25ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪತ್ರ ಬರೆದಿರುವುದನ್ನು ನಾನು ಸ್ವಾಗತಿಸುತ್ತೇನೆ ಮುಖ್ಯಮಂತ್ರಿ ಸಿದ್ದರಾಮಯ್ಯ.

by | 25/09/23 | ಸುದ್ದಿ

ಬೆಂಗಳೂರು ಸೆ.25ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪತ್ರ ಬರೆದಿರುವುದನ್ನು ನಾನು ಸ್ವಾಗತಿಸುತ್ತೇನೆ.
ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಮೋದಿ ಅವರು ಮಧ್ಯಸ್ಥಿಕೆ ವಹಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸುವುದೊಂದೇ ಪರಿಣಾಮಕಾರಿ ಮತ್ತು ಈ ಸಂದರ್ಭಕ್ಕನುಗುಣವಾದ ಪರಿಹಾರವಾಗಿದೆ.

ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿಗಳಾದ ದೇವೇಗೌಡರ ಮನವಿಯನ್ನು ಪುರಸ್ಕರಿಸಿ, ಕೂಡಲೇ ಮಾತುಕತೆಗೆ ಆಹ್ವಾನಿಸುತ್ತಾರೆಂದು ನಂಬಿದ್ದೇನೆ.
ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಹೆಚ್.ಡಿ.ದೇವೇಗೌಡರ ಈ ನಿರ್ಧಾರದಿಂದಾದರೂ ಪ್ರೇರಣೆ ಪಡೆದು ರಾಜ್ಯ ಬಿಜೆಪಿ ನಾಯಕರು ಮತ್ತು ಆ ಪಕ್ಷದ ಸಂಸದರು ಸೇರಿ ಪ್ರಧಾನಮಂತ್ರಿ ಮಧ್ಯಪ್ರವೇಶಕ್ಕೆ ಒತ್ತಡ ಹೇರಬೇಕು. ಅತೀ ಶೀಘ್ರದಲ್ಲಿ ರಾಜ್ಯದ ಸರ್ವಪಕ್ಷಗಳ ನಾಯಕರ ನಿಯೋಗವನ್ನು ಪ್ರಧಾನ ಮಂತ್ರಿ ಭೇಟಿಮಾಡುವಂತೆ ಮಾಡಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ.

ನೆಲ-ಜಲ-ಭಾಷೆಯ ಹಿತಾಸಕ್ತಿಯ ರಕ್ಷಣೆಯ ವಿಚಾರದಲ್ಲಿ ರಾಜ್ಯದ ರಾಜಕೀಯ ಪಕ್ಷಗಳು ತಮ್ಮ ಭಿನ್ನಮತಗಳನ್ನು ಮರೆತು ಒಟ್ಟಾಗಿ ಸಮಸ್ಯೆಯ ಪರಿಹಾರಕ್ಕಾಗಿ ಪ್ರಯತ್ನ ಪಟ್ಟಿರುವ ಇತಿಹಾಸ ಕರ್ನಾಟಕ ರಾಜ್ಯಕ್ಕೆ ಇದೆ. ಈ ಪರಂಪರೆಯನ್ನು ಜೆಡಿಎಸ್ ಪಕ್ಷದಂತೆ ಬಿಜೆಪಿ ಕೂಡಾ ಪಾಲಿಸಿಕೊಂಡು ಬರುತ್ತದೆ ಎಂದು ನಾನು ನಂಬಿದ್ದೇನೆ.

Latest News >>

ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: -ಮುಖ್ಯಮಂತ್ರಿ ಸಿದ್ದರಾಮಯ್ಯ

ಬಳ್ಳಾರಿ,ಜೂ.20 ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸೋಲಿನ ಹೊಣೆಯನ್ನು ನಾನೇ ಹೊರುವೆ: ಪರಾಜಿತ ಅಭ್ಯರ್ಥಿ ಬಿ ಎನ್ ಚಂದ್ರಪ್ಪ 

ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯು ಕಳೆದ ಹತ್ತು ವರ್ಷಗಳಿಂದ ನನ್ನ ಕರ್ಮಭೂಮಿಯಾಗಿದ್ದು ಇಲ್ಲಿನ ಜನತೆ ಮನೆ ಮಗನಂತೆ ನೋಡಿದ್ದು ಒಂದು ಬಾರಿ...

