10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಸಿದ್ದತೆ ಜೂನ್ 18 ರಂದು ಯೋಗದ ಮಹತ್ವ ಸಾರಲು ಬೃಹತ್ ಜಾಗೃತಿ ಜಾಥ

by | 13/06/24 | ಆರೋಗ್ಯ


ಚಿತ್ರದುರ್ಗ ಜೂನ್13:
ಜಿಲ್ಲಾಡಳಿತ, ಆಯುಷ್ ಇಲಾಖೆ ವತಿಯಿಂದ ಬರುವ ಜೂನ್ 21 ರಂದು 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಸಲಕ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಯೋಗ ದಿನಾಚರಣೆ ಯಶಸ್ಸಿಗೆ ಸರ್ಕಾರದ ಇತರೆ ಇಲಾಖೆಗಳು ಸೇರಿದಂತೆ ಜಿಲ್ಲೆಯ ವಿವಿಧ ಯೋಗ ಸಂಸ್ಥೆಗಳು ಕೈ ಜೋಡಿಸಿವೆ.
ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜರುಗಿದ ಸಭೆಯಲ್ಲಿ ಯೋಗ ದಿನಾಚರಣೆ ಯಶಸ್ವಿಗೆ ಚರ್ಚಿಸಿ, ನೀಲನಕ್ಷೆ ರೂಪಿಸಲಾಯಿತು.
ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಜೂನ್ 21 ರಂದು ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 7.00 ಗಂಟೆಯಿAದ 7.45 ರವರೆಗೆ ಸುಮಾರು 2000 ಸಾವಿರಕ್ಕೂ ಅಧಿಕ ಯೋಗಾಸಕ್ತರು ಸಾಮೂಹಿಕ ಯೋಗಾಭ್ಯಾಸ ಮಾಡುವ ಮೂಲಕ ಅಂತರಾಷ್ಟ್ರೀಯಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳುವರು. ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಗರ ಸಭೆಯಿಂದ ಮೈದಾನ ಸ್ವಚ್ಛಗೊಳಿಸಬೇಕು. ಜಿಲ್ಲಾ ಆಯುಷ್ ಇಲಾಖೆಯಿಂದ ಮ್ಯಾಟ್ ಹಾಸುವುದರೊಂದಿಗೆ ಮೈದಾನವನ್ನು ಯೋಗಾಭ್ಯಾಸಕ್ಕೆ ಸಜ್ಜುಗೊಳಿಸಬೇಕು. ಯೋಗದಲ್ಲಿ ಪಾಲ್ಗೊಳ್ಳುವರಿಗೆ ತೊಂದರೆಯಾಗದAತೆ ಮೈದಾನದ ಸುತ್ತಲಿನ ಸರ್ಕಾರಿ ಕಚೇರಿ ಹಾಗೂ ಶಾಲೆಗಳ ಶೌಚಾಲಯಗಳನ್ನು ತೆರದಿಡಬೇಕು. ಆಯುಷ್ ಇಲಾಖೆ ಯೋಗಾಭ್ಯಾಸದಲ್ಲಿ ಪಾಲ್ಗೊಳ್ಳುವವರಿಗೆ ಶುದ್ಧ ಕುಡಿಯುವ ನೀರು ಹಾಗೂ ಉಪಹಾರದ ವ್ಯವಸ್ಥೆ ಮಾಡಬೇಕು. ತುರ್ತು ಸಂದರ್ಭಕ್ಕಾಗಿ ಆಬ್ಯುಲೆನ್ಸ್ ಹಾಗೂ ಅಗ್ನಿಶಾಮಕ ವಾಹನಗಳನ್ನು ಸನ್ನದ್ದವಾಗಿ ಇರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಬಾರಿಯ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಪೊಲೀಸ್ ಇಲಾಖೆಯು ಕೈ ಜೋಡಿಸಿದ್ದು, ಎಲ್ಲಾ ಪೊಲೀಸ್ ಸಿಬ್ಬಂದಿ ಹಳೆ ಮಾಧ್ಯಮ ಆವರಣದಲ್ಲಿನ ಸಾಮೂಹಿಕ ಯೋಗಾಭ್ಯಾಸದಲ್ಲಿ ಪಾಲ್ಗೊಳ್ಳಲಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಪ್ರತಿ ಬಾರಿ ‘ಯೋಗ ದಿನಾಚರಣೆಯಂದು ಪೊಲೀಸ್ ಇಲಾಖೆಯಿಂದ ಸಶಸ್ತç ಮೀಸಲು ಪಡೆಯ ಮೈದಾನದಲ್ಲಿ ಪೊಲೀಸ್ ಸಿಬ್ಬಂದಿ ಪ್ರತ್ಯೇಕವಾಗಿ ಯೋಗಭ್ಯಾಸ ಮಾಡುತ್ತಿದ್ದರು. ಇದರ ಬದಲಾಗಿ ಪೊಲೀಸ್ ಸಿಬ್ಬಂದಿ ಆಯುಷ್ ಇಲಾಖೆ ವತಿಯಿಂದ ಆಯೋಜಿಸುವ ಯೋಗ ದಿನಾಚರಣೆಯಲ್ಲಿ ಭಾಗವಹಿಸುವರು’ ಎಂದು ಆಯುಷ್ ಇಲಾಖೆ ಅಧಿಕಾರಿಗಳಿಗೆ ಈಗಾಗಲೇ ತಿಳಿಸಿದ್ದಾರೆ ಎಂದು ಆಯುಷ್ ವೈದ್ಯಾಧಿಕಾರಿ ಡಾ.ಶಿವಕುಮಾರ್ ಸಭೆಯಲ್ಲಿ ಮಾಹಿತಿ ನೀಡಿದರು.
