52ಲಕ್ಷರೂ ಮೌಲ್ಯ 60 ಕಡಲೆ ಕಾಳುಚೀಲ ಕದ್ದ ಕಳ್ಳರನ್ನು ಪತ್ತೆಮಾಡಿ ಜೈಲಿಗೆ ಕಳಿಸಿದ ಹಿರಿಯೂರು ಪೋಲಿಸರು.

by | 08/07/24 | ಕ್ರೈಂ


ಹಿರಿಯೂರು ಜು.80.05.07.2024 ರಂದು ರಾತ್ರಿ ಹಿರಿಯೂರು ನಗರದ ಹುಳಿಯಾರು ರಸ್ತೆಯಲ್ಲಿರುವ ತಾಹಾ
ಪ್ಯಾಲೇಸ್ ಪಕ್ಕದಲ್ಲಿರುವ ಲಕ್ಷ್ಮೀಚಂದ್ ರವರಿಗೆ ಸೇರಿದ ಗೋಡಾನನ್ನು ಸಾಗರ್ ಎಂಬುವವರು ಬಾಡಿಗೆ ಪಡೆದು
ಸದರಿ ಗೋಡಾನಲ್ಲಿ ಶೇಖರಿಸಿಟ್ಟಿದ್ದ ಸುಮಾರು 2,40,000 ರೂಪಾಯಿ ಬೆಲೆ ಬಾಳುವ ತಲಾ 60 ಕೆ.ಜಿ.
ತೂಕವಿರುವ 60 ಕಡಲೆ ಕಾಳು ಚೀಲಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದು, ಈ ಬಗ್ಗೆ
ಸಾಗರ್ ತಂದೆ ಜಯಕುಮಾರ್ ರವರು ನೀಡಿದ ದೂರಿನ ಮೇರೆಗೆ ಹಿರಿಯೂರು ನಗರ ಪೊಲೀಸ್‌ ಠಾಣೆಯಲ್ಲಿ
ಮೊ.ನಂ.174/2024 ಕಲಂ.305,331(3),331(4) ಭಾರತೀಯ ನ್ಯಾಯ ಸಂಹಿತೆ ಪ್ರಕಾರ ಪ್ರಕರಣ ದಾಖಲಾಗಿರುತ್ತದೆ.
ಸದರಿ ಪ್ರಕರಣದಲ್ಲಿ ಕಳುವಾದ ಮಾಲು ಮತ್ತು ಆರೋಪಿತರನ್ನು ಪತ್ತೆ ಮಾಡಲು ಮಾನ್ಯ ಪೊಲೀಸ್
ಅಧೀಕ್ಷಕರ ಮಾರ್ಗದರ್ಶನದಲ್ಲಿ ಶ್ರೀ.ರಾಘವೇಂದ್ರ ಕಾಂಡಿಕೆ, ಪಿ.ಐ. ಹಿರಿಯೂರು ನಗರ ಮತ್ತು ಸಿಬ್ಬಂದಿಯವರನ್ನು
ಒಳಗೊಂಡ ತಂಡವು ದಿನಾಂಕ:06.07.2024 ರಂದು ತಾಂತ್ರಿಕ ಸಾಕ್ಷಿಗಳನ್ನು ಪರಿಶೀಲಿಸುವ ಸಮಯದಲ್ಲಿ ಎಂ
ಆರೋಪಿಯಾದ ಬಸವರಾಜ್‌ರವರ ಮೇಲೆ ಅನುಮಾನ ಬಂದಿದ್ದರಿಂದ ಸದರಿ ಅರೋಪಿತನನ್ನು ಠಾಣೆಗೆ ಕರೆಯಿಸಿ
ವಿಚಾರಣೆಗೊಳಪಡಿಸಿದಾಗ ತಾನು ತುಂಬಾ ಸಾಲವನ್ನು ಮಾಡಿಕೊಂಡಿದ್ದು, ಸಾಲದ ಕಂತುಗಳನ್ನು ಕಟ್ಟುವ
ಸಲುವಾಗಿ ತನ್ನ ಸ್ನೇಹಿತನಾದ ಮಂಜುನಾಥ.ಸಿ. ಸಹಾಯದಿಂದ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದ 60 ಕಡಲೆ
ಚೀಲಗಳನ್ನು ಕದ್ದು ಹಿರಿಯೂರು ಟೌನ್ ಬೈಪಾಸ್ ರಸ್ತೆಯಲ್ಲಿರುವ ವೀರಭದ್ರಸ್ವಾಮಿ ಟ್ರೇಡರ್ಸ್‌ಗೆ ಮಾರಾಟ
ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ. ನಂತರ ಎ2 ಆರೋಪಿಯಾದ ಮಂಜುನಾಥನನ್ನು ವಶಕ್ಕೆ ಪಡೆದು ವಿಚಾರ
ಮಾಡಲಾಗಿ ಎ! ಜೊತೆ ಸೇರಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ. ಸದರಿ ಆರೋಪಿತರ ವಿವರ ಈ
ಕೆಳಕ೦ಡಂತೆ ಇರುತ್ತದೆ.
