ಸಾಲು ಸಾಲು ಎತ್ತಿನಗಾಡಿಗಳ ಸೊಬಗು ಮಿಂಚೇರಿ ಜಾತ್ರೆಯತ್ತ ಸಾಗಿದ ಬಂಡಿಗಳು.

by | 24/12/23 | ಸಾಂಸ್ಕೃತಿಕ


ಚಿತ್ರದುರ್ಗ ಡಿ.23. ಎತ್ನತಿ ಗಾಡಿ ಏರೋಣ ಬನ್ನಿ ಮಿಂಚೇರಿ ಯಾತ್ರೆ ಮಾಡೋಣ ಬನ್ನಿ’ ಎಂಬ ಹರ್ಷೋದ್ಘಾರದೊಂದಿಗೆ ಮ್ಯಾಸ ಬೇಡ ಬುಡಕಟ್ಟು ಸಂಸ್ಕೃತಿಯ ಮ್ಯಾಸ ನಾಯಕ ಸಮುದಾಯದವರು ಮಿಂಚೇರಿ ಜಾತ್ರೆಯಲ್ಲಿ ಪಾಲ್ಗೊಳ್ಳಲು ಶನಿವಾರ ಎತ್ತಿನಗಾಡಿಗಳಲ್ಲಿ ತೆರಳಿದರು.ಬಚ್ಚಬೋರನಹಟ್ಟಿ ಮಾರ್ಗವಾಗಿ ಗೋನೂರು ರಾಷ್ಟ್ರೀಯ ಹೆದ್ದಾರಿ ಮೂಲಕ ಚಿತ್ರದುರ್ಗ, ಸೀಬಾರ, ಗೂಳಯ್ಯನಹಟ್ಟಿ, ಕ್ಯಾಸಾಪುರ, ಕಡ್ಲೆಗುದ್ದು, ಮೇಗಳಹಟ್ಟಿ, ಕೋಣನೂರು, ಚುಕ್ಕೇನಹಳ್ಳಿ, ಸಿರಿಗೆರೆ, ಮದಕರಿಪುರ ಹಾಗೂ ಮಿಂಚೇರಿಪುರದವರೆಗೆ ಎತ್ತಿನಬಂಡಿ ಯಾತ್ರೆ ನಡೆಯಲಿದೆ. ಮ್ಯಾಸ ನಾಯಕ ಸಮುದಾಯದ ಸಾಂಸ್ಕೃತಿಕ ವೀರ ಗಾದ್ರಿಪಾಲ ನಾಯಕ ಸ್ವಾಮಿಯ ಹೆಸರಿನಲ್ಲಿ ಸಾಲು ಸಾಲಾಗಿ ಹೊರಟ ಎತ್ತಿನ ಗಾಡಿಗಳು ಕಣ್ಮನ ಸೆಳೆದವು.ಗಾದ್ರಿ ಪಾಲನಾಯಕ ಸ್ವಾಮಿಯ ಸಾಲು ಸಾಲು ಎತ್ತಿನ ಗಾಡಿಗಳೊಂದಿಗೆ ಹಳ್ಳಿಯ ಸೊಬಗಿನಿಂದ ಕಂಗೊಳಿಸುವ ಮಿಂಚೇರಿ ಜಾತ್ರಾ ಮಹೋತ್ಸವ.

ಚಿತ್ರದುರ್ಗ ತಾಲ್ಲೂಕಿನ ಬಚ್ಚಬೋರನಹಟ್ಟಿ ಗ್ರಾಮದ ಮ್ಯಾಸ ನಾಯಕ ಸಮುದಾಯದವರು ತಮ್ಮ ಆರಾಧ್ಯ ಧೈವ ಹಾಗೂ ಸಾಂಸ್ಕೃತಿಕ ವೀರ ಎಂದೇ ಖ್ಯಾತಿ ಗಳಿಸಿರುವ ಗಾದ್ರಿ ಪಾಲನಾಯಕ ಸ್ವಾಮಿಯ ಹೆಸರಿನಲ್ಲಿ ಮಿಂಚೇರಿ ಯಾತ್ರೆಯ ಮಹೋತ್ಸವ ಪ್ರತಿ ಐದು ವರ್ಷಕ್ಕೊಮ್ಮೆ ನಡೆಯುತ್ತದೆ. ಈ ಮಹೋತ್ಸವದಲ್ಲಿ ಎತ್ತಿನ ಗಾಡಿಗಳನ್ನು ಶೃಂಗಾರ ಮಾಡಿಕೊಂಡು ಸಿರಿಗೆರೆ ಸಮೀಪದ ಹೊಳಲ್ಕೆರೆ ತಾಲೂಕು ಮಿಂಚೇರಿ ಗುಡ್ಡದ ಗಾದ್ರಿಪಾಲನಾಯಕನ ಸನ್ನಿಧಾನಕ್ಕೆ ನೂರಾರು ಎತ್ತಿನ ಗಾಡಿಗಳೊಂದಿಗೆ ಪಯಣ ಬೆಳೆಸುತ್ತಾರೆ.

