262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್ ಗಳನ್ನು ಜನಸೇವೆಗೆ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ.

by | 30/11/23 | ಕರ್ನಾಟಕ


ಬೆಂಗಳೂರು ನ.30 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್ ಗಳನ್ನು ಜನಸೇವೆಗೆ ಅರ್ಪಿಸಿ ಮಾತನಾಡಿದರು.

ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಗುರಿ.
ಹಳೆ ಬಟ್ಟೆ-ಕೊಳಕು ಬಟ್ಟೆ ಹಾಕಿಕೊಂಡು ಬರುವ ಬಡವರನ್ನೂ ಮಾನವೀಯವಾಗಿ ನಡೆಸಿಕೊಂಡು ತಾರತಮ್ಯ ಇಲ್ಲದ ಉತ್ತಮ ಆರೋಗ್ಯ ಸೇವೆ ನೀಡಬೇಕು.‌

ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂಥಾಗಬಾರದು ಎನ್ನುವ ಕಾರಣಕ್ಕೇ ತುರ್ತು 108 ಆ್ಯಂಬುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ. ರಾಜ್ಯದಲ್ಲಿ 840ಕ್ಕೂ ಹೆಚ್ಚು ಆ್ಯಂಬುಲೆನ್ಸ್ ಗಳ ಅಗತ್ಯವಿದೆ. ಪ್ರತೀ ತಾಲ್ಲೂಕಿನಲ್ಲಿ 4 ಆ್ಯಂಬುಲೆನ್ಸ್ ಗಳು ಕಾರ್ಯನಿರ್ವಹಿಸುತ್ತಾ ಪ್ರತೀ ದಿನ ನೂರಾರು ಮಂದಿಗೆ ತುರ್ತು ಆರೋಗ್ಯ ಸೇವೆ ಒದಗಿಸುತ್ತಿವೆ. ಪ್ರಾಥಮಿಕ ತುರ್ತು ಚಿಕಿತ್ಸೆ ಪ್ರಾಣ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ.

ಪ್ರತೀ ಜಿಲ್ಲೆಯಲ್ಲಿ MRI ಸ್ಕ್ಯಾನಿಂಗ್ ಸೌಲಭ್ಯ ಇರಬೇಕು. ಖಾಸಗಿ ಡಯಾಗ್ನೊಸ್ಟಿಕ್ ಸೆಂಟರ್ ಗಳಲ್ಲಿ ಸೇವಾವೆಚ್ಚ ದುಬಾರಿ ಆಗಿರುವುದರಿಂದ ಬಡವರಿಗೆ ಬಹಳ ಕಷ್ಟ ಆಗುತ್ತಿದೆ. ಈ ಕಾರಣಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಾವಿರಾರು ಮಂದಿ ಬೇಡಿಕೆ ಅರ್ಜಿ ಕೊಡುತ್ತಿದ್ದಾರೆ. ಆದ್ದರಿಂದ ಸರ್ಕಾರಿ ಆಸ್ಪತ್ರೆಗಳಲ್ಲೇ ಉತ್ತಮ‌ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವ ವಾತಾವರಣ ರಾಜ್ಯದಲ್ಲಿ ಸೃಷ್ಟಿ ಆಗುತ್ತಿದೆ. ಜಯದೇವ ಆಸ್ಪತ್ರೆಯಿಂದ ಉತ್ತಮ‌ಸೇವೆ ಸಾಧ್ಯ ಆಗಿರುವಾಗ ಉಳಿದ ಕಡೆಗಳಲ್ಲೂ ಅದೇ ಗುಣಮಟ್ಟದ ಸೇವೆ ಒದಗಿಸಲು ಸಾಧ್ಯವಿದೆ. ರಾಜ್ಯ ಸರ್ಕಾರ ಆ ದಿಕ್ಕಿನಲ್ಲಿ ಶ್ರಮಿಸುತ್ತಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page