ಗೃಹಲಕ್ಷ್ಮಿ ಯೋಜನೆಯನ್ನು ಎಲ್ಲಾ ಕುಟುಂಬ ಯಜಮಾನಿಯರು ಸದ್ಬಳಕೆ ಮಾಡಿಕೊಳ್ಳಬೇಕು. ಎಂದು ಪಟ್ಟಣ ಪಂಚಾಯತ್ ಮುಖ್ಯಾ ಅಧಿಕಾರಿ ಎಂ ಶಿವಕುಮಾರ್

by | 31/08/23 | ಆರ್ಥಿಕ

ನಾಯಕನಹಟ್ಟಿ : ರಾಜ್ಯದ ಕಟ್ಟ ಕಡೆಯ ಕುಟುಂಬದ ಮನೆಯ ಯಜಮಾನಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 2000 ರೂಪಾಯಿಗಳನ್ನು ಅವರ ಖಾತೆಗೆ ಜಮಾ ಮಾಡುವಂತಹ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯನ್ನು ಇಂದು ಹ ಯೋಜನೆಯನ್ನು ಎಲ್ಲಾ ಕುಟುಂಬ ಯಜಮಾನರು ಸದ್ಬಳಕೆ ಮಾಡಿಕೊಳ್ಳಬೇಕು. ಎಂದು ಪಟ್ಟಣ ಪಂಚಾಯತ್ ಮುಖ್ಯಾ ಅಧಿಕಾರಿ ಎಂ ಶಿವಕುಮಾರ್ ತಿಳಿಸಿದರು.

ನಾಯಕನಹಟ್ಟಿಯ ವಾಲ್ಮೀಕಿ ವೃತ್ತದಲ್ಲಿ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಾ ಅಧಿಕಾರಿ ಎಂ ಶಿವಕುಮಾರ್ ಅವರು, ಈ ಯೋಜನೆಯ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ 2000 ರೂಪಾಯಿ ಹಣವನ್ನು ಕುಟುಂಬದ ಯಜಮಾನರು ದುರುಪಯೋಗಪಡಿಸಿಕೊಳ್ಳದೆ ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು .

ರಾಜ್ಯದ ಕಟ್ಟ ಕಡೆಯ ಬಡ ಕುಟುಂಬದ ಯಜಮಾನಿಗೆ ರಾಜ್ಯ ಸರ್ಕಾರ ನೀಡುವ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿಗಳನ್ನು ಫಲಾನುಭವಿಯ ಖಾತೆಗೆ ಜಮಾ ಮಾಡಲಾಗುವುದು. ಪಂಚಾಯಿತಿ ವ್ಯಾಪ್ತಿಯಲ್ಲಿ 3700 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದು ಇನ್ನು ಉಳಿದ ಫಲಾನುಭವಿಗಳು ಕೂಡಲೇ ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯ ಅನುಕೂಲವನ್ನು ಪಡೆದುಕೊಳ್ಳಬೇಕು. ಯಾವೊಬ್ಬ ಕುಟುಂಬದ ಯಜಮಾನಯು ಸಹ ಈ ಯೋಜನೆಯಿಂದ ಯಾರು ವಂಚಿತರಾಗಬಾರದು ಎಂದು ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಎಂ ಶಿವಕುಮಾರ್ ಅವರು ತಿಳಿಸಿದರು.

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯದ ಗೃಹಲಕ್ಷ್ಮಿ ಯೋಜನೆಯ ವಿವಾಹಿತೆಯಾರು, ಪಡಿತರ ಚೀಟಿಯಲ್ಲಿರುವ ಕುಟುಂಬದ ಯಜಮಾನಿರು, ಲೈಂಗಿಕ ಅಲ್ಪಸಂಖ್ಯಾತೆ ಯರು, ಡಿ ದರ್ಜೆ ನೌಕರರು, ಗುತ್ತಿಗೆ ನೌಕರರು ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ಜಿಎಸ್ಟಿ, ಆದಾಯ ತೆರಿಗೆ ಕಟ್ಟುವಂತ ಕುಟುಂಬದವರು ಅರ್ಹರಾಗಿರುವುದಿಲ್ಲ. ಕುಟುಂಬದಲ್ಲಿನ ಅತ್ತೆ-ಸೊಸೆಯರು ಒಪ್ಪಂದದ ಮೇರೆಗೆ ಯಾರಿಗಾದರೂ ಒಬ್ಬರಿಗೆ ಯೋಜನೆಯ ಲಾಭ ಪಡೆಯಬಹುದಾಗಿದೆ ಎಂದು ಚಳ್ಳಕೆರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಯ ಅಧಿಕಾರಿ ಜಯಲಕ್ಷ್ಮಿವಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತಿ ಸದಸ್ಯರಾದ ಸೈಯದ್ ಅನ್ವರ್ ಪಾಷ. ಕೆ ಪಿ ತಿಪ್ಪೇಸ್ವಾಮಿ.ಬೋರಮ್ಮ. ಮಂಜುಳಾ. ಸುನಿತಾ. ಪೆದ್ದನೋ ಓಬಯ್ಯ . ದುರುಗಪ್ಪ. ಆರೋಗ್ಯ ನಿರೀಕ್ಷಕರಾದ ಟಿ ರುದ್ರಮನಿ. ದ್ವಿತೀಯ ದರ್ಜೆ ಸಹಾಯಕರಾದ ಎಸ್ ಸುರೇಶ್, ಟಿ ತಿಪ್ಪೇಸ್ವಾಮಿ. ದಯಾನಂದ. ಕರವ ಸುಲಿಗಾರ ಸಂದೀಪ್. ಶಾಮಿಯಾನ ಬಂಗಾರಪ್ಪ ಆಶಾ ಕಾರ್ಯಕರ್ತೆಯರು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು. ವ್ಯಾಪ್ತಿಯ ಎಲ್ಲಾ ಗೃಹಿಣಿಯರು ಭಾಗವಹಿಸಿದ್ದರು.