ಬುಡಕಟ್ಟು ಸಂಸ್ಕೃತಿಯ ಆಚರಣೆಗಳಲ್ಲಿ ಒಂದಾಗಿರುವ ಗಾದ್ರಿಪಾಲನಾಯಕ ಸ್ವಾಮಿಯ ಮಿಂಚೇರಿ ಯಾತ್ರೆಯನ್ನು ಪ್ರತಿ ಐದು ವರ್ಷಗಳಿಗೊಮ್ಮೆ ಶತ ಶತಮಾನಗಳಿಂದಲೂ ಆಚರಿಸುತ್ತಾ ಬಂದಿದ್ದಾರೆ.

ಆರು ದಿನಗಳ ಉತ್ಸವ : ಈ ಬಾರಿಯ ಮಿಂಚೆರಿ ಜಾತ್ರಾ ಮಹೋತ್ಸವ 2023ರ ಡಿಸೆಂಬರ್ 23 ರಿಂದ 28 ರವರೆಗೆ ನಡೆಯಲಿದೆ. ಈ ಮಿಂಚೇರಿ ಯಾತ್ರಾ ಮಹೋತ್ಸವದಲ್ಲಿ ವಿಶಿಷ್ಟ ಆಚರಣೆಯನ್ನು ಕಾಣಬಹುದಾಗಿದ್ದು, ಬುಡಕಟ್ಟು ಸಂಸ್ಕೃತಿಯ ವೈಭವ ಮೇಳೈಸಲಿದೆ.
ಡಿಸೆಂಬರ್ 23ರಂದು ಶನಿವಾರ ಉದಯ ಕಾಲಕ್ಕೆ ದೇವರ ಮುತ್ತಯ್ಯಗಳ ಆಗಮನವಾದ ನಂತರ ಬೆಳಿಗ್ಗೆ 7ಕ್ಕೆ ದೇವರ ಮಜ್ಜನಬಾವಿಯಲ್ಲಿ ಗುರು-ಹಿರಿಯರೊಂದಿಗೆ ಗಂಗಾಪೂಜೆ ಹಾಗೂ ಬೆಳಿಗ್ಗೆ 11.30ಕ್ಕೆ ಮಿಂಚೇರಿ ಯಾತ್ರಾ ಮಹೋತ್ಸವ ಆರಂಭವಾಗಲಿದೆ. ದೇವರ ಮುತ್ತಯ್ಯಗಳೊಂದಿಗೆ ಊರಿನಿಂದ ನಿರ್ಗಮಿಸಿ ಅಲ್ಲಿಂದ ಕಕ್ಕಲು ಬೆಂಚಲ್ಲಿ ಪೂಜೆ ಸಲ್ಲಿಸಿ, ಯಾತ್ರೆ ಮುಂದುವರೆಯುವುದು. ಅಂದು ಸಂಜೆ 7ಕ್ಕೆ ಕ್ಯಾಸಾಪುರದ ಬಯಲಿನಲ್ಲಿ ಸ್ವಾಮಿಗೆ ಪೂಜೆ ನಂತರ ಬೀಡು ಬೀಡುವುದು. ನಂತರ ರಾತ್ರಿ ಭಜನೆ, ಕೋಲಾಟ, ಸೋಬಾನೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವುದು.
ಡಿಸೆಂಬರ್ 24ರಂದು ಬೆಳಿಗ್ಗೆ 7ಕ್ಕೆ ಸಕಲ ಸದ್ಭಕ್ತರಿಂದ ಸ್ವಾಮಿಯ ಪೂಜೆ ನಂತರ ಯಾತ್ರೆ ಮುಂದುವರೆಯುವುದು. ಮಧ್ಯಾಹ್ನ 12ಕ್ಕೆ ಸಿರಿಗೆರೆ ಡಿ.ಮೇದಕೇರಿಪುರ ವರತಿನಾಯಕನ ಕೆರೆಯ ದಂಡೆಯಲ್ಲಿ ವಿಶ್ರಾಂತಿ.
