10 ಹೂಡಿಕೆ ಯೋಜನೆಗಳಿಗೆ ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಯಲ್ಲಿ ಅನುಮೋದನೆ* *-ಸಚಿವ ಎಂ.ಬಿ.ಪಾಟೀಲ್

by | 08/12/23 | ಕರ್ನಾಟಕ


ಬೆಳಗಾವಿ ಸುವರ್ಣ ಸೌಧ,ಡಿ.08 ಬೆಂಗಳೂರಿನ ಇನ್ವೆಸ್ಟ್ ಕರ್ನಾಟಕ ಹಾಗೂ ಹುಬ್ಬಳ್ಳಿ ಎಫ್.ಎಂ.ಸಿ.ಜಿ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡ ಒಡಂಬಡಿಕೆಗಳ ಪೈಕಿ 10 ಯೋಜನೆಗಳಿಗೆ ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಯಲ್ಲಿ ಅನುಮೊದನೆ ನೀಡಲಾಗಿದೆ. ಇದರ ಪ್ರಕಾರ ಕಂಪನಿಗಳಿಗೆ ಉದ್ದಿಮೆ ಸ್ಥಾಪನೆಗೆ ಅಗತ್ಯವಾದ ಭೂಮಿ, ನೀರು, ವಿದ್ಯುತ್ ಪೂರೈಕೆ ಹಾಗೂ ಇತರೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ಶುಕ್ರವಾರ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ, ವಿಧಾನ ಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪನವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.
ಬೆಂಗಳೂರಿನಲ್ಲಿ ಜರುಗಿದ ಇನ್ವೆಸ್ಟ್ ಕರ್ನಾಟಕ-2022 ಸಮಾವೇಶದಲ್ಲಿ 57 ಕಂಪನಿಗಳೊಂದಿಗೆ ರೂ.5.41 ಲಕ್ಷ ಕೋಟಿಗಳ ಬಂಡವಾಳ ಹೂಡಿಕೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಹುಬ್ಬಳ್ಳಿಯಲ್ಲಿ ಜರುಗಿದ ಎಫ್.ಎಂ.ಸಿ.ಜಿ ಬಂಡವಾಳ ಹೂಡಿಕೆದಾರ ಸಮಾವೇಶದಲ್ಲಿ 16 ಕಂಪನಿಗಳೊಂದಿಗೆ ರೂ.1.27 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಈ ಯೋಜನೆಗಳು ಬೃಹತ್ ಕೈಗಾರಿಕೆಗಳು ಆಗಿರುವುದರಿಂದ ಕೈಗಾರಿಕೆಗಳ ಸ್ಥಾಪನೆಗೆ ಕನಿಷ್ಠ 3 ರಿಂದ 4 ವರ್ಷ ಕಾಲಾವಕಾಶ ಬೇಕಾಗಿರುತ್ತದೆ. 5.41 ಲಕ್ಷ ಕೋಟಿ ಬಂಡವಾಳ ಹೂಡಿಕೆಯಲ್ಲಿ ವಿದ್ಯುತ್ ಹಾಗೂ ನವೀಕರಿಸಬಹುದಾದ ಇಂಧನಗಳ ಕ್ಷೇತ್ರದಲ್ಲಿ ಶೇ.38 ರಷ್ಟು ಬಂಡವಾಳ ಹೂಡಿಕೆಯಾಗಿದೆ ಎಂದರು.
ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಸುಮಾರು ರೂ.75 ಕೋಟಿ ಹಾಗೂ ಹುಬ್ಬಳ್ಳಿ ಎಫ್.ಎಂ.ಸಿ.ಜಿ ಸಮಾವೇಶಕ್ಕೆ ರೂ.12.23 ಲಕ್ಷ ವೆಚ್ಚವಾಗಿದೆ. ರಾಜ್ಯ ಸರ್ಕಾರದ 2020-25ರ ಕೈಗಾರಿಕಾ ನೀತಿ ಅಡಿ, ಕೈಗಾರಿಕೆ ಸ್ಥಾಪನೆಗೆ ಸರ್ಕಾರದ ಪ್ರೋತ್ಸಾಹ ಮತ್ತು ರಿಯಾಯಿತಿಗಳನ್ನು ಪಡೆಯುವ ಕೈಗಾರಿಕೆಗಳು ಸರೋಜಿನಿ ಮಹಿಷಿ ವರದಿಯಂತೆ ಗ್ರೂಪ್ ಡಿ ವರ್ಗದಲ್ಲಿ ಕನ್ನಡಿಗರಿಗೆ ಶೇ.100 ರಷ್ಟು ಹಾಗೂ ಒಟ್ಟು ಉದ್ಯೋಗಗಳಲ್ಲಿ ಶೇ.70ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಕಲ್ಪಿಸಬೇಕು ಎಂದು ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದರು.
ಸಾರ್ವಜನಿಕರ ಹಣ ವ್ಯಯಮಾಡಿ ನಡೆಸುವ ಬಂಡವಾಳ ಹೂಡಿಕೆ ಸಮಾವೇಶಗಳು ವ್ಯರ್ಥ್ಯವಾಗಬಾರದು. ಕೈಗಾರಿಕೆಗಳು ಸ್ಥಾಪನೆ ಆಗಬೇಕು. ಹೀಗೆ ಸ್ಥಾಪಿಸಿದ ಕೈಗಾರಿಕೆಗಳು ಕನ್ನಡಿಗರಿಗೆ ಉದ್ಯೋಗ ಅವಕಾಶ ನೀಡಬೇಕು. ಈ ಹಿಂದೆ 1995ರಲ್ಲಿ ಅಂದಿನ ರಾಜ್ಯ ಸರ್ಕಾರ ಟಯೋಟಾ ಕಂಪನಿಯೊಂದಿಗೆ ಒಡಂಬಡಿಕೆ ಮಾಡಿಕೊಂಡು ಬಿಡಿದಿ ಬಳಿ 450 ಎಕರೆ ಜಮೀನು ನೀಡಿ, ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಿತ್ತು. 18 ವರ್ಷಗಳ ತೆರಿಗೆಯನ್ನು ಕಂಪನಿ ಇಟ್ಟುಕೊಂಡು, ಪುನಃ ರಾಜ್ಯ ಸರ್ಕಾರಕ್ಕೆ ಸಂದಾಯ ಮಾಡುವ ಅವಕಾಶವನ್ನು ನೀಡಿತ್ತು. ಆದರೆ ಸರ್ಕಾರ ಕನ್ನಡಿಗರಿಗೆ ಉದ್ಯೋಗ ನೀಡಲು ವಿಧಿಸಿದ ಷರತ್ತನ್ನು ಕಂಪನಿ ಸರಿಯಾಗಿ ಅನುಷ್ಠಾನ ಮಾಡಲಿಲ್ಲ. ಈಗಲೂ ಕಂಪನಿ ರೂ.8 ಸಾವಿರ ಕೋಟಿಗೂ ಅಧಿಕ ತೆರಿಗೆ ಬಾಕಿ ಉಳಿಸಿಕೊಂಡಿದೆ. ರತ್ನಗಂಬಳಿ ಹಾಸಿ ಬೃಹತ್ ಕಂಪನಿಗಳನ್ನು ತಂದು ರಾಜ್ಯದ ಜನರಿಗೆ ಉಪಯೋಗವಾಗದಿದ್ದರೆ ಹೇಗೆ? ಸರ್ಕಾರ ಈ ಕುರಿತು ಸೂಕ್ತ ಕ್ರಮ ವಹಿಸಬೇಕು ಎಂದು ಶಾಸಕ ಎಂ.ಚಂದ್ರಪ್ಪ ಒತ್ತಾಯಿಸಿದರು.
ಟಯೋಟಾ ಕಂಪನಿಯೊಂದಿಗಿನ ಒಪ್ಪಂದ ಕುರಿತು ಸದ್ಯ ಮಾಹಿತಿ ಇಲ್ಲ. ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳುತ್ತೇನೆ. ಇದೆ ಮಾದರಿ ಸವಲತ್ತು ಪಡೆದ ಎಲ್ಲಾ ಕೈಗಾರಿಕೆಗಳು ಸರ್ಕಾರದ ಆದೇಶಗಳನ್ನು ಪಾಲನೆ ಮಾಡುತ್ತಿವೆಯೇ ಎಂಬುದನ್ನು ಪರಿಶೀಲಿಸುವುದಾಗಿ ಸಚಿವ ಎಂ.ಬಿ.ಪಾಟೀಲ್ ಸದನದಲ್ಲಿ ಆಶ್ವಾಸನೆ ನೀಡಿದರು.

