ಮಗನ ಗೆಲುವಿಗೆ ಮಹಿಳಾ ಪಡೆಯೊಂದಿಗೆ ವಿಮಲಮ್ಮ, ಪಕ್ಷೇತರ ಅಭ್ಯರ್ಥಿ ಕೆ.ಟಿ.ಕುಮಾರಸ್ವಾಮಿ ಗೆಲುವಿಗೆ ಅನುಕಂಪದ ಅಲೆ ರಾಷ್ಟ್ರೀಯ ಪಕ್ಷಗಳಲ್ಲಿ ನಡುಕ.

by | 30/04/23 | ಚುನಾವಣೆ-2023


ಚಳ್ಳಕೆರೆಜನಧ್ವನಿ ವಾರ್ತೆ ಏ 30
ಕಾಂಗ್ರೆಸ್ ಭದ್ರಕೋಟೆಯನ್ನು ಪ್ರವೇಶಮಾಡಲು ಬಿಜೆಪಿ ಯ ಅನಿಲ್‌ಕುಮಾರ್, ಜೆಡಿಎಸ್ ನ ಎಂ.ರವೀಶ್ ಹಾಗೂ ಪಕ್ಷೇತತ ಅಭ್ಯರ್ಥಿ ಕೆ.ಟಿ.ಕುಮಾರಸ್ವಾಮಿ ಈ ಮೂರು ಜನರು ಕ್ಷೇತ್ರದಲ್ಲಿ ಈ ಬಾರಿ ಗದ್ದಿಗೆ ಹೇರಲು ಬಾರಿ ಪೈಪೋಟಿ ನಡೆಸುತ್ತಿದ್ದಾರೆ.
ಕಳೆದ 2018ರ ಚುನಾವಣೆಯಲ್ಲಿ ಬಿಜೆಪಿ ಯಿಂದ ಕೆ.ಟಿ.ಕುಮಾರಸ್ವಾಮಿ, ಜೆಡಿಎಸ್ ನಿಂದೆ ಎಂ.ರವೀಶ್ ತ್ರಿಕೋನ ಸ್ಪರ್ಧೆತಲ್ಲಿ ಕಾಂಗ್ರೆಸ್ ಶಾಸಕ ಟಿ.ರಘುಮೂರ್ತಿ ಎರಡನೇ ಬಾರಿಗೆ ಜಯಮಾಲೆ ಹಾಕಿಕೊಂಡು ಇತಿಹಾಸದ ಬ್ರೇಕ್ ಮಾಡಿದ್ದರು ಮೂರನೇ ಯ್ಯಾಟ್ರಿಕ್ ಗೆಲುವಿಗೆ ಮತ್ತೆ ಸ್ಪರ್ಧೆ ಮಾಡಿದ್ದಾರೆ.


ಈ ಬಾರಿ ಬಿಜೆಪಿಯಿಂದ ನಿವೃತ್ತ ಕೆಎಎಸ್ ಅಧಿಕಾರಿ ಅನಿಲ್ ಕುಮಾರ್ ,ಜೆಡಿಎಸ್ ನಿಂದ ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಎಂ.ರವೀಶ್ ಸ್ಪರ್ಧೆ ಮಾಡಿದರೆ, ಕಾಂಗ್ರೆಸ್ ನಿಂದ ಶಾಸಕ ಟಿ.ರಘುಮೂರ್ತಿ ಮೂರನೇ ಯ್ಯಾಟ್ರಿಕ್ ಗೆಲುವಿಗೆ ಮತ್ತೆ ಸ್ಪರ್ಧೆ ಮಾಡಿದ್ದಾರೆ ಕೆ.ಟಿ ,ಕುಮಾರಸ್ವಾಮಿ ಅಭಿಮಾನಿಗಳ ಇಚ್ಚೆಯಂತೆ ರಾಷ್ಟ್ರೀಯ ಪಕ್ಷಗಳ ಸಹವಾಸ ಬೇಡ ಪಕ್ಷೇತರ ಸ್ಪರ್ಧೆ ಮಾಡುವಂತೆ ಒತ್ತಡದ ಮೇರೆಗೆ ಪಕ್ಷೇತರ ಅಭ್ಯರ್ಥಿಯಾಗಿ ಅದೃಷ್ಟ ಪರೀಕ್ಷೆಗೆ ಸ್ಫರ್ಧೆಮಾಡಿರುವುದು ಬಿಜೆಪಿ,ಜೆಡಿಎಸ್.ಹಾಗೂ ಕಾಂಗ್ರೆಸ್ ಮೂರು ಪಕ್ಷಗಳಿಗೂ ನಡುವನ್ನುಂಟು ಮಾಡಿದೆ.


