ಪ್ರತ್ಯೇಕ ರಸ್ತೆ ಅಪಘಾತ ಮೂರು ಜನ ಸ್ಥಳದಲ್ಲೇ ಮೃತಪಟ್ಟ ಘಟನೆ .

by | 31/12/23 | ಅಪಘಾತ


ಚಿತ್ರದುರ್ಗ, ಡಿ 31 : 2024 ನೇ ವರ್ಷದ ಆಚರಣೆ ಅಂಭ್ರಮಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇರುವಾಗಲೆ ಎರಡು ಪ್ರತ್ಯೇಕ ರಸ್ತೆ ಅಪಘಾತಲ್ಲಿ ಮೂರು ಜನ. ಮೃತಪಟ್ಟರೆ ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ – ಚಳ್ಳಕೆರೆ ಹೆದ್ದಾರಿಯ ಹೊಸ ಕಲ್ಲಹಳ್ಳಿ ಬಳಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮತ್ತು ಚಳ್ಳಕೆರೆ ತಾಲೂಕಿನ ಗಿರಿಯಮ್ಮನಹಳ್ಳಿ ಬಳಿ ನಡೆದ ಅಪಘಾತದಲ್ಲಿ ಓರ್ವ ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ ಮೂವರು ಸಾವನ್ನಪ್ಪಿದ ಘಟನೆ ಭಾನುವಾರ ಮಧ್ಯಾನ ನಡೆದಿದೆ.ಚಿತ್ರದುರ್ಗ ತಾಲ್ಲೂಕಿನ ಹೊಸ ಕಲ್ಲಹಳ್ಳಿ ಬಳಿ ಬೈಕ್ ಹಾಗೂ ಆಟೋ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ಸಾವನ್ನಪ್ಪಿದ್ದಾರೆ. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸಾಗಿಸಲಾಗಿದೆ
ಮೃತರನ್ನು ಬೈಕ್ ಹಿಂಬದಿ ಕುಳಿತಿದ್ದ ಶಿಲ್ಪ( 30) ಮತ್ತು ಆಟೋದಲ್ಲಿ ಪ್ರಯಾಣಿಸುತಿದ್ದ ಬರ್ಕತ್ ಆಲಿ ( 35) ಎಂದು ಗುರುತಿಸಲಾಗಿದೆ. ಚಿತ್ರದುರ್ಗದ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ‌ ಈ ಘಟನೆ ನಡೆದಿದೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಸಿಪಿಐ ಮುದ್ದುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣದಾಖಲಿಸಿಕೊಂಡಿದ್ದಾರೆ.


ಚಳ್ಳಕೆರೆ ತಾಲೂಕಿನ ತಳಕು ಹೋಬಳಿಯ ಗಿರಿಯಮ್ಮನಹಳ್ಳಿ ರಸ್ತೆ ತಿರುವಿನಲ್ಲಿ ಬುಲೇರೊ ವಾಹನ ಮತ್ತು ಟಿವಿಎಸ್ ಬೈಕ್ ನಡುವೆ ಡಿಕ್ಕಿಯಾಗಿ ತಳಕು ಲಂಬಾಣಿಹಟ್ಟಿ ಗ್ರಾಮದ ರಾಜನಾಯ್ಕ (55 )ಎಂಬ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಚಳ್ಳಕೆರೆ ಮಾರ್ಗದಿಂದ ತಳಕು ಮಾರ್ಗವಾಗಿ ಟಿವಿಎಸ್ ಬೈಕನಲ್ಲಿ ಹೋಗುವಾಗ ಹಿಂಬದಿಯಿಂದ ಅತೀ ವೇಗವಾಗಿ ಬಂದ ಬುಲೇರೊ ವಾಹನ ಡಿಕ್ಕಿಯಾಗಿ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಇದರಿಂದ ಸಿಟ್ಟಿಗೆದ್ದ ಸ್ಥಳೀಯ ಗಿರಿಯಮ್ಮಹಳ್ಳಿ ಗ್ರಾಮಸ್ಥರು ಕೆಲ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಗಿರಿಯಮ್ಮನಹಳ್ಳಿ ಗ್ರಾಮದ ಕ್ಯಾಸಪ್ಪ ಮಾತನಾಡಿ. ಅವೈಜ್ಞಾನಿಕ ರಸ್ತೆಯಿಂದ ನಮ್ಮ ಗಿರಿಯಮ್ಮಹಳ್ಳಿ ಕ್ರಾಸ್ ನಲ್ಲಿ ಸಾಕಷ್ಟು ಭಾರಿ ಅಪಘಾತಗಳಾಗಿ ಕ್ರಾಸ್ ನಲ್ಲಿ ಅಂಡರ್ ಪಾಸ್ ಮಾಡಿಸುವಂತೆ ತಳಕು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಸೇರಿ ಸಾಕಷ್ಟು ಬಾರಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ನೀಡಿದ್ದೇವೆ.

ಯಾವುದೇ ಅಧಿಕಾರಿಗಳು ಗಮನಹರಿಸುತ್ತಿಲ್ಲ. ಅಧಿಕಾರಿಗಳು ಈ ಕ್ರಾಸ್ ನಲ್ಲಿ ಅಂಡರ್ ಪಾಸ್ ಮಾಡಿಸಿದರೆ ಈ ಭಾಗದ ಜನರಿಗೆ ಒಳ್ಳೆಯದು ಆಗುತ್ತದೆ ಇಂದು ನಡೆದ ಅಪಘಾತದ ವೇಳೆ ಗ್ರಾಮಸ್ಥರು ಧರಣಿ ಕೂತ ಸ್ಥಳದಲ್ಲಿ ಅಧಿಕಾರಿಗಳು ಜನವರಿ 3ನೇ ತಾರೀಖು ಗಡುವು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಅಂಡರ್ ಪಾಸ್ ಮಾಡಿಸದಿದ್ದರೆ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಚ್ಚರಿಸಿದ್ದಾರೆ.

ಇದೇ ಸಂದರ್ಭದಲ್ಲಿ ಗಿರಿಯಮ್ಮನಹಳ್ಳಿ ಗ್ರಾಮದ ರತ್ನಮ್ಮ ಮಾತನಾಡಿ ನಮಗೆ ಇಲ್ಲಿ ಪ್ರತಿದಿನ ಸಂಚಾರ ಮಾಡಲು ತುಂಬಾ ತೊಂದರೆಯಾಗುತ್ತದೆ ದಿನಬೆಳಗಾದರೆ ಕೂಲಿಕಾರ್ಮಿಕರು ಸೇರಿದಂತೆ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ಹೋಗಿ ಬರಲು ತುಂಬಾ ತೊಂದರೆ ಆಗುತ್ತದೆ ಅಂಡರ್ ಪಾಸ್ ಮಾಡಿಸುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಗಿರಿಯಮ್ಮನಹಳ್ಳಿ ಗ್ರಾಮಸ್ಥರಾದ ಪ್ರಕಾಶ್ ದಿನೇಶ್ ತಿಪ್ಪಕ್ಕ ಪವನ್, ದಿನೇಶ್, ಲೋಕೇಶ್, ಧನಂಜಯ, ಚಂದ್ರಶೇಖರ್, ತಿಪ್ಪಯ್ಯ ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page