ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆಧ್ಯತೆಯಾಗಿದೆ. ಸಿ.ಎಂ ಸಿದ್ದರಾಮಯ್ಯ

by | 02/11/23 | ಕರ್ನಾಟಕ

ಹಂಪಿ ನ.2. ಮುಖ್ಯಮಂತ್ರಿ Siddaramaiah ಅವರು
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಂಪಿಯಲ್ಲಿ ಆಯೋಜಿಸಿದ್ದ “ಕರ್ನಾಟಕ ಸಂಭ್ರಮ- 50” ನ್ನು ಉದ್ಘಾಟಿಸಿ, ಮಾತನಾಡಿದರು.

ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆಧ್ಯತೆಯಾಗಿದೆ.
ಬಸವಣ್ಣನ ನಾಡು ಇದು. ಕಲ್ಯಾಣ ಕರ್ನಾಟಕ ಎಂದು ಕೇವಲ ಹೆಸರಿಟ್ಟರೆ ಸಾಲದು. ನಿಜವಾದ ಅರ್ಥದಲ್ಲಿ ಈ ಭಾಗದ ಜನರು ಕಲ್ಯಾಣ ಕಾಣಬೇಕು ಎನ್ನುವ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ಈ ಉದ್ದೇಶದಿಂದಲೇ 371 (ಜೆ) ಜಾರಿ ಮಾಡಿದೆವು. ಮಲ್ಲಿಕಾರ್ಜುನ ಖರ್ಗೆಯವರೂ ಸೇರಿ ಹಲವರ ಹೋರಾಟದ ಫಲವಾಗಿ 371ಜೆ ಜಾರಿಯಾಗಿದೆ. ಇದು ಜಾರಿ ಆಗಿದ್ದರಿಂದ ಈ ಭಾಗಕ್ಕೆ ಹೆಚ್ಚೆಚ್ಚು ಅನುದಾನ ಅವಕಾಶಗಳು ಸೃಷ್ಟಿಯಾಗಿವೆ. ನಾನು ಮುಖ್ಯಮಂತ್ರಿ ಆದ ಬಳಿಕ ಬಾಕಿ ಇದ್ದ ಅನುದಾನದ ಜತೆಗೆ ಹೆಚ್ಚುವರಿಯಾಗಿ ಈ ಭಾಗಕ್ಕೆ 3,000 ಕೋಟಿ ರೂ. ಅನುದಾನ ನೀಡಿದ್ದೆ.

ಬಸವಣ್ಣನವರೂ ಸೇರಿ ಶರಣರು ಮೌಢ್ಯದ ವಿರುದ್ಧ ಹೋರಾಡಿ, ಜಾಗೃತಿ ಮೂಡಿಸಿದ್ದರು. ನಾನೂ ಕೂಡ ಮೌಢ್ಯವನ್ನು ಧಿಕ್ಕರಿಸಿ ಈ ನಾಡಿನ ಜನರ ಮೇಲೆ ನಂಬಿಕೆ ಇಟ್ಟಿದ್ದೇನೆ. ದೇವರಲ್ಲಿ, ದೇವರು ಎನ್ನುವ ಶಕ್ತಿಯಲ್ಲಿ ನನಗೆ ನಂಬಿಕೆ ಇದೆ. ಆದರೆ ಮೌಢ್ಯದಲ್ಲಿ ನಂಬಿಕೆಯಿಲ್ಲ.

ಕನ್ನಡ ಬದುಕನ್ನು ಉನ್ನತೀಕರಿಸುವ ಆಶಯದಿಂದ ಏಕೀಕರಣ ಚಳವಳಿ ನಡೆದು ಹಲವರ ಪ್ರಾಣ ತ್ಯಾಗವನ್ನೂ ಪಡೆದು ವಿಶಾಲ ಕನ್ನಡ ನಾಡು ಉದಯವಾಗಿದೆ. ಕರ್ನಾಟಕ ನಾಮಕರಣಗೊಂಡು 50 ನೇ ವರ್ಷಕ್ಕೆ ಬಿಜೆಪಿ ಇಡೀ ವರ್ಷ ಕನ್ನಡ ಸಂಭ್ರಮವನ್ನು ಆಚರಿಸಬೇಕಿತ್ತು. ಅವರು ಆಚರಿಸಲಿಲ್ಲ. ಆದರೆ ನಮ್ಮ ಸರ್ಕಾರ ಬಂದ ತಕ್ಷಣ ಮೊದಲ ಬಜೆಟ್ ನಲ್ಲೇ “ಕನ್ನಡ ಸಂಭ್ರಮ-50” ನ್ನು ಘೋಷಿಸಿದೆ. ನಾವು ಕರ್ತವ್ಯಲೋಪ ಮಾಡಲಿಲ್ಲ.

ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ಆಡಳಿತದಲ್ಲಿ ಕನ್ನಡ ಪರಿಣಾಮಕಾರಿಯಾಗಿ ಜಾರಿ ಆಗಲು ರಾಜ್ಯಾದ್ಯಂತ ಸುತ್ತಾಡಿದ್ದೆ. ಎಲ್ಲಾ ಕಚೇರಿಗಳಿಗೆ ಕನ್ನಡ ಟೈಪಿಂಗ್ ಯಂತ್ರವನ್ನು ನೀಡಿ ಐಎಎಸ್ ಅಧಿಕಾರಿಗಳೂ ಕೂಡ ಕನ್ನಡವನ್ನು ಆಡಳಿತ ಭಾಷೆಯಾಗಿ ಬಳಸಲು ಪ್ರೇರೇಪಿಸಿದ್ದೆ.

ಇತರೆ ಭಾಷೆಗಳನ್ನು ಕಲಿಯಿರಿ, ಗೌರವಿಸಿರಿ. ಆದರೆ ಕನ್ನಡದಲ್ಲೇ ವ್ಯವಹರಿಸಿರಿ. ಕನ್ನಡ ಜ್ಯೋತಿಯನ್ನು ರಾಜ್ಯಾದ್ಯಂತ ಸಂಭ್ರಮದಿಂದ ಸ್ವಾಗತಿಸಬೇಕು ಎಂದು ಜನರಲ್ಲಿ ಮನವಿ ಮಾಡುತ್ತೇನೆ.

ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಆರ್.ಗವಿಯಪ್ಪ, ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್ ಜಮೀರ್ ಅಹ್ಮದ್ ಖಾನ್, ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಈ.ತುಕಾರಾಂ, ಡಾ.ಎನ್.ಟಿ ಶ್ರೀನಿವಾಸ್, ಜಿ.ಎನ್.ಗಣೇಶ್, ಲತಾ, ಮಂಜುನಾಥ್, ಕೆ.ಎಂ.ಎಫ್ ಅಧ್ಯಕ್ಷರಾದ ಭೀಮಾನಾಯ್ಕ್, ಮಾಜಿ ಸಂಸದ ಉಗ್ರಪ್ಪ ಸೇರಿ ಇಲಾಖಾ ಅಧಿಕಾರಿಗಳು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page