ಹೊರ ರಾಜ್ಯಗಳಿಗೆ ಮೇವು ಸಾಗಾಣಿಕೆ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸರ್ಕಾರದ ಜಂಟಿ ಕಂದಾಯ ಇಲಾಖೆ.ಟಿ.ಸಿ.ಕಾಂತರಾಜ್ ..

by | 22/11/23 | ಜನಧ್ವನಿ


ಬೆಂಗಳೂರು.ನ.23 ರಾಜ್ಯದಲ್ಲಿ ತೀವ್ರ ಬರಗಾಲ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯಿಂದ ನೆರೆಯ ಹೊರ ರಾಜ್ಯಗಳಾದ ಕೇರಳ ಮತ್ತು ತಮಿಳುನಾಡು ರಾಜ್ಯಗಳಿಗೆ ಜಾನುವಾರುಗಳ ಮೇವು ಸಾಗಾಣಿಕೆ ಮಾಡಲು ನಿಷೇಧ ಹೇರಿ ತಕ್ಷ ಣದಿಂದ ಟಿ.ಸಿ. ಕಾಂತರಾಜ್ಸ ರ್ಕಾರದ ಜಂಟಿ ಕಾರ್ಯದರ್ಶಿ,ಕಂದಾಯ ಇಲಾಖೆ
(ವಿಪತ್ತು ನಿರ್ವಹಣೆ ಮತ್ತು ನೋ.ಮು) ಅವರು ಆದೇಶ ಹೊರಡಿಸಿದ್ದಾರೆ.

ಮುಂಗಾರು ಹಾಗೂ ಹಿಂಗಾರು ವೈಫಲ್ಯದಿಂದ ಬರಪೀಡಿತ ಜಿಲ್ಲೆಗಳನ್ನು ಪ್ರದೇಶವೆಂದು ಘೋಸಲಾಗಿದೆ. ಹೀಗಾಗಿಯಾವುದೇ ಜಿಲ್ಲೆಯಲ್ಲಿನ ಗೋ ಶಾಲೆಗಳಿಗೆ ಮತ್ತು ದನಕರು ಇತರೆ ಜಾನುವಾರುಗಳಿಗೆ ಮೇವಿನ ಪೂರೈಕೆಯಲ್ಲಿ ಯಾವುದೇ ಕೊರತೆ ಉಂಟಾಗದಂತೆ ನೋಡಿಕೊಳ್ಳಲು ಮೇವು ದಾಸ್ತಾನು ಮಾಡಬೇಕಿದೆ.

ಇದಕ್ಕಾಗಿಯೇ ಬರಪೀಡಿತ ಜಿಲ್ಲೆಯಿಂದ ನೆರೆಯ ಹೊರ ರಾಜ್ಯಗಳಾದ ಕೇರಳ, ತಮಿಳುನಾಡು ರಾಜ್ಯಗಳಿಗೆ ಜಾನುವಾರುಗಳ ಮೇವು ಆಗಿರುವ ರಾಗಿ, ಭತ್ತ, ಜೋಳದ ಒಣಹುಲ್ಲು, ಹಸಿಹುಲ್ಲು, ಕಬ್ಬಿನ ತೊಂಡೆಗಳ ಸಾಗಾಣಿಕೆಯನ್ನು ತಕ್ಷ ಣದಿಂದ ಜಾರಿಗೆ ಬರುವಂತೆ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.

ಮೇವು ಸಾಗಣೆæ ನಿರ್ಬಂಧ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ 2020ರ ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ವಯ
ಮುಂಗಾರು ಹಂಗಾಮಿನಲ್ಲಿ ಮೇಲೆ ಸರ್ಕಾರದ ಆದೇಶಗಳಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ 195 ತಾಲ್ಲೂಕುಗಳನ್ನು
ದಿನಾಂಕ: 13.09.2023ರಿಂದ ಜಾರಿಗೆ ಬರುವಂತೆ ಬರಪೀಡಿತ ತಾಲ್ಲೂಕುಗಳೆಂದು ಹಾಗೂ ದಿನಾಂಕ:
12.10.2023ರಿಂದ ಜಾರಿಗೆ ಬರುವಂತೆ 21 ತಾಲ್ಲೂಕುಗಳು ಜೊತೆಗೆ ದಿನಾಂಕ:04.11.2023ರಿಂದ ಜಾರಿಗೆ ಬರುವಂತೆ ತಾಲ್ಲೂಕುಗಳು ಒಟ್ಟು 223 ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕುಗಳೆಂದು ಘೋಷಿಸಿದೆ. ಸದರಿ ಬರಪೀಡಿತ ಪ್ರದೇಶಗಳಲ್ಲಿ ಜಾನುವಾರುಗಳಿಗೆ ಮೇವಿನ ಸಮಸ್ಯೆ ತೀವ್ರವಾಗಿದ್ದು,
ರಾಜ್ಯದ ಹಲವು ಜಿಲ್ಲೆಗಳಿಂದ ಮೇವನ್ನು ಹೊರ ರಾಜ್ಯಗಳಾದ ತಮಿಳುನಾಡು, ಕೇರಳ, ಆಂದ್ರ
ಪುದೇಶ, ತೆಲಂಗಾಣ, ಮಹಾರಾಷ್ಟ್ರ ಮತ್ತು ಗೋವಾಗಳಿಗೆ ಸಾಗಿಸುತ್ತಿರುವುದು ಕಂಡುಬಂದಿದೆ.ಸಚಿವ ಸಂಪುಟದ ಉಪ ಸಮಿತಿಯ ನಿರ್ಣಯದಂತೆ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಂತರ ರಾಜ್ಯ ಮೇವು ಸಾಗಾಣಿಕೆಯನ್ನು ನಿರ್ಬಂಧಿಸಲು ನಿರ್ಣಯಿಸಿರುವಂತೆ ಸರ್ಕಾರವು ರಾಜ್ಯದಲ್ಲಿನ ಜಾನುವಾರುಗಳಿಗೆ ಮೇವು ಅಗತ್ಯವಿರುವುದರಿಂದ ಹೊರ ರಾಜ್ಯಗಳಿಗೆ ಮೇವು ಸಾಗಾಣಿಕೆ ಮಾಡುವುದನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲು ತೀರ್ಮಾನಿಸಲಾಗಿದೆ. ಅದರಂತೆ ಈ ಕೆಳಕಂಡಂತೆ
ಆದೇಶಿಸಿದೆ: ಸರ್ಕಾರದ ಆದೇಶ ಸಂಖ್ಯೆ: ಕಂಇ 497 ಟಿಎನ್ಆರ್ 2023: ಬೆಂಗಳೂರು: ದಿನಾಂಕ:22-11-2023. ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2023ನೇ ಸಾಲಿನ ಮುಂಗಾರು
ಹಂಗಾಮಿನಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ The Disaster Management Act, 2005 ರ ನಿಯಮ-24 (a) ಹಾಗೂ Manual for Drought Management-2020 ರನ್ವಯ ಅಂತರ ರಾಜ್ಯ ಮೇವು ಸಾಗಾಣಿಕೆಯನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿದ ದಿನಾಂಕದಿಂದ ಆರು ತಿಂಗಳು ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಜಾರಿಗೆ ಬರುವಂತೆ ನಿರ್ಬಂಧಿಸಿ ಆದೇಶಿಸಿದ. ರಾಜ್ಯದಿಂದ ಮೇವು ಹೊರ ರಾಜ್ಯಗಳಿಗೆ ಸಾಗಾಣಿಕೆಯಾಗದಂತೆ ಹಾಗೂ ಒಣ ಮೇವನ್ನು ಯಾವುದೇ ರೂಪದಲ್ಲಿ ಹೊರ ರಾಜ್ಯಗಳಿಗೆ ಸಂಸ್ಕರಿಸಿ, ಸಾಗಾಣಿಕೆ ಮಾಡುವುದನ್ನು ಕಡ್ಡಾಯವಾಗಿ
ನಿಷೇಧಿಸಿದೆ. ಈ ಸಂಬಂಧ ಅವಶ್ಯವಿರುವ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ಮೇವು ಸಾಗಾಣಿಕೆಯನ್ನು ನಿರ್ಬಂಧಿಸುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲಾ ಪೊಲೀಸ್ಅ ಧೀಕ್ಷಕರುಗಳು ಸಹ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಹೊರ ರಾಜ್ಯಗಳಿಗೆ ಮೇವು ಸಾಗಾಣಿಕೆಯನ್ನು ನಿರ್ಬಂಧಿಸುವಲ್ಲಿ ಲೋಪವೆಸಗುವ
ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗಳು ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವುದುಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ
(ಟಿ.ಸಿ. ಕಾಂತರಾಜ್)
ಸರ್ಕಾರದ ಜಂಟಿ ಕಾರ್ಯದರ್ಶಿ, ಕಂದಾಯ ಇಲಾಖೆ
(ವಿಪತ್ತು ನಿರ್ವಹಣೆ ಮತ್ತು ನೋ.ಮು)

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page