ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ ಸುಮಾರು 150 ಪಡಿತರ ಚೀಟಿಗಳನ್ನು ಹೊಸದಾಗಿ ತೆರೆದಿರುವ ನ್ಯಾಯಬೆಲೆ ಅಂಗಡಿಗೆ ವರ್ಗಾಯಿಸಿರುವುದನ್ನು ಖಂಡಿಸಿ ತಹಶೀಲ್ದಾರ್ ರವರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು.  ಈ ವೇಳೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ತಾಲೂಕು ಕಚೇರಿಯಲ್ಲಿ ಮಂಗಳವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು....

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿ ವೆಂಕಟಶ್ ಬಳಿ ದೂರಿನ ಸುರಿಮಳೆ ಗೈದರು. ನಗರದ ಮುಖ್ಯ ರಸ್ತೆಗಳು ವಿಸ್ತರಾಗೊಂಡರೂ ಸಹ ಪುಟ್ ಬಾತ್ ವ್ಯಾಪಾರಿಗಳು...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ ಪಡೆಯಬಹುದಾಗಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ. ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮೀ ಯೋಜನೆಯಡಿ ಪ್ರಯೋಜನ ಪಡೆಯಲು...

ಸಮಯಕ್ಕೆ ಬಾರದ ಪಶು ವೈದ್ಯಾಧಿಕಾರಿಗಳು ಸಾಕು ಪ್ರಾಣಿಗಳಿಗೆ ಚಿಕಿತ್ಸೆ ಕೊಡಿಸಲು ರೈತರು ಪರದಾಟ

ಚಳ್ಳಕೆರೆ: ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದ ವೈದ್ಯಾಧಿಕಾರಿಗಳು ಸಮಯಕ್ಕೆ ಸರಿಯಾಗಿ ಬಾರದೆ ಇರುವುದರಿಂದ ರೈತರು ತಮ್ಮ ಸಾಕು ಪ್ರಾಣಿಗಳಿಗೆ ಚಿಕಿತ್ಸೆ ಕೊಡಿಸಲು ಪರದಾಡುವ ಪರಿಸ್ಥಿತಿ ಉಂಟಾಗಿದೆ ಎಂದು ರೈತರು ಆರೋಪಿಸಿದ್ದಾರೆ ‌. ಪಶು ಚಿಕಿತ್ಸಾ ಕೇಂದ್ರದ ಮುಂಭಾಗದಲ್ಲಿ ವೈದ್ಯಾಧಿಕಾರಿಗಳು...

You cannot copy content of this page