ಯೋಗದ ಮಹತ್ವ ಸಾರಲು ಜಾಗೃತಿ ಜಾಥ: ಅಂತರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿಯಾಗಿ ಜನರಲ್ಲಿ ಯೋಗದ ಮಹತ್ವ ಸಾರಲು ಜೂನ್ 18 ರಂದು ಬೃಹತ್ ಜಾಗೃತಿ ಜಾಥವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 7 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿಗಳು ಜಾಥಕ್ಕೆ ಹಸಿರು ನಿಶಾನೆ ತೋರುವರು. ಜಿಲ್ಲೆಯ ಯೋಗ ಸಂಸ್ಥೆಗಳು, ಆಯುರ್ವೇದ ಕಾಲೇಜು ವಿದ್ಯಾರ್ಥಿಗಳು ಹಾಗೂ ಚಿತ್ರದುರ್ಗ ನಗರದಲ್ಲಿನ ಎಲ್ಲಾ ಸರ್ಕಾರಿ ಕಚೇರಿ ಸಿಬ್ಬಂದಿ ಜಾಗೃತಿ ಜಾಥದಲ್ಲಿ ಪಾಲ್ಗೊಳ್ಳುವರು. ಓನಕೆ ಒಬವ್ವ ವೃತ್ತ, ಮದಕರಿ ನಾಯಕ ವೃತ್ತ, ರಂಗಯ್ಯನ ಬಾಗಿಲು, ದೊಡ್ಡಪೇಟೆ, ಉಚ್ಚಂಗೆಲ್ಲಮ್ಮ ದೇವಾಸ್ಥಾನ ಬೀದಿ, ಆನೆ ಬಾಗಿಲು, ಗಾಂಧಿ ವೃತ್ತ, ಎಸ್.ಬಿ.ಐ ವೃತ್ತದ ಮೂಲಕ ಜಾಥ ಹಳೆ ಮಾಧ್ಯಮಿಕ ಆವರಣದಲ್ಲಿ ಸಂಪನ್ನಗೊಳ್ಳಲಿದೆ.
10 ದಿನಗಳ ಯೋಗೋತ್ಸವ : ಯೋಗದ ಮಹತ್ವವನ್ನು ಹೆಚ್ಚು ಜನರಿಗೆ ತಿಳಿಸಿ, ಜನರ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಮಾಡುವ ದೃಷ್ಠಿಯಿಂದ ಆಯುಷ್ ಇಲಾಖೆ ರಾಜ್ಯದಲ್ಲಿ ಜೂನ್.10 ರಿಂದ ಜೂನ್ 20ರ ವರೆಗೆ 10 ದಿನಗಳ ಯೋಗೋತ್ಸವ ಆಯೋಜನೆ ಮಾಡಿದೆ. ಇದರಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸರ್ಕಾರದ ಅಂಗ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳಲ್ಲಿ ಸಾಮೂಹಿಕ ಯೋಗ ತರಬೇತಿಯನ್ನು ನುರಿತ ಯೋಗ ಶಿಕ್ಷಕರಿಂದ ನೀಡಲಾಗುತ್ತಿದೆ. ನಗರದ ಎಲ್.ಐ.ಸಿ ಕಚೇರಿ, ಐಮಂಗಲದ ಪೊಲೀಸ್ ತರಬೇತಿ ಕೇಂದ್ರ, ಗೋನೂರಿನ ನಿರಾಶ್ರಿತರ ಪರಿಹಾರ ಕೇಂದ್ರ, ಜಿಲ್ಲಾ ಕಾರಾಗೃಹ ಹಾಗೂ ಜಿಲ್ಲೆಯ ಎಲ್ಲಾ ಹಾಸ್ಟೆಲ್‌ಗಳಲ್ಲಿ ಈಗಾಗಲೇ ಯೋಗ ತರಬೇತಿಯನ್ನು ನೀಡಲಾಗುತ್ತಿದೆ. ಜೂನ್ 15 ಹಾಗೂ 16 ರಂದು ಎಲ್ಲಾ ಹಾಸ್ಟೆಲ್‌ಗಳಲ್ಲಿ ಯೋಗೋತ್ಸವ ಆಚರಣೆ ಮಾಡಲಾಗುವುದು. ಇದರೊಂದಿಗೆ ವಿವಿಧ ತಾಲ್ಲೂಕು ಕೇಂದ್ರಗಳ ಪ್ರಮುಖ ಕಾಲೇಜುಗಳಲ್ಲಿ ಸಹ ಯೋಗೋತ್ಸವ ಆಚರಿಸಲು ಯೋಜನೆ ರೂಪಿಸಿರುವುದಾಗಿ ಎಂದು ಆಯುಷ್ ವೈದ್ಯಾಧಿಕಾರಿ ಡಾ.ಶಿವಕುಮಾರ್ ಸಭೆಯಲ್ಲಿ ತಿಳಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಜೆ.ಕುಮಾರಸ್ವಾಮಿ, ಡಿ.ಹೆಚ್.ಓ ಡಾ.ರೇಣುಪ್ರಸಾದ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಪಿಯು ಉಪನಿರ್ದೇಶಕ ಪುಟ್ಟಸ್ವಾಮಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ನಾಸೀರ್‌ವುದ್ಧೀನ್, ನಗರಸಭೆ ಆಯುಕ್ತೆ ರೇಣುಕಾ.ಎಂ ಸೇರಿದಂತೆ ಜಿಲ್ಲೆಯ ವಿವಿಧ ಯೋಗ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜಿಲ್ಲೆಯು ಆಯುರ್ವೇದ ಕಾಲೇಜಿನ ಪ್ರಾಂಶಪಾಲರು, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ ಮುಖ್ಯಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page