ನಂತರ ಕೆರೆಯ ದಂಡೆಯಲ್ಲಿ ಪೂಜೆ ಮುಗಿಸಿಕೊಂಡು ಪಶುಪಾಲಕರಾದ ಗಾದ್ರಿಪಾಲನಾಯಕ ಸ್ವಾಮಿಯ ಸುಕ್ಷೇತ್ರ ಮಿಂಚೇರಿಗೆ ಪಯಣ. ಸಂಜೆ 5ಕ್ಕೆ ಸ್ವಾಮಿಯ ಮೀಸಲು ಹಾಲಿನ ಕಂಬಿಯ ಪೂಜೆ. ರಾತ್ರಿ ಗುರು-ಹಿರಿಯರ ಸಾಂಪ್ರದಾಯಿಕ ಪೂಜೆ ನಂತರ ಬೀಡು ಬಿಡಲಾಗುವುದು. ಮಧ್ಯರಾತ್ರಿ ಕಂಚವ್ವ ಕಾಮವ್ವರ ಚಿಲುಮೆ ಗಂಗಮ್ಮನ ಮಹಾಪೂಜೆ. ಕೋಲಾಟ, ಭಜನೆ, ಸೋಬಾನೆ ಹಾಗೂ ಇತರೆ ಕಾರ್ಯಕ್ರಮಗಳು ನಡೆಯುತ್ತವೆ.ಡಿಸೆಂಬರ್ 25ರಂದು ಬೆಳಿಗ್ಗೆ 5ಕ್ಕೆ ಸ್ವಾಮಿಯ ಪೂರ್ವಿಕರ ವಿಧಿ-ವಿಧಾನಗಳೊಂದಿಗೆ ಹುಲಿರಾಯನ ಸಮಾಧಿಗೆ ಪೂಜೆ. ನಾಯಕನ ಸಮಾಧಿಗೆ ಪೂಜೆ ಹಾಗೂ ಮಣಿವು ಕಾರ್ಯಕ್ರಮ. ನಂತರ ಮಧ್ಯಾಹ್ನ 2ಕ್ಕೆ ಸ್ವಾಮಿಯ ಸನ್ನಿಧಿಯಲ್ಲಿ ಬಸವಂತರಿಗೆ ಹಾಗೂ ಚೌಕು ಮಣೆವು ಕಾರ್ಯಕ್ರಮ. ಸಂಜೆ 4ಕ್ಕೆ ಕಣಿವೆ ಮಾರಮ್ಮ, ಮಲಿಯಮ್ಮ ಹಾಗೂ ಕೊಲ್ಲಪುರದಮ್ಮನವರ ಗಂಗಾಪೂಜೆ. ಸಂಜೆ 7ಕ್ಕೆ ಸ್ವಾಮಿಗೆ ಪೂಜೆ ನಂತರ ಭಕ್ತಾಧಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.ಡಿಸೆಂಬರ್ 26ರಂದು ಬೆಳಿಗ್ಗೆ 7ಕ್ಕೆ ಸ್ವಾಮಿಯು ಜಂಗಮ ಸ್ವರೂಪಿಯಾಗಿ ಭಿಕ್ಷೆ ಸ್ವೀಕಾರ ಕಾರ್ಯಕ್ರಮ. ಬೆಳಿಗ್ಗೆ 11ಕ್ಕೆ ಸ್ವಾಮಿಯ ಸನ್ನಿಧಿಯಲ್ಲಿ ಪ್ರಸಾದ ದಾಸೋಹ. ಮಧ್ಯಾಹ್ನ 2ಕ್ಕೆ ಮಿಂಚೇರಿ ಸುಕ್ಷೇತ್ರದಿಂದ ನಿರ್ಗಮನ. ರಾತ್ರಿ 7ಕ್ಕೆ ಕಡ್ಲೇಗುದ್ದು ಬಳಿಯ ಸಿದ್ದರ ಗುಂಡಿಗೆ ಆಗಮನ. ನಂತರ ಸ್ವಾಮಿಗೆ ಪೂಜೆ ಸಲ್ಲಿಸಿ ಬೀಡು ಬಿಡುವುದು.