲ್ಲಾ ಬೆಳೆಗಳು ಸಂಪೂರ್ಣ ಹಾಳಾಗುತ್ತದೆ ಎಂಬುದಾಗಿ ರೈತಸಂಘದ ತಾಲ್ಲೂಕು ಅಧ್ಯಕ್ಷರಾದ ಕೆ.ಟಿ.ತಿಪ್ಪೇಸ್ವಾಮಿ ಹೇಳಿದರು.
ತಾಲ್ಲೂಕು ರೈತ ಸಂಘದ ವತಿಯಿಂದ ಕರೆಯಲಾಗಿದ್ದ ಮಾಸಿಕ ಸಭೆ ನಡೆಸಿ, ಸಭೆಯ ನಂತರ ತಾಲ್ಲೂಕು ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ, ಅವರು ಮಾತನಾಡಿದರು.
ತುಂಗಾದಿಂದ ಭದ್ರಾ, ಭದ್ರಾದಿಂದ ವಾಣಿವಿಲಾಸ ಜಲಾಶಯಕ್ಕೆ ನೀರು ಹರಿಸುವ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಲು ಒತ್ತಾಯಿಸಿ ತುಂಗಾದಿಂದ ಭದ್ರಾದವರೆಗೆ ಪಾದಯಾತ್ರೆಯನ್ನು ಮುಂದಿನ ತಿಂಗಳಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ನಮ್ಮ ತಾಲೂಕಿನಿಂದ ಸುಮಾರು 50 ಬಸ್ಸುಗಳ ಮೂಲಕ ಜನರು ಹೋರಾಟಕ್ಕೆ ಹೊರಡಲು ತೀರ್ಮಾನಿಸಲಾಗಿದೆ ಎಂದರಲ್ಲದೆ,

ಸುಮಾರು 94 ದಿನ ರೈತರ ಹೋರಾಟದ ಫಲವಾಗಿ ಜೆಜೆ ಹಳ್ಳಿ ಹೋಬಳಿಯ ಎಲ್ಲಾ ರೈತರ ಜಮೀನುಗಳಿಗೆ ಪೈಪ್ ಲೈನ್ ಮೂಲಕ ಡ್ರಿಪ್ಸ್ ಕಮ್ ತುಂತುರು ನೀರಾವರಿ ಅಳವಡಿಸಲು ಸರ್ಕಾರ ಮುಂದಾಗಿದೆ ಆದರೆ ಬೆಸ್ಕಾಂ ಇಲಾಖೆಯಿಂದ ಅಕ್ರಮ ಸಕ್ರಮ ಯೋಜನೆ ನಾಲ್ಕು ವರ್ಷವಾದರೂ ರೈತರಿಗೆ ಪರಿವರ್ತಕಗಳನ್ನು ಕೊಡಲಿಲ್ಲ,ಅಧಿಕಾರಿಗಳು ನಿರ್ಲಕ್ಷೆಯಿಂದ ಗುಣಮಟ್ಟ ವಿದ್ಯುತ್ ಸರಬರಾಜು ಆಗುತ್ತಿಲ್ಲ, ಸರ್ಕಾರ ಸಮರ್ಪಕ ವಿದ್ಯುತ್ ಸರಬರಾಜು ಮಾಡಬೇಕೆಂದು ಒತ್ತಾಯಿಸಿದರು.
ಈ ಬಗ್ಗೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ, ಸಾವಿರಾರು ರೈತರೊಂದಿಗೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗುವುದು, ಚಳುವಳಿಯನ್ನು ರೂಪಿಸಲಾಗುವುದು, ಬರಗಾಲ ಘೋಷಣೆಯಾಗಿ ಎರಡು ತಿಂಗಳು ಕಳೆದರೂ ಇದುವರೆಗೂ ರೈತರಿಗೆ ಬೆಳೆ ವಿಮೆ, ಬೆಳೆ ಪರಿಹಾರ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮತ್ತು ಮೇವು ಒದಗಿಸಲು ತಾಲೂಕು ಆಡಳಿತ ಮುಂದಾಗಬೇಕು ಎಂದರಲ್ಲದೆ,
ಕೃಷಿ ಇಲಾಖೆಯಿಂದ ಕಳೆದ ವರ್ಷ ಸ್ಪಿಂಕ್ಲರ್ ಪೈಪಿಗೆ ಒಂದು ಸೆಟ್ ಒಬ್ಬ ರೈತರಿಗೆ 1746 ರೂ ಇತ್ತು, ಈ ವರ್ಷ 4139 ರೂ ಸರ್ಕಾರ ನಿಗದಿ ಮಾಡಿದೆ, ಕೂಡಲೇ ಸರ್ಕಾರ ಬರಗಾಲ ಇರುವುದರಿಂದ ಈಗ ಇರುವ ದರವನ್ನು ಕಡಿಮೆ ಮಾಡಬೇಕು. ಮುಂದಿನ ದಿನಗಳಲ್ಲಿ ಗ್ರಾಮಘಟಕಗಳನ್ನು ಪುನಃಚೇತನಗೊಳಿಸಿ ಸರ್ಕಾರದಿಂದ ಸವಲತ್ತುಗಳನ್ನು ಪಡೆಯಲು ಗಟ್ಟಿಯಾದ ಹೋರಾಟವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂಬುದಾಗಿ ಹೇಳಿದರು.
ಈ ಸಂದರ್ಭದಲ್ಲಿ ರೈತಮುಖಂಡರಾದ ಆಲೂರುಸಿದ್ದರಾಮಣ್ಣ, ತಿಮ್ಮಾರೆಡ್ಡಿ, ರಂಗಸ್ವಾಮಿ, ಶಿವಣ್ಣ, ವಿರುಪಾಕ್ಷ, ಬಿ.ಆರ್.ರಂಗಸ್ವಾಮಿ, ಅರಳೀಕೆರೆ ತಿಪ್ಪೇಸ್ವಾಮಿ, ಮಾಂತೇಶ್, ದೇವೇಂದ್ರಪ್ಪ, ಜಗನ್ನಾಥ್, ರಾಜಪ್ಪ ಜಯಣ್ಣ, ಜಗದೀಶ್, ಹನುಮಂತರಾಯಪ್ಪ, ನಾಗರಾಜ್ ಇತರರು ಭಾಗವಹಿಸಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page