ಮತದಾರರು ಆಸೆ ಆಮಿಷಗಳಿಗೆ ಬಲಿಯಾಗಬಾರದುಸಂವಿಧಾನದನಕ್ಕೆ ಗೌರವ ನೀಡಬೇಕಾದರೆ ಮತದಾನ ಮಾಡಿ

by | 30/04/23 | ಚುನಾವಣೆ-2023


ಚಳ್ಳಕೆರೆ ಸುದ್ದಿ: ಏ.30
ಭಾರತ ದೇಶದ ಸಂವಿಧಾನದಕ್ಕೆ ಗೌರವ ನೀಡಬೇಕಾದರೆ ಎಲ್ಲಾ ಪ್ರಜೆಗಳು ಮತದಾನ ಮಾಡುವುದು ಅವರ ಆಧ್ಯ ಕರ್ತವ್ಯ, ರಾಜಕೀಯ ವ್ಯಕ್ತಿಗಳ ನೀಡುವ ಆಸೆ ಆಮಿಷಗಳಿಗೆ ಬಲಿಯಾಗಬಾರದು ಎಂದು ಮಡಿಲು ಗ್ರಾಮೀಣ ಮತ್ತು ನಗರ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷ ಹೆಚ್.ಕುಮಾರಸ್ವಾಮಿ ತಿಳಿಸಿದರು.


ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಭಾನುವಾರ ಭಾತರ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೇಪ್ ಸಮಿತಿ ಚಿತ್ರದುರ್ಗ, ನೆಹರು ಯುವ ಕೇಂದ್ರ, ಮಡಿಲು ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಆಲಘಟ್ಟ, ಗೋಪನಹಳ್ಳಿ ಗ್ರಾಮ ಪಂಚಾಯತಿ ಇವರ ಸಹಯೋಗದೊಂದಿಗೆ ಮತದಾನ ಜಾಗೃತಿ ಜಾಥ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು ಭಾರತ ಸಂವಿಧಾನದ ಅಡಿಯಲ್ಲಿ ಎಲ್ಲರೂ ಕೂಡ ಜೀವಿಸುತ್ತಿದ್ದಾರೆ. ಭಾರತದ ಪ್ರಜೆಯಾದ ನಾವುಗಳು ಮತದಾನ ಮಾಡುವುದು ಶ್ರೇಷ್ಠವಾದದ್ದು, ಡಾ. ಬಿಆರ್ ಅಂಬೇಡ್ಕರ್ ಅವರು ಮತದಾನಕ್ಕೆ ವಿಶೇಷವಾದ ಸ್ಥಾನಮಾನವನ್ನು ನೀಡಿದ್ದಾರೆ ಕ್ಷೇತ್ರದ ಅಭಿವೃದ್ಧಿಗೆ ಅತ್ಯುತ್ತಮ ನಾಯಕನನ್ನು ಆಯ್ಕೆ ಮಾಡಿಕೊಳ್ಳುವಂತಹ ಶಕ್ತಿಯನ್ನು ನೀಡಿದ್ದಾರೆ. ಇಂತಹ ಶಕ್ತಿಯನ್ನು ಯಾರು ಕೂಡ ದುರುಪಯೋಗಪಡಿಸಿಕೊಳ್ಳಬಾರದು.

ರಾಜಕೀಯ ವ್ಯಕ್ತಿಗಳು ನೀಡುವಂತಹ ಆಸೆ ಆಮಿಷಗಳಿಗೆ ಬಲಿಯಾಗದೆ ಮತಗಳನ್ನು ಯಾರು ಮಾರಿಕೊಳ್ಳಬಾರದು ನಿಷ್ಠಾವಂತರಿಗೆ ಮತವನ್ನು ಚಲಾಯಿಸಿ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿ ಎಂದು ತಿಳಿಸಿದರು.

ಗೋಪನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಓ ಯೋಗೇಶ್ ಮಾತನಾಡಿ ಗ್ರಾಮೀಣ ಪ್ರದೇಶದ ಮತದಾರರು ಅಭಿವೃದ್ಧಿ ಮಾಡುವಂತ ನಾಯಕನನ್ನು ಕ್ಷೇತ್ರದ ನಾಯಕನನ್ನಾಗಿ ಮಾಡಿಕೊಳ್ಳುವ ಜವಾಬ್ದಾರಿ ಕರ್ತವ್ಯ ನಿಮ್ಮ ಮೇಲೆ ಇದೆ, ಹಾಗಾಗಿ ನಿಮ್ಮ ಅಮೂಲ್ಯವಾದ ಮತವನ್ನು ನಿಷ್ಠಾವಂತ ಪ್ರಾಮಾಣಿಕವಾದ ನಾಯಕನಿಗೆ ನೀಡಿ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದರು.

ಭಾರತ ಸಂವಿಧಾನದಲ್ಲಿ ಮತದಾನ ಮಾಡುವುದಕ್ಕೆ ವಿಶೇಷವಾದ ಸ್ಥಾನಮಾನಗಳನ್ನು ನೀಡಲಾಗಿದೆ ಮತದಾನ ಮಾಡದೆ ಇರುವಂತವರು ಭಾರತ ಸಂವಿಧಾನಕ್ಕೆ ಅಪಮಾನ ಮಾಡಿದಂತೆ ಆದ್ದರಿಂದ ಸಂವಿಧಾನಕ್ಕೆ ಗೌರವ ಕೊಡಬೇಕಾದರೆ ಮತದಾನವನ್ನು ಪ್ರತಿಯೊಬ್ಬರೂ ಮಾಡಬೇಕೆಂದು ತಿಳಿಸಿದರು.

ಗ್ರಾಮದ ಪ್ರಮುಖ ಬೀದಿಗಳಲ್ಲಿ ಮತದಾನ ಜಾಗೃತಿಯಲ್ಲಿ ಬಿತ್ತಿ ಚಿತ್ರಗಳನ್ನು ಹಿಡಿದುಕೊಂಡು ಮತದಾರರಿಗೆ ಮತದಾನದ ಜಾಗೃತಿಯನ್ನು ಮೂಡಿಸಲಾಯಿತು.

ಈ ಒಂದು ಸಂದರ್ಭದಲ್ಲಿ ಮಡಿಲು ಗ್ರಾಮೀಣ ಮತ್ತು ನಗರ ಅಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಆನಂದಪ್ಪ.ಡಿ. ಉಪಾಧ್ಯಕ್ಷ ಕಿರಣ್ ಕುಮಾರ್, ಸದಸ್ಯ ಧ್ಯಾಮ ಕುಮಾರ್, ಪ್ರದೀಪ್, ಮಹಾಂತೇಶ್, ಲಕ್ಷ್ಮಿಪತಿ, ಪ್ರವೀಣ್ ಹಾಗೂ ಆಶಾ ಕಾರ್ಯಕರ್ತರಾದ ಗೌರಮ್ಮ, ಭಾರತಮ್ಮ,ವಸಂತಮ್ಮ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page