ಜಾತಿನಿಂದನೆ, ದೌರ್ಜನ್ಯಗಳಂತಹ ಆರೋಪಗಳನ್ನು ಪರಿಶಿಷ್ಟರು ಕೈಬಿಟ್ಟಾಗ ಮಾತ್ರ ಸಮಾಜದಲ್ಲಿಬೆಳೆಯಲು ಸಾಧ್ಯ: ನೂತನ ಸಂಸದರಾದ ಗೋವಿಂದ ಕಾರಜೋಳ

ಹಿರಿಯೂರು: ಜಾತಿ ನಿಂದನೆ ಮತ್ತು ದಲಿತ ದೌರ್ಜನ್ಯಗಳಂತಹ ವೃತಾ ಆರೋಪಗಳನ್ನು ಪರಿಶಿಷ್ಟರು ಕೈ ಬಿಟ್ಟಾಗ ಮಾತ್ರ ಸಮಾಜದಲ್ಲಿ ಬೆಳೆಯಲು ಸಾಧ್ಯ...

ಚಿಕ್ಕಾಲಘಟ್ಟ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಶೀಘ್ರ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯ ಭರವಸ -ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ

ಚಿತ್ರದುರ್ಗ. ಜೂನ್.19: ಚಿಕ್ಕಾಲಘಟ್ಟ ಗ್ರಾಮದ ಬಹುದಿನಗಳ ಬೇಡಿಕೆಯಾದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಈಗಾಗಲೇ ಜಾಗ...

ಜನಪ್ರತಿನಿಧಿಗಳು ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸೋಣ – ಸಂಸದ ಗೋವಿಂದ ಕಾರಜೋಳ

ಚಿತ್ರದುರ್ಗ. ಜೂನ್19: ಚುನಾಯಿತ ಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಉತ್ತಮವಾಗಿ ಕಾರ್ಯನಿರ್ವಹಿಸಿ ಕೇಂದ್ರ ಹಾಗೂ...

ಕರ್ನಾಟಕ ಮಾಧ್ಯಮ ಮಹಾಕೂಟ ಜಿಲ್ಲಾ ಅಧ್ಯಕ್ಷರಾಗಿ ಕರುನಾಡು ಜಿಯಾ ಉಲ್ಲಾ ಆಯ್ಕೆ

ಚಳ್ಳಕೆರೆ ಕರ್ನಾಟಕ ಮಾಧ್ಯಮ ಮಹಾಕೂಟ ಜಿಲ್ಲಾ ಅಧ್ಯಕ್ಷರಾಗಿ ಕರುನಾಡು ಜಿಯಾ ಉಲ್ಲಾ ಆಯ್ಕೆ ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಕರ್ನಾಟಕ...

ಜೂ.21 ರ ಶುಕ್ರವಾರ ಬೆಳಗ್ಗೆ 10- 30 ಕ್ಕೆ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ತಾಪಂ ಇಒ ಶಶಿಧರ್

ಚಳ್ಳಕೆರೆ ಜೂ.19ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜೂ21 ರ ಶುಕ್ರವಾರ ಬೆಳಗ್ಗೆ 10-30 ಕ್ಕೆ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ...

ಗೋವಿಂದಕಾರಜೋಳರನ್ನು ಕೇಂದ್ರಸಚಿವರಾಗಿ ಮಾಡಬೇಕೆಂದು ಹೆಗ್ಗೆರೆ ಮಂಜುನಾಥ್ ಒತ್ತಾಯ

ಹಿರಿಯೂರು: ರಾಜ್ಯದಲ್ಲಿ ಅತಿ ಹೆಚ್ಚು ಎಡಗೈ ಸಮುದಾಯದವರಿದ್ದು, ಈ ಬಾರಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಹಾಗೆಯೇ ಚಿತ್ರದುರ್ಗ ಲೋಕಸಭಾ...

ಮಹನೀಯರ ಜಯಂತಿ: ಅರ್ಥಪೂರ್ಣ ಆಚರಣೆಗೆ ನಿರ್ಧಾರ- ಬಿ.ಟಿ. ಕುಮಾರಸ್ವಾಮಿ

ಚಿತ್ರದುರ್ಗ ಜೂನ್19: ಇದೇ ಜೂನ್ 27 ರಂದು ನಾಡಪ್ರಭು ಕೆಂಪೇಗೌಡ ಜಯಂತಿ ಹಾಗೂ ಜುಲೈ 02 ರಂದು ಡಾ. ಫ.ಗು. ಹಳಕಟ್ಟಿಯವರ ಜನ್ಮದಿನದ ಅಂಗವಾಗಿ...

ಯೋಗ ನಡಿಗೆಗೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ

ಚಿತ್ರದುರ್ಗ ಜೂನ್18: 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಂಗಳವಾರ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page