ಬೆಂಗಳೂರು: 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಏಕ ಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್ ವಿಭಾಗಿಯ ಪೀಠ ರದ್ದು ಮಾಡಿದೆ.
ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ, ನ್ಯಾಯಮೂರ್ತಿ ಎಜಿಎಸ್ ಕಮಲ್ ಅವರಿದ್ದ ವಿಭಾಗಿಯ ಪೀಠ ಶಿಕ್ಷಕರ ನೇಮಕಾತಿಗೆ ಆದೇಶ ನೀಡಿದೆ.ಮಾರ್ಚ್ 8, 2023 ಆಯ್ಕೆ ಪಟ್ಟಿಯಂತೆ ನೇಮಕಾತಿ ಅಂತಿಮಗೊಳಿಸಲು ಸೂಚನೆ ನೀಡಲಾಗಿದೆ.
ಸರ್ಕಾರದ ಅಧಿಸೂಚನೆಯಂತೆ ಆದಾಯ ಪ್ರಮಾಣ ಪತ್ರ ಸಲ್ಲಿಸಿದವರ ಆಯ್ಕೆ ಅಂತಿಮವಾಗಿದೆ,
ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸದ ಅಭ್ಯರ್ಥಿಗಳ ಆಯ್ಕೆ ಮುಂದೂಡಲಾಗಿದೆ.
ನೊಂದ ಅಭ್ಯರ್ಥಿಗಳು ಕೆಎಟಿಯಲ್ಲಿ ದಾವೆ ಹೂಡಬಹುದಾಗಿದೆ. ದಾವೆ ಇತ್ಯರ್ಥವಾಗುವವರೆಗೆ ವಿವಾದಿತ ಅಭ್ಯರ್ಥಿಗಳ ಆಯ್ಕೆ ಮುಂದೂಡಿಕೆ ಆಗಿರುತ್ತದೆ.
ಜೂನ್ 8, 2023 ಆಯ್ಕೆ ಪಟ್ಟಿಯಲ್ಲಿ 451 ಅಭ್ಯರ್ಥಿಗಳ ಬದಲಾವಣೆ ಆಗಿದೆ. ಹೊಸ ನೀತಿಯಲ್ಲಿ 451 ಅಭ್ಯರ್ಥಿಗಳಿಗೆ ಬದಲಿ ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಕೆಎಟಿ ಆದೇಶದ ಬಳಿಕ ಬದಲಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.ಹಿಂದುಳಿದ ವರ್ಗದಲ್ಲಿ ಪರಿಗಣಿಸುವಾಗ ವಿವಾಹಿತ ಮಹಿಳೆಯರಿಗೆ ಪತಿಯ ಆದಾಯ ಪರಿಗಣನೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ನಿಯಮ ಅನ್ವಯಿಸಿತ್ತು.13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
ಈ ಹಿಂದೆ ನೇಮಕಾತಿ ಮರುರೂಪಿಸಲು ಸೂಚಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್ ವಿಭಾಗೀಯ ಪೀಠ ರದ್ದುಪಡಿಸಿದೆ. ಮಾರ್ಚ್.8, 2023 ರ ಆಯ್ಕೆಪಟ್ಟಿಯಂತೆ ನೇಮಕಾತಿ ಅಂತಿಮಗೊಳಿಸಲು ಹೈಕೋರ್ಟ್ ನಿರ್ದೇಶನ ನೀಡಿದೆ. ಸರ್ಕಾರದ ಅಧಿಸೂಚನೆಯಂತೆ ಆದಾಯ ಪ್ರಮಾಣಪತ್ರ ಸಲ್ಲಿಸಿದವರ ಆಯ್ಕೆ ಅಂತಿಮಗೊಳಿಸಲು ಹಾಗೂ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸದ ಅಭ್ಯರ್ಥಿಗಳ ಆಯ್ಕೆಯನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ ಆದೇಶದವರೆಗೆ ಮುಂದೂಡುವಂತೆ ಸೂಚಿಸಿದೆ. ನೊಂದ ಅಭ್ಯರ್ಥಿಗಳು ಕೆಎಸ್ಎಟಿಯಲ್ಲಿ ದಾವೆ ಹೂಡಬಹುದು. ಆ ದಾವೆ ಇತ್ಯರ್ಥವಾಗುವವರೆಗೆ ನಿಗದಿತ ನಮೂನೆಯಲ್ಲಿ ಆದಾಯ ಪ್ರಮಾಣಪತ್ರ ಸಲ್ಲಿಸದ ಅಭ್ಯರ್ಥಿಗಳ ಆಯ್ಕೆ ಮುಂದೂಡುವಂತೆ ಸೂಚನೆ ನೀಡಿದೆ.
ಮೊದಲ ಅಯ್ಕೆಪಟ್ಟಿಯಲ್ಲಿದ್ದ 451 ಅಭ್ಯರ್ಥಿಗಳನ್ನು ಜೂನ್.8 2023 ರ ಆಯ್ಕೆಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿತ್ತು . ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಅನ್ವಯಿಸಿ ರೂಪಿಸಿದ ಹೊಸ ನಿಯಮದಡಿ 451 ಅಭ್ಯರ್ಥಿಗಳನ್ನು ಬದಲಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ಹೀಗೆ ನೇಮಕದಿಂದ ಹೊರಗುಳಿದ 451 ಅಭ್ಯರ್ಥಿಗಳ ಭವಿಷ್ಯ ಕೆಎಸ್ಎಟಿ ಆದೇಶದ ಬಳಿಕ ನಿರ್ಧಾರವಾಗಲಿದೆ ವಿವಾದವೇನು ?
ಹಿಂದುಳಿದ ವರ್ಗದ ವಿವಾಹಿತ ಮಹಿಳೆಯನ್ನು ಆಯ್ಕೆಗೆ ಪರಿಗಣಿಸುವಾಗ ಪತಿಯ ಆದಾಯ ಪರಿಗಣನೆಗೆ ಸರ್ಕಾರ ನಿಯಮ ರೂಪಿಸಿತ್ತು. ರಾಜ್ಯ ಸರ್ಕಾರದ ಈ ನೀತಿಯನ್ನು ಏಕಸದಸ್ಯ ಪೀಠ ಅಮಾನ್ಯಗೊಳಿಸಿತ್ತು. ಅಭ್ಯರ್ಥಿ ತಂದೆಯ ಜಾತಿ, ಆದಾಯ ಪ್ರಮಾಣಪತ್ರ ಆಧರಿಸಲು ಸೂಚಿಸಿತ್ತು. ಇದೀಗ ಏಕಸದಸ್ಯ ಪೀಠದ ಈ ಆದೇಶ ರದ್ದುಪಡಿಸಿದ ಹೈಕೋರ್ಟ್, 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಉಳಿದ ಅಭ್ಯರ್ಥಿಗಳ ಆಯ್ಕೆಯನ್ನಷ್ಟೇ ಕೆಎಸ್ಎಟಿ ಆದೇಶ ಬರುವವರೆಗೆ ಮುಂದೂಡಿರುವ ಹೈಕೋರ್ಟ್ ಶಾಲಾ ಶಿಕ್ಷಕರಿಗೆ ಬಿಗ್ ರಿಲೀಫ್ ನೀಡಿದೆ. 6 ರಿಂದ 8 ನೇ ತರಗತಿಗಳಿಗೆ ಶಿಕ್ಷಕ ಬರ ಕೊರತೆ ಪರಿಗಣಿಸಿ ಹೈಕೋರ್ಟ್ ಈ ಆದೇಶ ನೀಡಿದೆ.
0 Comments