Latest News >>

ಮೃತ ರೇಣುಕಾಸ್ವಾಮಿ ಮನೆಗೆ ಮಾಜಿಉಪಮುಖ್ಯಮಂತ್ರಿ ಗೋವಿಂದಕಾರಜೋಳ,ಮಾಜಿ ಶಾಸಕರಾದ ತಿಪ್ಪಾರೆಡ್ಡಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಚಿತ್ರದುರ್ಗ: ನಗರದ ವಿ.ಆರ್.ಎಸ್ ಬಡಾವಣೆಯಲ್ಲಿರುವ ರೇಣುಕಾ ಸ್ವಾಮಿಯ ಕೊಲೆಯಾದ ಸಂಗತಿ ತಿಳಿದು ಮನಸ್ಸಿಗೆ ಅಘಾತವಾಗಿದ್ದು ಇಂದು ಅವರ ಮನೆಗೆ...

ನಾಲ್ಕು ಸಾವಿರಕ್ಕೂ ಹೆಚ್ಚಿನ ಜನರಿರುವ ಆದಿವಾಲ ಗ್ರಾಮಕ್ಕೆಒಂದು ರುದ್ರಭೂಮಿಯೇ ಇಲ್ಲದಂತಾಗಿದೆ.

ಹಿರಿಯೂರು: ಆದಿವಾಲ ಗ್ರಾಮದಲ್ಲಿ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚಿನ ಜನರಿದ್ದಾರೆ. ಆದರೆ ಆ ಗ್ರಾಮದ ಜನರಿಗೆ ಒಂದು ರುದ್ರ ಭೂಮಿಯೇ...

*ಸಫಾಯಿ ಕರ್ಮಚಾರಿಗಳಿಗೆ ಕಾನೂನಾತ್ಮಕವಾಗಿ ಎಲ್ಲ ಸೌಲಭ್ಯಗಳು ಸೀಗಬೇಕು; ವಿಳಂಬ, ತೀರಸ್ಕಾರ ಮಾಡಿದಲ್ಲಿ ಸಂಬಂಧಿಸಿದವರ ಮೇಲೆ ಕ್ರಮ: ರಾಷ್ಟ್ರೀಯ ಸಫಾಯಿ ಕಾರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ವೆಂಕಟೇಶನ್

ಧಾರವಾಡ ಜೂನ್.13: ಸಫಾಯಿ ಕರ್ಮಚಾರಿಗಳಾಗಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರಿಗೆ ರಾಷ್ಟ್ರೀಯ ಮತ್ತು ರಾಜ್ಯ ಸರಕಾರಗಳಿಂದ ಕಾನೂನಾತ್ಮಕವಾಗಿ...

ಅದ್ದೂರಿ ಭಗೀರಥ ಜಯಂತೋತ್ಸವ ಕಾರ್ಯಕ್ರಮ ಉಪ್ಪಾರ ಸಮಾಜದ ಯುವಗೌರವಾಧ್ಯಕ್ಷ ಕನಕದಾಸ್

ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಜೂನ್ 14ರಂದು ಹಿರಿಯೂರು: ತಾಲ್ಲೂಕಿನ ಆಲೂರು ಗ್ರಾಮದಲ್ಲಿ ದಿನಾಂಕ 14-ಜೂನ್-2024 ನೇ ಶುಕ್ರವಾರದಂದು ಶ್ರೀ...