ಮಾಜಿ ಸಚಿವ ದಿ. ತಿಪ್ಪೇಸ್ವಾಮಿ ಅಬಕಾರಿ, ಸಣ್ಣ ನೀರಾವರಿ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಶಾಸಕರಾಗಿ ಸಚಿವರಾಗಿ ಜನರೊಂದಿಗೆ ಒಡನಾಟಹೊಂದಿದ್ದರು ಈಗ ತಂದೆಯ ರಾಜೀಕೀಯ ಭವಿಶ್ಯ ಉಳಿವಿಗಾಗಿ ಹೆಸರನ್ನು ಉಳಿಸಲು ಆಸ್ತಿ ಮಾರಿ ರಾಜಕೀಯ ಕಣಕ್ಕೆ ಇಳಿದಿರುವುದು ಈ ಬಾರಿ ತಾಯಿ ವಿಮಲಮ್ಮ ಸಹ ಬಿಸಿಲಿನ ತಾಪ ಲೆಕ್ಕಿಸಲ ಮಗನ ಗೆಲುವಿಗಾಗಿ ಹಗಲು ರಾತ್ರಿ ಶ್ರಮ ವಹಿಸಿ ಮಹಿಳೆಯರ ಪಡೆಕಟ್ಟಿಕೊಂಡು ಮಗನ ಗೆಲುವಿಗೆ ಶ್ರಮವಹಿಸುತ್ತಿದ್ದಾರೆ. ಅದೇ ರೀತಿ ಕ್ಷೇತ್ರದಲ್ಲಿ ತಂದೆಯ ಸಮಕಾಲಿನ ಯಜಮಾನರು. ಅಭಿಮಾನಿಗಳು ,ಯುವಕರು ಹಾಗೂ ಬಿಜೆಪಿ , ಕಾಂಗ್ರೆಸ್,ಹಾಗೂ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಕೆ,ಟಿ.ಕುಮಾರಸ್ವಾಮಿಗೆ ಬೆಂಬಲಕ್ಕೆ ನಿಂತಿರುವುದು ಕ್ಷೇತ್ರದ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ತೆಂಗಿನ ತೋಟಕ್ಕೆ ಅಪಾರ ಬೆಂಬಲ ವ್ಯಕ್ತಪಡಿಸುತ್ತಿರುವುದು ಈಗ ಬಿಜೆಪಿ , ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಹಲವು ಕಾರ್ಯಕರ್ತರು,ನಿವೃತ್ತ ಕೆಎಎಸ್ ಅಧಿಕಾರಿಗಳು ಕೆ.ಟಿ.ಕುಮಾರಸ್ವಾಮಿ ಎರಡು ಬಾರಿ ಸೋತಿದ್ದಾರೆ. ಚುನಾವಣೆ ಕಣಕ್ಕಿಳಿಯಲು ಆಸ್ತಿ ಮಾರಿದ್ದಾರೆಎಂಬ ಅನುಕಂಪದ ಹಲೆ ಎದ್ದಿರುವುದು ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷದವರಲ್ಲಿ ನಡುಕವನ್ನುಂಟು ಮಾಡಿದೆ.
ಕ್ಷೇತ್ರದ ಯಾವ ಹಳ್ಳಿ ಹಾಗೂ ನಗರದಲ್ಲಿ ನಮ್ಮಸಚಿವ ತಿಪ್ಪೇಸ್ವಾಮಿ ಮಗ ಈ ಬಾರಿ ಕುಮಾರಣ್ಣನಿಗೆ ವೋಟ್ ಹಾಕಲೇ ಬೇಕು ಗೆಲ್ಲಿಸಲೇ ಬೇಕು ಎಂಬ ಮಾತುಗಳು ಕೇಳಿಬರುತ್ತಿವೆ ವಿವಿಧ ಪಕ್ಷದ ಮುಖಂಡರು ಕಾರ್ಯಕರ್ತರ ಸಂಖ್ಯೆಯೂ ಸಹ ದಿನದಿಂದ ದಿನಕ್ಕೆ ಹೆಚ್ಚುತ್ತಲೆ ಇದೆ.
ಕ್ಷೇತ್ರದಲ್ಲಿ ಕಾಂಗ್ರೆಸ್. ಜೆಡಿಎಸ್ , ಬಿಜೆಪಿ ಹಾಗೂ ಪಕ್ಷೇತರ ತೆಂಗಿನತೋಟದ ಅಭ್ಯರ್ಥಿಗಳು ಗೆಲುವಿಗಾಗಿ ಮಿಂಚಿನ ಸಂಚಾರ ನಡೆಸಿ ರೋಡ್ ಶೋ, ಮನೆಮನೆಗೆ ಭೇಟಿ ನೀಡಿ ಮತದಾರರನ್ನು ಸೆಳೆಯಲು ಕಸರತ್ತು ನಡೆಸುವ ಬೆನ್ನಲ್ಲೇ ಮತದಾನ ನಡೆಯುವ ಕೆಲವೇ ದಿನಗಳು ಬಾಕಿರುವಾಗಲೇ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಗೆಲುವಿನ ಬಗ್ಗೆ ಬೆಟ್ಟಿಂಗ್ ಕಟ್ಟಿಕೊಳ್ಳಲು ಮುಂದಾಗಿರುವ ಮಾತುಗಳು ಜನರಲ್ಲಿ ಗುಸು ಗುಸು ಮಾತುಗಳು ಹರಿದಾಡುತ್ತಿವೆ ಎಂಬುದು ತಿಳಿದು ಬಂದಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page