ಮೈಲನಹಳ್ಳಿ ಗ್ರಾಮದಲ್ಲಿ ಸಡಗರ ಸಂಭ್ರಮದಿಂದ ಜರುಗಿದ ದೀಪಾವಳಿ- ಗೌರಿ ಹಬ್ಬ

by | 14/11/23 | ಸುದ್ದಿ

ಚಳ್ಳಕೆರೆ: ತಾಲ್ಲೂಕಿನ ಮೈಲನಹಳ್ಳಿಯಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಹಲವು ಮನೆಗಳಲ್ಲಿ ನೋಪಿ ಗೌರಿಯನ್ನ ಪ್ರತಿಷ್ಠಾಪಿಸಿ ಸಂಭ್ರಮದಿಂದ ಹಬ್ಬವನ್ನ ಆಚರಿಸಿದರು. ಅಮಾವಾಸ್ಯೆಯ ಮೊದಲ ದಿನವಾದ ಭಾನುವಾರ ಸಂಜೆ ತಳೀರು-ತೋರಣ, ಚೆಂಡು ಹೂಗಳಿಂದ ಅಲಂಕೃತಗೊಂಡ ಮಂಟಪದಲ್ಲಿ ನೊಂಪಿ ಗೌರಿಯ ಕಳಸವನ್ನು ಒಡವೆ ವಸ್ತ್ರಗಳು, ವಿಶೇಷ ಹೂವುಗಳಿಂದ ಅಲಂಕರಿಸಿ, ಪ್ರತಿಷ್ಠಾಪಿಸಿ, ಕುಟುಂಬ ಸದಸ್ಯರೆಲ್ಲರೂ ಸೇರಿ ಪೂಜಿಸಿದರು. ನಂತರ ಗುರುಗಳ ಪಾದಪೂಜೆಯನ್ನು ನೆರವೇರಿಸಿದರು. ಹಬ್ಬದ ಎರಡನೇ ದಿನವಾದ ಸೋಮವಾರ ಮುಂಜಾನೆ ಕೇದಾರೇಶ್ವರ ವ್ರತ, ಜಗನ್ಮಾಥೆ ದೇವಿರಮ್ಮ ದೇವಿಯ ಆರಾಧನೆ ಪ್ರಯುಕ್ತ, ಚಿಗಳಿ-ತಂಬಿಟ್ಟುಗಳ ಮಹಾ ಆರತಿ, ತುಂಬೆ ಹೂವಿನ ಅಲಂಕಾರ ಮಂಗಲಾರುತಿ ನಡೆಯಿತು. ಸಂಜೆ ಗ್ರಾಮದ ಚನ್ನವೀರಪ್ಪ, ಗೌಡ್ರು ಬಸವರಾಜಪ್ಪ, ಬಸೆಟಪ್ಪರ ತಿಪ್ಪೇಸ್ವಾಮಿ ಯವರ ಮನೆಗಳಲ್ಲಿ ಪ್ರತಿಷ್ಠಾಪಿಸಲಾಗಿದ್ದ ನೋಪಿಗೌರಿಯನ್ನ ಸರಳ – ಸಾಮೂಹಿಕವಾಗಿ ಮೆರವಣಿಗೆ ಮೂಲಕ ಗ್ರಾಮದ ಹೊರವಲಯದ ನೀರು ಸಂಗ್ರಹವಿದ್ದ ತೊಟ್ಟಿಯಲ್ಲಿ ಮಹಾ ಮಂಗಳಾರತಿ ನಡೆಸಿ ವಿಸರ್ಜನೆ ಮಾಡಲಾಯಿತು. ಸರಳ ಮೆರವಣಿಗೆಯಲ್ಲಿ ಮೈಲನಹಳ್ಳಿ ದಿನೇಶ್, ಅಶೋಕ್, ಸತೀಶ್, ಗೌಡ್ರು ಕರಿಬಸವರಾಜ್, ಭರತ್ ಪಟೇಲ್, ವಸಂತ್, ಬಸವರಾಜ್, ಜಯಚಂದ್ರಪ್ಪ, ಅಭಿಲಾಷ್, ತ್ಯಾಗರಾಜ್, ದರ್ಶನ್, ನಿಖಿಲ್, ಈಶ್ವರಪ್ಪ, ಸೇರಿದಂತೆ ಗಂಡು ಹೆಣ್ಣುಮಕ್ಕಳು ಸಮನಾಗಿ ಭಾಗವಹಿಸಿದರು.
*✍🏻-ಮೈಲನಹಳ್ಳಿ ದಿನೇಶ್ ಕುಮಾರ್*

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page