ಡಿಸೆಂಬರ್ 27ರಂದು ಬೆಳಿಗ್ಗೆ 7ಕ್ಕೆ ಸ್ವಾಮಿಗೆ ಪೂಜೆ ಸಲ್ಲಿಸಿ ಬೆಳಿಗ್ಗೆ 10ಕ್ಕೆ ಕ್ಯಾಸಾಪುರ ಹತ್ತಿರ ಜನಿಗಿಹಳ್ಳದ ದಂಡೆಯಲ್ಲಿ ವಿಶ್ರಾಂತಿ ಮತ್ತು ಸ್ವಾಮಿಯ ಸಂಪ್ರಾದಾಯದಂತೆ ಜನಿಗಿ ಹಳ್ಳಕ್ಕೆ ಗಂಗಾಪೂಜೆ ನಡೆಯುತ್ತದೆ. ನಂತರ ಯಾತ್ರೆ ಮುಂದುವರೆಯಲಿದೆ. ಮಧ್ಯಾಹ್ನ 2ಕ್ಕೆ ಗಂಡುಮೆಟ್ಟಿದ ನಾಡು ಚಿತ್ರದುರ್ಗಕ್ಕೆ ಮಿಂಚೇರಿ ಮಹೋತ್ಸವದ ಮೆರವಣಿಗೆ ಆಗಮನ. ನಂತರ ರಾಜಾ ಬೀದಿಗಳಲ್ಲಿ ಸ್ವಾಮಿಯ ಮೆರವಣಿಗೆ ಆಗಮನ. ನಂತರ ರಾಜಾ ಬೀದಿಗಳಲ್ಲಿ ಸ್ವಾಮಿಯ ಮೆರವಣಿಗೆ, ಕೋಲಾಟ, ಭಜನೆ, ಉರುಮೆ, ಕುಣಿತ, ತಮಟೆ, ವಾದ್ಯಗಳೊಂದಿಗೆ ಕಹಳೆಯ ನಾದದೊಂದಿಗೆ ಜನಪದ ನೃತ್ಯಗಳೊಂದಿಗೆ ಭವ್ಯ ಮೆರವಣಿಗೆ ನಡೆಯಲಿದೆ. ಸಂಜೆ 7ಕ್ಕೆ ಸುಕ್ಷೇತ್ ಕಕ್ಕಲು ಬೆಂಚಿನಲ್ಲಿ ಬೀಡು ಬಿಡುವುದು.ಡಿಸೆಂಬರ್ 28ರಂದು ಸಂಜೆ 7ಕ್ಕೆ ಸ್ವಾಮಿಯ ಗ್ರಾಮದ ಹೊಸ್ತಿಲು ಪೂಜೆಯೊಂದಿಗೆ ಸ್ವಸ್ಥಾನಕ್ಕೆ ಮರಳುವುದು. ಗುರು-ಹಿರಿಯರೊಂದಿಗೆ ದೇವರ ಮುತ್ತಯ್ಯಗಳ ಬೀಳ್ಕೊಡುಗೆ ನಡೆಯಲಿದೆ.

ಜಾತ್ರೆ ಹಿನ್ನಲೆ :
ನಾಯಕ ಜನಾಂಗದ ಸಾಂಸ್ಕೃತಿಕ ವೀರ ಎಂದೇ ಹೆಸರಾಗಿರುವ ಗಾದ್ರಿಪಾಲನಾಯಕ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕು ಸಿರಿಗೆರೆ ಬಳಿಯ ಡಿ. ಮೆದಕೇರಿಪುರ ಗ್ರಾಮದ ಬಳಿಯ ಕಾಡಿನಲ್ಲಿ ಗಾದ್ರಿಪಾಲನಾಯಕ ಗೋ ಸಂರಕ್ಷಕ. ಆತನಿಗೆ ಕಂಚವ್ವ, ಕಾಮವ್ವರೆಂಬ ಇಬ್ಬರು ಪತ್ನಿಯರು. ಅಡವಿಯಲ್ಲಿ ಪಶುಪಾಲನೆ ಸಂದರ್ಭದಲ್ಲಿ ಹುಲಿಯೊಂದಿಗೆ ಅನೋನ್ಯ ಒಪ್ಪಂದದಿಂದಾಗಿ ಹುಲಿಮರಿಗಳನ್ನು ಹಸು ಕರುಗಳ ರೊಪ್ಪದಲ್ಲಿಯೇ ಬಿಡಲಾಗಿತ್ತು. ಒಮ್ಮೆ ಗಾದ್ರಿಪಾಲನಾಯಕನ ಭಾವ ಮೈದುನರಾದ ಚಿತ್ತಯ್ಯ, ಕಾಟಯ್ಯ ರೊಪ್ಪಕ್ಕೆ ಬರುತ್ತಾರೆ. ಯಾರೂ ಕಾಣದಿದ್ದಾಗ ರೊಪ್ಪದಲ್ಲಿದ್ದ ಹುಲಿಮರಿಯನ್ನು ಕೊಲ್ಲುತ್ತಾರೆ. ಇದರಿಂದ ಗಾದ್ರಿಪಾಲನಾಯಕ ವಚನಭ್ರಷ್ಟನಾದೆನೆಂದು ದುಃಖಿಸುತ್ತಾನೆ. ಕೊನೆಗೆ ಹುಲಿಯೊಂದಿಗೆ ಕಾದಾಡಿ ಹುಲಿ ಮತ್ತು ಗಾದ್ರಿಪಾಲನಾಯಕ ಸಾವನ್ನಪ್ಪುತ್ತಾರೆ. ಹುಲಿ ಹಾಗೂ ಗಾದ್ರಿಪಾಲನಾಯಕ ಸಮಾಧಿಗಳು ಇಂದಿಗೂ ಮಿಂಚೇರಿ ಬೆಟ್ಟದಲ್ಲಿ ಇವೆ.

ಗಾದ್ರಿಪಾಲನಾಯಕನ ನೆಲವೀಡು ಮಿಂಚೇರಿ: ಮಿಂಚೇರಿ ಬೆಟ್ಟ-ಗುಡ್ಡಗಳಿಂದ ಕೂಡಿದ ಪ್ರದೇಶ ಮಾತ್ರವಲ್ಲದೇ ಧಾರ್ಮಿಕ ಕೇಂದ್ರವೂ ಹೌದು. ಮಿಂಚೇರಿ ಬೆಟ್ಟ ಮ್ಯಾಸ ನಾಯಕರ ಆರಾಧ್ಯ ದೈವ ಗಾದ್ರಿಪಾಲನಾಯಕನ ನೆಲವೀಡಾಗಿದೆ. ಇಲ್ಲಿಗೆ ಜಿಲ್ಲೆಯ ವಿವಿಧೆಡೆಗಳಿಂದ ಸಾವಿರಾರು ಭಕ್ತರು ಬಂದು ಪೂಜೆ ಸಲ್ಲಿಸುತ್ತಾರೆ. ಸಮೃದ್ಧ ಮಳೆ-ಬೆಳೆಗಾಗಿ ಪ್ರಾರ್ಥಿಸಲಾಗುತ್ತದೆ.
ಸಜ್ಜೆ ರೊಟ್ಟೆ, ಗಾರ್ಗೆ, ಕರಜೀಕಾಯಿ,ಸಜ್ಜೆ ರೊಟ್ಟೆ, ಗಾರ್ಗೆ, ಕರಜೀಕಾಯಿ ಮಿಂಚೇರಿ ಮಹೋತ್ಸವದ ವಿಶೇಷ ಖಾದ್ಯವಾಗಿದೆ.

ಯಾತ್ರೆ ಸಾಗುವ ಮಾರ್ಗ: ಚಿತ್ರದುರ್ಗ ತಾಲ್ಲೂಕಿನ ಬಚ್ಚಬೋರನಹಟ್ಟಿ ಗ್ರಾಮದಿಂದ ಆರಂಭವಾದ ಮಿಂಚೇರಿ ಮಹೋತ್ಸವವು ಗೋನೂರು, ಚಿತ್ರದುರ್ಗ, ಸೀಬಾರ, ಗೂಳಯ್ಯನಹಟ್ಟಿ, ಕ್ಯಾಸಾಪುರ, ಕಡ್ಲೇಗುದ್ದು, ಕೋಣನೂರು, ಚಿಕ್ಕೇನಹಳ್ಳಿ, ಸಿರಿಗೆರೆ, ಡಿ.ಮೇದಕೆರಿಪುರ, ಮಿಂಚೇರಿಪುರದವರಗೆ ಯಾತ್ರೆ ಸಾಗಲಿದೆ. ಈ ಜಾತ್ರೆಯಲ್ಲಿ ಹಲವು ಮಠಾದೀಶರು.ಗಣ್ಯರು ಪಾಲ್ಗೊಳಲಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page