ಮುಖ್ಯಪಶುವೈದ್ಯಾಧಿಕಾರಿ ಡಾ.ನಾಗರಾಜ್ ರವರು ಪಶು ವೈದ್ಯಕೀಯ ಇಲಾಖೆಯಲ್ಲಿ ಸಲ್ಲಿಸಿರುವ ಸೇವೆ ಗುರುತಿಸಿ, ಶ್ರೇಷ್ಠ ಪಶುವೈದ್ಯ ಪ್ರಶಸ್ತಿ ನೀಡಲಾಗಿದೆ

by | 27/04/24 | ಕರ್ನಾಟಕ

ಬೆಂಗಳೂರು :
ಹೆಬ್ಬಾಳದ ಕರ್ನಾಟಕ ಪಶುವೈದ್ಯಕೀಯ ಪರಿಷತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವಪಶುವೈದ್ಯಕೀಯ ದಿನಾಚರಣೆಯಲ್ಲಿ ಹೆಚ್.ಟಿ.ಡಾ.ನಾಗರಾಜ್ ಮುಖ್ಯಪಶು ವೈದ್ಯಾಧಿಕಾರಿಗಳು, ಪಶುಆಸ್ಪತ್ರೆ, ಹಿರಿಯೂರು ಇವರು ಪಶುವೈದ್ಯಕೀಯ ಇಲಾಖೆಯಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಶ್ರೇಷ್ಠ ಪಶುವೈದ್ಯ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು.
ಡಾ.ನಾಗರಾಜ್ ಹೆಚ್.ಟಿ. ಇವರು ತಾಲ್ಲೂಕಿನ ಸೋಮೇರಹಳ್ಳಿ ಗ್ರಾಮದ ರೈತಾಪಿ ಕುಟುಂಬದ ಶ್ರೀಮತಿ ಅನಸೂಯಮ್ಮ ಶ್ರೀ ಬಿ.ತಿಪ್ಪೇಸ್ವಾಮಿ ಇವರ ಪುತ್ರನಾಗಿದ್ದು, 2001 ರಲ್ಲಿ ಬೀದರ್ ಪಶುವೈದ್ಯಕೀಯ ಮಹಾವಿದ್ಯಾಲಯದಿಂದ ಪದವಿ ಪಡೆದು, 2006 ರಲ್ಲಿ ಪಶುಪಾಲನಾ ಇಲಾಖೆಯಲ್ಲಿ ಪಶುವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದರು.
ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರ ಗ್ರಾಮದಲ್ಲಿ 3 ವರ್ಷ, ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದಲ್ಲಿ 13 ವರ್ಷಗಳ ಸೇವೆ ಸಲ್ಲಿಸಿ, ಹಾಲಿ ಹಿರಿಯೂರಿನ ಪಶು ಆಸ್ಪತ್ರೆಯಲ್ಲಿ ಮುಖ್ಯ ಪಶುವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ವಿಶ್ವ ಪಶುವೈದ್ಯಕೀಯ ದಿನಾಚರಣೆಯ ಸಮಾರಂಭದ ಉದ್ಘಾಟನೆಯನ್ನು ವಿಶ್ರಾಂತ ಕುಲಪತಿ, ಕ.ಪ.ಪ. ಮೀ.ವಿ. ವಿ.ಗಳಾದ , ಪ್ರೊಫೆಸರ್ ಸುರೇಶ್ ಹೊನ್ನಪ್ಪ ಗೋಳ್ ರವರು ನೆರವೇರಿಸಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪ್ರೊಫೆಸರ್ ಕೆ.ಸಿ.ವೀರಣ್ಣ ಕುಲಪತಿಗಳು, ಕರ್ನಾಟಕ ಪಶು ವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಶ್ವವಿದ್ಯಾನಿಲಯ ಬೀದರ್, ಶ್ರೀ ನವೀನ್ ಪಶುಪತಿ ಅಧ್ಯಕ್ಷರು, ಕೆ.ಪಿ.ಎಫ್.ಬಿ.ಎ. ಬೆಂಗಳೂರು, ವಿಶೇಷ ಆಹ್ವಾನಿತರಾಗಿ ಪ್ರೊಫೆಸರ್ ಎನ್ ನಾರಾಯಣಸ್ವಾಮಿ ಡೀನ್ , ಪಶು ವೈದ್ಯಕೀಯ ಮಹಾವಿದ್ಯಾಲಯ ಬೆಂಗಳೂರು, ಡಾ. ತಿಪ್ಪೇಸ್ವಾಮಿ ಟಿ, ನಿಬಂಧಕರು, ಕರ್ನಾಟಕ ಪಶು ವೈದ್ಯಕೀಯ ಪರಿಷತ್ತು ಹಾಗೂ ಡಾ.ಟಿ.ಚಂದ್ರಶೇಖರ್ ಉಪನಿರ್ದೇಶಕರು (ಆಡಳಿತ )ಬೆಂಗಳೂರು ನಗರ, ರವರು ಭಾಗವಹಿಸಿದ್ದರು.
ಸಮಾರಂಭದ ಅಧ್ಯಕ್ಷತೆಯನ್ನು ಡಾಕ್ಟರ್ ಎಚ್ ಸಿ ಇಂದ್ರೇಶ್, ಅಧ್ಯಕ್ಷರು, ಕರ್ನಾಟಕ ಪಶು ವೈದ್ಯಕೀಯ ಪರಿಷತ್ತು, ಕರ್ನಾಟಕ ಸರ್ಕಾರ, ಇವರು ವಹಿಸಿದ್ದರು. ನಿವೃತ್ತ ಡೀನ್ ರಾದ ಡಾ.ಎಚ್.ಎ.ಉಪೇಂದ್ರ ರವರು ಹಾಗೂ ಬೆಂಗಳೂರು ಪಶು ವೈದ್ಯಕೀಯ ಮಹಾ ವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಬಿ ಎಂ ವೀರೆಗೌಡರವರು ಉಪನ್ಯಾಸ ನೀಡಿದರು. ಸಮಾರಂಭದ ಪ್ರಾಯೋಜಕತ್ವವು ಪೌಲ್ಟ್ರಿ ಫಾರ್ಮರ್ಸ್ ಮತ್ತು ಬ್ರೀಡರ್ಸ್ ಅಸೋಸಿಯೇಷನ್, ಬೆಂಗಳೂರು ರವರಿಂದ ನೆರವೇರಿಸಲ್ಪಟ್ಟಿತು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page