ಹೊಂಚು‌ ಹಾಕಿ ಮನೆ ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳರ ಬಂಧನ; 4.75 ಲಕ್ಷ ಮೌಲ್ಯದ ನಗದು ಸಹಿತ ಚಿನ್ನ ವಶ

by | 23/03/23 | ಕ್ರೈಂ


ದಾವಣಗೆರೆ: ಮನೆಯಲ್ಲಿ ಯಾರು ಇಲ್ಲದನ್ನು ಹೊಂಚು‌ ಹಾಕಿ ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಮನೆ ಕಳ್ಳರನ್ನು ವಿದ್ಯಾನಗರ, ಕೆ.ಟಿ.ಜೆ ನಗರ ಪೊಲೀಸರು ಜಂಟಿ ಕಾರ್ಯಚರಣೆ ಮೂಲಕ ಬಂಧಿಸಿದ್ದಾರೆ. ಆರೋಪಿಗಳಿಂದ 4,75,000-ರೂ ಬೆಲೆ ಬಾಳುವ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದೆ
ನಾಗೇಶ್ ಎಂಬವರು ವಿದ್ಯಾನಗರ ಠಾಣೆಗೆ ಹಾಜರಾಗಿ, ಮನೆಯ ಬಾಗಿಲು ಹಾಕಿಕೊಂಡು ಸಂಬಂಧಿಕರ ಮದುವೆಗೆ ಹಿರಿಯೂರಿಗೆ ಹೋಗಿ ವಾಪಸ್ ಬಂದು ನೋಡಿದ್ದಾಗ ಯಾರೋ ಕಳ್ಳರು ಮನೆಯ ಬಾಗಿಲನ್ನು ಹೊಡೆದು 106 ಗ್ರಾಂ ಬಂಗಾರದ ಆಭರಣಗಳು 02 ಲಕ್ಷ ನಗದು ಹಣ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆ ಮಾಡಲು ದಾವಣಗೆರೆ ನಗರ ಉಪ ವಿಭಾಗದ ಡಿವೈಎಸ್‌ಪಿ ಮಲ್ಲೇಶ್ ದೊಡ್ಡಮನಿ ಮಾರ್ಗದರ್ಶನದಲ್ಲಿ‌ ಇನ್ಸ್ಪೆಕ್ಟರ್ ಗಳಾದ ಪ್ರಭಾವತಿ ಸಿ ಶೇತಸನದಿ ಪೊಲೀಸ್, ಶಶಿಧರ್ ಯು.ಜೆ ಕೆ.ಟಿ.ಜೆ ನೇತೃತ್ವದಲ್ಲಿ ವಿದ್ಯಾನಗರ ಪೊಲೀಸ್ ಠಾಣೆ ಹಾಗೂ ಕೆ.ಟಿ.ಜೆ ನಗರ ಪೊಲೀಸ್ ಸಿಬ್ಬಂದಿಯನ್ನೊಳಗೊಂಡ ತಂಡವನ್ನು ರಚಿಸಿದ್ದು ಸದರಿ ತಂಡವು ಜಂಟಿ ಕಾರ್ಯಚರಣೆಯ ಮೂಲಕ ಆರೋಪಿಯನ್ನು ಬಂಧಿಸಿದ್ದಾರೆ.
ಶ್ರೀನಿವಾಸ( 35 ) ವಾಸ- ಯಶವಂತಪುರ ಬೆಂಗಳೂರು . (22., ವಾಸ- ಚಕ್ರನಗರ ಅಂಧ್ರಳ್ಳಿ ಬೆಂಗಳೂರಿನ ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಲಾಗಿದೆ. ಆರೋಪಿತಗಳಿಂದ ವಿದ್ಯಾನಗರ ಪೊಲೀಸ್ ಠಾಣೆಯ 2 ಮನೆಗಳ್ಳತನ ಪ್ರಕರಣ ಹಾಗೂ ಕೆ.ಟಿ.ಜೆ ನಗರ ಪೊಲೀಸ್ ಠಾಣೆಯ 1 ಮನೆಗಳ್ಳತನ ಪ್ರಕರಣದಲ್ಲಿ ಕಳ್ಳತನ ಮಾಡಿದ್ದ ಒಟ್ಟು4.50 ಲಕ್ಷ ಬೆಲೆ ಬಾಳುವ 29 ಗ್ರಾಂ ಬಂಗಾರದ ಆಭರಣಗಳು, ಒಂದು ಫಾಸ್ಟ್ರಾಕ್ ವಾಚ್ ಹಾಗೂ 25 ಸಾವಿರ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆಆರೋಪಿ ಪತ್ತೆಗೆ ಪಿ.ಎಸ್.ಐಗಳಾದ ದೊಡ್ಡಮನಿ , ರೇಣುಕಾ, ವಿಶ್ವನಾಥ, ಎನ್.ಎಸ್ ಕಾಟೆ , ಮಂಜುನಾಥ ಕಲ್ಲದೇವರು, ತಿಪ್ಪೇಸ್ವಾಮಿ, ಸಿಬ್ಬಂದಿಗಳಾದ ಆನಂದ ಮುಂದಲಮನಿ, ಗೋಪಿನಾಥ, ಮಂಜಪ್ಪ, ಯೋಗೀಶ್, ಭೋಜಪ್ಪ, ಮಂಜುನಾಥ ಮತ್ತು ಕೆ.ಟಿ.ಜೆ ನಗರ ಪೊಲೀಸ್ ಠಾಣೆಯ ಪ್ರಕಾಶ್, ಶಂಕರ್ ಜಾದವ್, ತಿಮ್ಮಣ್ಣ, ಶಿವರಾಜ್, ಮಂಜುನಾಥ, ಷಣ್ಮುಖ, ಮತ್ತು ಎಫ್.ಪಿ.ಬಿ ಘಟಕದ ಸಿಬ್ಬಂದಿಗಳಾದ ಅಕ್ತರ್, ನಾಗರಾಜ, ಮಾರುತಿ, ವಿರೇಶ್, ಚಾಲಕರಾದ ರಾಮಚಂದ್ರಪ್ಪ ಹಾಗೂ ಜಿಲ್ಲಾ ಪೊಲೀಸ್ ಕಚೇರಿಯ ಸಿಬ್ಬಂದಿಯಾದ ರಾಘವೇಂದ್ರ, ಶಾಂತರಾಜ್ ತಂಡದಲ್ಲಿದ್ದರು. ಕಾರ್ಯಾಚರಣೆ ನಡೆಸಿದ ತಂಡಕ್ಕೆ ಸಿ.ಬಿ ರಿಷ್ಯಂತ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಬಿ ಬಸರಗಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Latest News >>