,,,,,,,,,, ,,,,,,, ,,,,,,,,, ,,,,,,,
ಕಾಂಗ್ರೆಸ್ ಪಕ್ಷ ಚುನಾವಣೆಗಿಂತ ಮುಂಚೆ ಘೋಷಣೆ ಮಾಡಿದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಅತ್ತೆ -ಸೊಸೆಯರು ಕಿತ್ತಾಡದೆ ಒಪ್ಪಂದದ ಮೇರೆಗೆ ಸೌಲಭ್ಯವನ್ನು ಪಡೆದುಕೊಂಡು ಸಹಬಾಳ್ವೆಯಿಂದ ಕುಟುಂಬ ನಿರ್ವಹಣೆ ಮಾಡಬೇಕು.

ಎಸ್ ಪ್ರಭುಸ್ವಾಮಿ
ಕಾಂಗ್ರೆಸ್ ಮುಖಂಡರು.
ರಾಜ್ಯ ಸರ್ಕಾರ ನೀಡುವ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಗೃಹಿಣಿಯರು ತಮ್ಮ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಶಿಕ್ಷಣವಂತರನ್ನಾಗಿ ಮಾಡಬೇಕು.ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆರುವರೆ ಕೋಟಿ ಜನರು ನೆಮ್ಮದಿಯಾಗಿದ್ದಾರೆ ಎಂದರು.

ಸೈಯದ್ ಅನ್ವರ್ ಭಾಷಾ
ಪಟ್ಟಣ ಪಂಚಾಯತ್ ಸದಸ್ಯ
ನುಡಿದಂತೆ ನಡೆಯುವ ಸರ್ಕಾರ ಎಂದರೆ ಅದು ಸಿದ್ದರಾಮಯ್ಯ ಸರ್ಕಾರ
ರಾಜ್ಯದ ಹೆಣ್ಣು ಮಕ್ಕಳು ಕಾಂಗ್ರೆಸ್ ಪಕ್ಷವನ್ನು ನಾವೆಲ್ಲರೂ ಬೆಂಬಲಿಸಬೇಕು. ಮತ್ತು ಎಲ್ಲಾ ಹೆಣ್ಣು ಮಕ್ಕಳು ಕಾಂಗ್ರೆಸ್ ಗೆ ಚಿರಋಣಿಯಾಗಿರಬೇಕು.

ಗೃಹಲಕ್ಷ್ಮಿ ಹಣ ಮಹಿಳೆಯರು ದುರುಪಯೋಗಪಡಿಸಿಕೊಳ್ಳದೆ ಒಳ್ಳೆಯದಕ್ಕಾಗಿ ಬಳಸಿ ಎಂದು ತಿಳಿಸಿದರು. ಮಹಿಳೆಯರಿಗೆ ಗೌರವಎಲ್ಲಿ ಸಿಗುತ್ತದೆಯೋ ಅಲ್ಲಿ ಇನ್ನು ಹೆಚ್ಚಾಗಿ ನಮಗೆ ಗೌರವ ಸಿಗುತ್ತದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಎಂದು ಮನವಿ ಮಾಡಿಕೊಂಡರು ಮತ್ತು 4ನೇ ಗ್ಯಾರೆಂಟಿಯಾದ ಗೃಹಲಕ್ಷ್ಮಿ ಯೋಜನೆ ನಮ್ಮ ಖಾತೆಗೆ ರೂ.2000 ಹಣ ಬೀಳುತ್ತಿರುವುದು ನಮ್ಮ ಖುಷಿಯ ಸಂಗತಿ ಎಂದರು. ರಾಜ್ಯ ಸರ್ಕಾರ ಮಹಿಳೆಯರಿಗೆ ಶ್ರಮಿಸುತ್ತಿದೆ. ಗೃಹಲಕ್ಷ್ಮಿ ಯೋಜನೆಯಿಂದ ನಮ್ಮ ನಮಗೆಲ್ಲ ಮತ್ತು ಕುಟುಂಬಕ್ಕೆ. ಹುಡುಗನ ವಿದ್ಯಾಭ್ಯಾಸಕ್ಕಾಗಿ ನಮಗೆಲ್ಲ ಅನುಕೂಲವಾಗಿದೆ. ಎಂದು ಸಂತಸ ವ್ಯಕ್ತಪಡಿಸಿದರು.

ಮಂಜುಳಾ.
ಪಟ್ಟಣ ಪಂಚಾಯತ್ ಸದಸ್ಯೆ.
ಪಟ್ಟಣ ಪಂಚಾಯತಿ ಸದಸ್ಯೆಯಾದ ಸುನಿತ ಮುದಿಯಪ್ಪ ಮಾತನಾಡಿ ಗೃಹಲಕ್ಷ್ಮಿ ಯೋಜನೆಗೆ ಕಾರಣಕರ್ತರಾದ ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ನಾನು ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page