1) ಎ-1 ಬಸವರಾಜ್ ತಂದೆ ಕರಿಯಣ್ಣ @ ಕರಿಯಪ್ಪ, ಸುಮಾರು 28 ವರ್ಷ ಯಲ್ಲದಕೆರೆ ಗ್ರಾಮ, ಹಾಲಿ ವಾಸ
ಮಲ್ಲೇಶ್ವರ ಬಡಾವಣೆ, ಕುವೆಂಪು ನಗರ, ಹಿರಿಯೂರು ಟೌನ್
2) ಎ-2, ಮಂಜುನಾಥ.ಸಿ. ತಂದೆ ಚಂದ್ರಣ್ಣ, ಸುಮಾರು 33 ವರ್ಷ, ವೇದಾವತಿ ನಗರ, ಹಿರಿಯೂರು ಟೌನ್
ಆರೋಪಿತರ ಕಡೆಯಿಂದ ಸುಮಾರು 2,52,000 ರೂಪಾಯಿ ಮೌಲ್ಯದ 60 ಕೆ.ಜಿ. ತೂಕದ 60 ಕಡಲೆ
ಕಾಳಿನ ಚೀಲಗಳನ್ನು ಅಮಾನತ್ತುಪಡಿಸಿಕೊಳ್ಳಲಾಗಿರುತ್ತದೆ. ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಮಾರುತಿ ಸುಜುಕಿ
ಕಂಪೆನಿಯ ಗ್ರಾಂಡ್ ವಿಟೆರಾ ಕಾರು ಹಾಗೂ ಒಂದು ಮಹೇಂದ್ರ ಕಂಪೆನಿಯ ಟ್ರಾಕ್ಟರನ್ನು ವಶಪಡಿಸಿಕೊಳ್ಳಲಾಗಿದ್ದು
ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಹಾಲಿ ನ್ಯಾಯಾಂಗ ಬಂಧನದಲ್ಲಿರುತ್ತಾರೆ.
ಸದರಿ ಪ್ರಕರಣವು ವರದಿಯಾದ 24 ಗಂಟೆಯೊಳಗಾಗಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು
ಮತ್ತು ಮಾಲನ್ನು ವಶಪಡಿಸಿಕೊಂಡ ಹಿರಿಯೂರು ನಗರ ಪೊಲೀಸ್ ಠಾಣೆಯ ಪಿ.ಐ. ಶ್ರೀ.ರಾಘವೇಂದ್ರ ಕಾಂಡಿಕೆ,
ಹಾಗೂ ಸಿಬ್ಬಂದಿಯವರಾದ ದೇವೇಂದ್ರಪ್ಪ, ಸಿದ್ದಲಿಂಗೇಶ್ವರ, ಸುದರ್ಶನಗೌಡ, ನಾಗಣ್ಣ, ಸುರೇಶ್ ನಾಯ್ಕ, ಜಾಫರ್
ಸಾದಿಕ್ ಉಲ್ಲಾ ರವರುಗಳ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು ಶ್ಲಾಘಿಸಿರುತ್ತಾರೆ.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page