ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಉದಾತ್ತ ಚಿಂತನೆಗಳನ್ನು ಸಾರುವ ನಮ್ಮ ಸಂವಿಧಾನ ನಮ್ಮ ಹೆಮ್ಮೆ. ಸಂವಿಧಾನವನ್ನು ರಚಿಸಿದ ಅಂಬೇಡ್ಕರ್ ಅವರನ್ನು ನೆನಪಿಸಿಕೊಳ್ಳುವ ದಿನವಿದು, ಅವರ ಆಶಯಗಳನ್ನು ಪ್ರತಿಯೊಬ್ಬರು ಅನುಸರಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ

by | 15/09/23 | ಕಾನೂನು

ಚಳ್ಳಕೆರೆ ಸೆ.15ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಉದಾತ್ತ ಚಿಂತನೆಗಳನ್ನು ಸಾರುವ ನಮ್ಮ ಸಂವಿಧಾನ ನಮ್ಮ ಹೆಮ್ಮೆ. ಸಂವಿಧಾನವನ್ನು ರಚಿಸಿದ ಅಂಬೇಡ್ಕರ್ ಅವರನ್ನು ನೆನಪಿಸಿಕೊಳ್ಳುವ ದಿನವಿದು, ಅವರ ಆಶಯಗಳನ್ನು ಪ್ರತಿಯೊಬ್ಬರು ಅನುಸರಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇಂದು ನಗರದ ಹೆಚ್.ಪಿ.ಪಿ.ಸಿ. ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂವಿಧಾನ ಪೀಠಿಕೆಯನ್ನು ಓದಿ ಕಾರ್ಯಕ್ರಮದಲ್ಲಿ ಸಮಾತನಾಡಿದರು. ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ ಸಹ ಇಂದಿಗೂ ಬಡತನ ಅನಕ್ಷರತೆ ಅಸ್ಪೃಶ್ಯತೆ ದಬ್ಬಾಳಿಕೆ ದೇಶದಲ್ಲಿ ಕಡಿಮೆಯಾಗಿಲ್ಲ ಇಂತಹ ಅನಿಷ್ಟ ಪದ್ದತಿಗಳು ನಿಲ್ಲಬೇಕಾದರೆ ಶಿಕ್ಷಣವೊಂದೇ ಮೂಲ ಮಂತ್ರವಾಗಬೇಕು ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು, ದೇಶದ ಅಭಿವೃದ್ಧಿಗೆ ಮುಂದಾಗಬೇಕು ಡಾ‌. ಬಿ ಆರ್ ಅಂಬೇಡ್ಕರ್ ಅವರ ಸಂವಿಧಾನವನ್ನು ದೇಶವು ಸರ್ವಾನು ಮತದಿಂದ ಒಪ್ಪಿದ್ದು ಈ ಸಂವಿಧಾನ ಎಲ್ಲಾ ಕಾಲಕ್ಕೂ ಸಲ್ಲುವಂತದ್ದಾಗಿದ್ದು ಇತರೆ ದೇಶಗಳು ಸಹ ಈ ಸಂವಿಧಾನವನ್ನು ಮಾದರಿಯಾಗಿಟ್ಟುಕೊಂಡು ತಮ್ಮ ದೇಶದ ಸಂವಿಧಾನಗಳನ್ನು ರಚಿಸಿಕೊಳ್ಳುವಷ್ಟರ ಮಟ್ಟಿಗೆ ಮಾದರಿಯಾಗಿದೆ ನಾವೆಲ್ಲರೂ ಸಂವಿಧಾನದ ಆಶಯಗಳಿಗೆ ಧಕ್ಕೆ ಬಾರದಂತೆ ಅದರಲ್ಲಿನ ಸತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಾರ್ಥಕ ಜೀವನ ನಡೆಸೋಣ ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ‌. ಆರ್ ರಂಗಪ್ಪ ಮಾತನಾಡಿ ಸಂವಿಧಾನ ರಚನೆಯಲ್ಲಿ ಯಾವುದೇ ನ್ಯೂನ್ಯತೆಗಳಿಲ್ಲ ಪ್ರತಿಯೊಬ್ಬ ವ್ಯಕ್ತಿಗೂ ಜಾತಿ ಸಮುದಾಯಕ್ಕೂ ಸಮಾನವಾದ ಹಕ್ಕುಗಳನ್ನು ನೀಡಿದೆ ಆದರೆ ಆಳುವ ಸರ್ಕಾರಗಳು ಸಂವಿಧಾನವನ್ನು ತನ್ನ ಸ್ವಾರ್ಥಕ್ಕಾಗಿ ಬದಲಾಯಿಸಲು ಹೊರಟಿವೆ ಅಂಬೇಡ್ಕರ್ ಅವರ ಆಶಯದಂತೆ ಸಂದರ್ಭಕ್ಕೆ ತಕ್ಕಂತೆ ಬದಲಾಯಿಸುವ ಅವಕಾಶವಿದ್ದರೂ ತಮ್ಮ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದ ಪಕ್ಷಗಳು ಬದಲಾವಣೆ ಮಾಡಿಲ್ಲ ದೇಶದ ಎಲ್ಲಾ ನಾಗರಿಕರು ಸಂವಿಧಾನಕ್ಕೆ ಗೌರವ ನೀಡಬೇಕಾಗಿರುವುದು ನಮ್ಮ ಕರ್ತವ್ಯವಾಗಿರುವುದರಿಂದ ಸಂವಿಧಾನದ ಪೀಠಿಕೆಯ ಆಶಯಗಳಿಗೆ ಧಕ್ಕೆ ಬಾರದಂತೆ ನಡೆದುಕೊಂಡು ಗೌರವ ಸೂಚಿಸೋಣ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ವೀರಯ್ಯ ನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ಶ್ರೀ ರೇಹಾನ್ ಪಾಷಾ, ಪೌರಾಯುಕ್ತರಾದ ಶ್ರೀ ಚಂದ್ರಪ್ಪ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಹೊನ್ನೇಶ್, ಡಿ.ವೈ.ಎಸ್.ಪಿ. ಶ್ರೀ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಸುರೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳಾದ ಶ್ರೀ ದಿವಾಕರ, ನಗರಸಭೆ ಸದಸ್ಯರಾದ ಶ್ರೀ ರಾಘವೇಂದ್ರ, ಶ್ರೀ ರಮೇಶ್ ಗೌಡ, ಶ್ರೀಮತಿ ಕವಿತಾ ಬೋರಯ್ಯ, ಶ್ರೀಮತಿ ಸುಮಾ ಭರಮಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ವೀರಭದ್ರಪ್ಪ, ಮುಖಂಡರಾದ ಶ್ರೀ ಪ್ರಕಾಶ್, ಶ್ರೀ ಪ್ರಹ್ಲಾದ್, ಶ್ರೀ ವೀರಭದ್ರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಕಾಲೇಜು ಸಿಬ್ಬಂದಿ ವರ್ಗದವರು , ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page