ಸಮಾಜದ ಸಮಗ್ರ ಬೆಳವಣಿಗೆಗೆ ಶಿಕ್ಷಣ ವಲಯ ಅಭಿವೃದ್ಧಿ ಆಗಬೇಕಾಗಿದೆ ಶಾಸಕ ಎನ್ ವೈ ಗೋಪಾಲಕೃಷ್ಣ.

ನಾಯಕನಹಟ್ಟಿ:: ಮೇ.23. ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಎನ್ ವೈ ಗೋಪಾಲಕೃಷ್ಣ ಹೇಳಿದ್ದಾರೆ....

ತಾಲ್ಲೂಕಿನ ಶುಭೋದಯ ಸೇವಾವೃದ್ದಾಶ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಜಿ.ಎಲ್.ಮೂರ್ತಿ ರವರ ಹುಟ್ಟುಹಬ್ಬಆಚರಣೆ: ಮುಖ್ಯಸ್ಥ ತೇಜೋಮೂರ್ತಿ

ಹಿರಿಯೂರು: ಅಭಿಮತ ಪತ್ರಿಕೆಯ ಸಂಪಾದಕರು ಹಾಗೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಎಸ್.ಸಿ.ಸೆಲ್. ಘಟಕ ಅಧ್ಯಕ್ಷರಾದ ಜಿ.ಎಲ್.ಮೂರ್ತಿ...

ಮೌಡ್ಯಗಳಿಂದ ಹೊರಬಂದು ಬುದ್ಧನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕಿದೆ:ಪ್ರೊ.ಸಿಕೆ ಮಹೇಶ್ವರಪ್ಪ ಅಭಿಮತ 

ಚಳ್ಳಕೆರೆ: ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ಶಾತವಾಹನ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮತ್ತು ವಿಜಯ ಸಂಕಲ್ಪ ದಿನಪತ್ರಿಕೆ ವತಿಯಿಂದ ಬುದ್ಧ...

ವಾಣಿವಿಲಾಸಸಾಗರ ಜಲಾಶಯಕ್ಕೆ ತಗ್ಗಿದ ಒಳಹರಿವು ಮುಂಗಾರು ಮಳೆಯಿಂದಾಗಿ 1.65ಅಡಿ ನೀರು ಸಂಗ್ರಹ

ಹಿರಿಯೂರು : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯಕ್ಕೆ ಪೂರ್ವ ಮುಂಗಾರು ಮಳೆಯಿಂದಾಗಿ 1.65 ಅಡಿ ನೀರು ಸಂಗ್ರಹವಾಗಿದೆ. ಇದರಿಂದ ಪ್ರಸ್ತುತ...

ಸಡಗರ ಸಂಭ್ರಮದಿಂದ ಜರುಗಿದ ಶ್ರೀವೀರಭದ್ರಸ್ವಾಮಿ ರಥೋತ್ಸವ..

ಚಳ್ಳಕೆರೆ ಜನಧ್ವನಿ ವಾರ್ತೆ ಮೇ 22 ನಗರದ ಜನತೆಯ ಆರಾದ್ಯದೈವ ಶ್ರೀ ವೀರಭದ್ರಸ್ವಾಮಿ ರಥೋತ್ಸವವು ಶ್ರದ್ಧೆ ಭಕ್ತಿ ಸಂಭ್ರಮದಿAದ ಬುಧವಾರ...

