ಆಗಸ್ಟ್ 21 ರಿಂದ ಸೆಪ್ಟೆಂಬರ್ 2 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 3188 ವಿದ್ಯಾರ್ಥಿಗಳಿಗೆ 7 ಪರೀಕ್ಷಾ ಕೇಂದ್ರಗಳು ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಪರೀಕ್ಷಾ ಕಾರ್ಯ ನಿರ್ವಹಿಸಿ: ಜಿಲ್ಲಾಧಿಕಾರಿ ದಿವ್ಯಪ್ರಭು

by | 17/08/23 | ಸುದ್ದಿ

ಚಿತ್ರದುರ್ಗ ಆ.17:
ಇದೇ ಆಗಸ್ಟ್ 21 ರಿಂದ ಸೆಪ್ಟೆಂಬರ್ 2 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ನಡೆಯಲಿದೆ. ಜಿಲ್ಲೆಯಲ್ಲಿ 3188 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 7 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿದೆ. ಪರೀಕ್ಷಾ ಕಾರ್ಯವನ್ನು ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರವಾರ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2ರ ಪರೀಕ್ಷಾ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಹಾಗೂ ಮೊದಲನೇ ಪೂರಕ ಪರೀಕ್ಷೆಯನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಅದೇ ರೀತಿಯಾಗಿ ಎರಡನೇ ಪೂರಕ ಪರೀಕ್ಷೆಯನ್ನೂ ಗಂಭೀರವಾಗಿ ಪರಿಗಣಿಸಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನೀಡಿರುವ ಮಾರ್ಗಸೂಚಿಗಳನ್ನು ಎಲ್ಲ ಹಂತದ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದ ಅವರು, ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಪರೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದರು.
ಪರೀಕ್ಷಾ ಕೇಂದ್ರಗಳ ಸುತ್ತ ಅಗತ್ಯ ಬಂದೋಬಸ್ತ್ ಕಲ್ಪಿಸಬೇಕು. ಸೂಕ್ತ ಪೊಲೀಸ್ ರಕ್ಷಣೆಯಲ್ಲಿಯೇ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಬೇಕು. ಪ್ರಶ್ನೆಪತ್ರಿಕೆಗಳ ರಕ್ಷಣೆಗಾಗಿ ನೇಮಿಸಿರುವ ವಿಶೇಷ ಪ್ರಶ್ನೆ ಪತ್ರಿಕಾ ಪಾಲಕರ ತ್ರಿಸದಸ್ಯ ಸಮಿತಿ ನಿಯಮಾನುಸಾರ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ಪರೀಕ್ಷಾ ಕಾರ್ಯ ಕೇವಲ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಮಾತ್ರ ಸಂಬಂಧಿಸಿಲ್ಲ. ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿ ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು ಎಂದು ತಾಕೀತು ಮಾಡಿದರು.
ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ ಮಾತನಾಡಿ, ಚಿತ್ರದುರ್ಗ ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ಚಳ್ಳಕೆರೆಯ ಸರ್ಕಾರಿ ಪದವಿಪೂರ್ವ ಕಾಲೇಜು, ಹಿರಿಯೂರು ಸರ್ಕಾರಿ ಪದವಿಪೂರ್ವ ಕಾಲೇಜು, ಹೊಸದುರ್ಗದ ಸರ್ಕಾರಿ ಪದವಿಪೂರ್ವ ಕಾಲೇಜು, ಮೊಳಕಾಲ್ಮುರು ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಹೊಳಲ್ಕೆರೆಯ ಕೊಟ್ರ ನಂಜಪ್ಪ ಪದವಿಪೂರ್ವ ಕಾಲೇಜು ಸೇರಿದಂತೆ ಜಿಲ್ಲೆಯಲ್ಲಿ 7 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 3188 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
ಜಿಲ್ಲೆಯಲ್ಲಿ ಸೂಕ್ಷ ಹಾಗೂ ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಇಲ್ಲ. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಅವಶ್ಯಕತೆ ಇದೆ. ಪರೀಕ್ಷೆ ಪ್ರಾರಂಭವಾಗುವುದಕ್ಕಿಂತ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ನಂತರ 30 ನಿಮಿಷಗಳು ಪೊಲೀಸ್ ಬಂದೋಬಸ್ತಿನ ಅವಶ್ಯಕತೆ ಇದೆ. ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಬೇಕು. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿರುವ ಜೆರಾಕ್ಸ್ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚಿಸುವುದು. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ 144 ಸೆಕ್ಷನ್ ಜಾರಿ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್‍ಲೈನ್ ಮೂಲಕ ದಾಖಲಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಪೋನುಗಳನ್ನು ತರುವುದು ಕಡ್ಡಾಯವಾಗಿ ನಿಷೇಧಿಸುವುದು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತೀಕ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ ಸೇರಿದಂತೆ ಆಯಾ ತಾಲ್ಲೂಕಿನ ತಹಶೀಲ್ದಾರ್‍ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page