ನೂತನ ಸಂಸದ ಗೋವಿಂದ ವಿವಿಧ ಕ್ಷೇತ್ರಗಳಲ್ಲಿ ಕೃತಜ್ಞತಾ ಸಮಾವೇಶ.

ಚಿತ್ರದುರ್ಗ ಜೂ. 12 ಚಿತ್ರದುರ್ಗದ ನೂತನ ಸಂಸದರಾದ ಗೋವಿಂದ ಕಾರಜೋಳರವರು ತಮ್ಮ ಗೆಲುವಿಗೆ ಶ್ರಮಿಸಿದ ಮತದಾರರು ಮತ್ತು ಬಿಜೆಪಿ ಹಾಗೂ ಜೆಡಿಎಸ್...

ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದುತಾರತಮ್ಯ ಮಾಡದಂತೆ ಸಮಸ್ಥ ಕುಂಚಿಟಿಗರಿಗೆ ಕೇಂದ್ರ ಓಬಿಸಿ ಮೀಸಲಾತಿ ಕಲ್ಪಿಸಲು ಆಗ್ರಹ :ಎಸ್.ವಿ.ರಂಗನಾಥ್

ಹಿರಿಯೂರು: ಕುಂಚಿಟಿಗರಿಗೆ ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದು ತಾರತಮ್ಯ ಮಾಡದಂತೆ ಸಮಸ್ಥ ಕುಂಚಿಟಿಗರಿಗೆ ಕೇಂದ್ರ ಸರ್ಕಾರದ ಓಬಿಸಿ ಮೀಸಲಾತಿ...

ಅಂಬೇಡ್ಕರ್ ಸ್ವಾಭಿಮಾನಿ ಸೇನೆ ತಾಲ್ಲೂಕು ಸಮಿತಿ ಯಿಂದ ಎಲ್ಲಾ ಜಾತಿಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ:ಅಧ್ಯಕ್ಷರಾದ ರಾಮಚಂದ್ರ

ಹಿರಿಯೂರು: ಅಂಬೇಡ್ಕರ್ ಸ್ವಾಭಿಮಾನಿ ಸೇನೆ ತಾಲ್ಲೂಕು ಸಮಿತಿ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿ ಮತ್ತು ಪ್ರೊ.ಬಿ. ಕೃಷ್ಣಪ್ಪ ರವರ...

ಚಿಕ್ಕೋಡಿ ಲೋಕಸಭಾಕ್ಷೇತ್ರದ ನೂತನ ಸಂಸದರಾದ ಪ್ರಿಯಾಂಕ ಹಾಗೂ ರಾಹುಲ್ ಜಾರಕಿಹೊಳಿಯವರಿಗೆ ವಾಲ್ಮೀಕಿನಾಯಕ ಸಮುದಾಯದಿಂದ ಗೌರವಸನ್ಮಾನ

ಹಿರಿಯೂರು: 12-ಜೂನ್ 2024 ಬುಧವಾರದಂದು ನಗರಕ್ಕೆ ಆಗಮಿಸಿದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸದಸ್ಯರು ಪ್ರಿಯಾಂಕ ಜಾರಕಿಹೊಳಿ ಹಾಗೂ ರಾಹುಲ್...

ಕೇಂದ್ರ ಸಚಿವ ಸಂಪುಟದಲ್ಲಿ ಮಾದಿಗ ಸಮುದಾಯಕ್ಕೆ ಸಚಿವ ಸ್ಥಾನ ನೀಡುವಲ್ಲಿ ಕೇಂದ್ರ ಸರ್ಕಾರ ಎಡವಿದೆ. ಅದಿಜಾಂಬವ ಮಠದ ಶ್ರೀಷಡಕ್ಷರಿಮುನಿಸ್ವಾಮೀಜಿ

ಚಿತ್ರದುರ್ಗ: ಮಾದಿಗ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಕೇಂದ್ರದಲ್ಲಿ ನೂತನ ಸರ್ಕಾರ ರಚನೆಯಾಗಿದೆ ಅದರಲ್ಲಿ ರಾಜಕೀಯವಾಗಿ ಕುಗ್ಗಿರುವ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page