ವಾಣಿವಿಲಾಸ ಸಾಗರಕ್ಕೆ ಈ ಮಳೆಯಲ್ಲಿ 3800ಕ್ಯೂಸೆಕ್ ನೀರಿನ ಒಳಹರಿವು ರೈತರ ಮೊಗದಲ್ಲಿ ಸಂತಸ ತಂದಿದೆ

ಹಿರಿಯೂರು: ಈ ಬಾರಿ ಸುರಿದ ಮಳೆಯಿಂದಾಗಿ ಕಡೂರು, ಬೀರೂರು, ಹೊಸದುರ್ಗ ಸೇರಿದಂತೆ ವೇದಾವತಿ ಜಲಾನಯನ ಪ್ರದೇಶದಾದ್ಯಂತ ಸುರಿಯುತ್ತಿರುವ...

ಮಾಡಿದಷ್ಟು ನೀಡು ಬಿಕ್ಷೆ ಕಾಯಕಯೋಗಿ ಶ್ರೀಗುರು ತಿಪ್ಪೇರುದ್ರಸ್ವಾಮಿ ಕಟ್ಟಿಸಿದ ಚಿಕ್ಕ ಕೆರೆ- 18 ವರ್ಷಗಳ ನಂತರ ಕೆರೆಗೆ ನೀರು ಈ ಭಾಗರದ ಜನರಲ್ಲಿ ಮಂದಹಾಸ ಮೂಡಿಸಿದ ವರುಣ..

ನಾಯಕನಹಟ್ಟಿ ಮೇ 22 ಸುಮಾರು ವರ್ಷಗಳಿಂದ ನೀರು ಕಾಣದ ಕೆರೆಗೆ ನೀರು ಬರುತ್ತಿರುವ ದೃಶ್ಯ ಕಂಡು ಗ್ರಾಮದ ಜನರಲ್ಲಿ ಮಂದಹಾಸ ಮೂಡುವಂತೆ ಮಾಡಿದೆ....

ವಿಶ್ವಕರ್ಮ ಸಮುದಾಯದ ವತಿಯಿಂದ ಪಟ್ಟಣದ ಶ್ರೀ ಕಾಳಿಕಾದೇವಿ ಪಲ್ಲಕ್ಕಿ ಉತ್ಸವ ಮಂಗಳವಾರ ಅದ್ದೂರಿಯಾಗಿ ಜರುಗಿತು.

ನಾಯಕನಹಟ್ಟಿ:: ಶ್ರೀ ಕಾಳಿಕಾದೇವಿ ಏಳನೇ ವರ್ಷದ ವಾರ್ಷಿಕ ಸಮಾರಂಭದ ಪಲ್ಲಕ್ಕಿ ಉತ್ಸವ ಸಂಭ್ರಮ ಸಡಗರದಿಂದ ಜರುಗಿದೆ ಎಂದು ಕಾರ್ಯದರ್ಶಿ...

ಚಿತ್ರದುರ್ಗ ಜಿಲ್ಲೆಯಲ್ಲಿ ವಿಧಾನ ಪರಿಷತ್ ಸ್ಥಾನ ಗಳಿಸುವ ಕಾಂಗ್ರೆಸ್ ಪಕ್ಷದ ಕನಸು ಭಗ್ನವಾಗಲಿದೆ ಶಿಕ್ಷಕ ಮತದಾರರು ನಾಲ್ಕನೇ ಬಾರಿಗೆ ಬೆಂಬಲಿಸಲಿದ್ದಾರೆ: ವೈಎ ನಾರಾಯಣಸ್ವಾಮಿ ವಿಶ್ವಾಸ 

ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಇದುವರೆಗೂ ವಿಧಾನ ಪರಿಷತ್ ಸ್ಥಾನದ ಗೆಲುವಿನ ಬಾಗಿಲು ತೆಗೆಯುವಲ್ಲಿ ವಿಫಲವಾಗಿದೆ ಈ...

ಮೇ 22 ರ ಬುಧವಾರ ಮಧ್ಯಾಹ್ನ 3.30ಕ್ಕೆ ಮುಕ್ತಿ ಬಾವುಟ ಹರಾಜು ನಂತರ ಶ್ರೀವೀರಭದ್ರಸ್ವಾಮಿ ದೊಡ್ಡ ರಥೋತ್ಸವ ಜರುಗಲಿದೆ.

ಚಳ್ಳಕೆರೆ ಮೇ 20ಚಳ್ಳಕೆರೆ ನಗರದ ಆರಾಧ್ಯ ದೈವ ವೀರಭದ್ರಸ್ವಾಮಿ ದೊಡ್ಡ ರಥೋತ್ಸವ ಮೇ 22 ರಂದು ಬುಧವಾರ ಮಧ್ಯಾಹ್ನ 3.30ಕ್ಕೆ ಮುಕ್ತಿ ಬಾವುಟ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page