ಭರಮಸಾಗರ ಲಂಬಾಣಿ ತಾಂಡದಲ್ಲಿ ದೀಪಾವಳಿ ಸಂಭ್ರಮ ಜಾನಪದ ಹಾಡಿಗೆ ನೃತ್ಯ ವೈಭವ

by | 15/11/23 | ಜೀವನಶೈಲಿ


ಚಳ್ಳಕೆರೆ:ತಾಲೂಕಿನ ಕ ಸ ಬ ಹೋಬಳಿಯ ಭರಮಸಾಗರ ಲಂಬಾಣಿ ತಾಂಡಾ‌ದಲ್ಲಿ ಯುವತಿಯರು ಸಾಂಪ್ರದಾಯಿಕ ಹೊಸ ಉಡುಪು ತೊಟ್ಟು, ಕೈಯಲ್ಲಿ ದೀಪ ಹಿಡಿದು ಮನೆ ಮನೆಗೆ ತೆರಳಿ, ನೃತ್ಯ ಮಾಡಿ ದೀಪಾವಳಿ ಹಬ್ಬವನ್ನ ಸಂಭ್ರಮಿಸಿದರು.


ಎಲ್ಲೆಡೆ ಬೆಳಕಿನ ಹಬ್ಬ ದೀಪಾವಳಿಯ ಸಡಗರ ಕಳೆಗಟ್ಟಿದೆ. ಬಂಜಾರ ಜನಾಂಗದ ದೀಪಾವಳಿ ಹಬ್ಬ ‘ಮೇರಾ’ ಸಂಭ್ರಮವಂತೂ ಕಣ್ಮನ ಸೆಳೆಯುತ್ತಿದೆ ಬಂಜಾರ ಜನಾಂಗವು ಅನಾದಿ ಕಾಲದಿಂದಲೂ ತಮ್ಮದೇ ಆದ ವಿಶಿಷ್ಟ ಮತ್ತು ವಿನೂತನ ರೀತಿಯಲ್ಲಿ ಹಬ್ಬ ಆಚರಿಸಿಕೊಂಡು ಬರುತ್ತಿದ್ದು, ನೋಡುಗರಲ್ಲಿ ಖುಷಿ ಮೂಡಿಸುತ್ತದೆ.

ಬಂಜಾರ ಜನಾಂಗಕ್ಕೆ ದೀಪಾವಳಿ ಹಬ್ಬ ಬಹಳ ವಿಶೇಷ. ತಾಂಡಾಗಳಲ್ಲಿ ದೀಪಾವಳಿಯ ‘ಮೇರಾ’ ಸಂಭ್ರಮ ನೋಡುವುದೇ ಕಣ್ಣಿಗೆ ಹಬ್ಬ. ತಾಂಡಾಗಳಲ್ಲಿ ಅಮಾವಾಸ್ಯೆ ದಿನದಿಂದ ದೀಪಾವಳಿ ಆಚರಣೆ ಪ್ರಾರಂಭವಾಗುತ್ತದೆ.

ಭರಮಸಾಗರ ತಾಂಡಾ‌ದಲ್ಲಿ ಸಂಭ್ರಮದಿಂದ ದೀಪಾವಳಿ ಆಚರಣೆ ಮಾಡಲಾಯಿತು‌. ತಾಂಡಾದ ಯುವತಿಯರು ಸಾಂಪ್ರದಾಯಿಕ ಹೊಸ ಉಡುಪು ತೊಟ್ಟು ಸೇವಾಲಾಲ ಮರಿಯಮ್ಮ ದೇವಿಯ ಮಂದಿರಕ್ಕೆ ಆಗಮಿಸಿ, ದೇವರಿಗೆ ದೀಪ ಬೆಳಗಿಸಿದರು. ನಂತರ ಸಾಮೂಹಿಕವಾಗಿ ಸಾಂಪ್ರದಾಯಿಕ ಹಾಡುಗಳಿಗೆ ನೃತ್ಯ ಮಾಡಿ ಸಂಭ್ರಮಿಸಿದರು.

ಜೀವನದಲ್ಲಿ ಎದುರಾದ ದುಃಖ ದುಮ್ಮಾನಗಳು ಕಳೆದು ಕತ್ತಲೆಯಿಂದ ಬೆಳಕಿನಡೆಗೆ ಜೀವನ ಸಾಗಲಿ ಎನ್ನುವುದೇ ಮೇರಾ ಹಬ್ಬದ ಅರ್ಥ. ಬಂಜಾರ ಜನಾಂಗ ಇದನ್ನು ಅನಾದಿ ಕಾಲದಿಂದಲೂ ಆಚರಿಸಿಕೊಂಡು ಬರುತ್ತಿದೆ.

ಭರಮಸಾಗರ ತಾಂಡಾ ಹಾಗೂ ತಾಲೂಕಿನ ಇತರ ತಾಂಡಾಗಳಲ್ಲಿ ಚಾಚು ತಪ್ಪದೇ ಅನಾದಿ ಕಾಲದ ಮಾದರಿಯಲ್ಲೇ ಆಚರಣೆಗಳನ್ನು ಮುಂದುವರೆಸಿಕೊಂಡು ಬರಲಾಗುತ್ತಿದೆ. 

ದೀಪಾವಳಿ ಅಮಾವಾಸ್ಯೆ ದಿನ ಕಾಳಿಮಾಸ್ ದಿನ ಎಂದು ರಾತ್ರಿಯಿಂದ ಬೆಳಗಿನವರೆಗೆ ತಾಂಡಾದ ಮದುವೆಯಾಗದ ಕನ್ಯಾಮಣಿಯರು ಹೊಸ ಸಾಂಪ್ರದಾಯಿಕ ಉಡುಪು ತೊಟ್ಟು, ಕೈಯಲ್ಲಿ ಹಣತೆ ಹಿಡಿದು ತಾಂಡಾದ ಮನೆಗಳಿಗೆ ತೆರಳಿ ದೀಪ ಬೆಳಗಿಸುವುದು ರೂಢಿಯಲ್ಲಿದೆ. ಮದುವೆ ನಿಶ್ಚಯವಾದ ಯುವತಿಯರು ಅರಣಿಯಲ್ಲಿ ಹುಲ್ಲಿನಿಂದ ತಯಾರಿಸಿದ ಹಣತೆಯನ್ನು ಇಟ್ಟುಕೊಂಡು ಪ್ರತಿಯೊಂದು ಮನೆ ಮನೆಗೆ ಭೇಟಿ ನೀಡಿ ಆಕಳು, ಎತ್ತುಗಳಿಗೆ ಆರತಿ ಬೆಳಗಿಸಿ, ಮನೆಯವರಿಗೆ ಅಕ್ಕಿ ಹಿಟ್ಟು, ಬೆಲ್ಲ ಹಾಗೂ ನೀರು ಅರ್ಪಿಸುತ್ತಾರೆ

ಇದರೊಂದಿಗೆ ನಾನು ಗಂಡನ ಮನೆಗೆ ಹೋಗುತ್ತಿದ್ದೇನೆ. ನನಗೂ ತಾಂಡಾಕ್ಕೂ ಋಣ ತೀರಿದೆ. ನನ್ನ ಹೆತ್ತವರು ಒಡಹುಟ್ಟಿದವರನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು‌ ಸಾಂಪ್ರದಾಯಿಕ ಹಾಡಿನ ಮೂಲಕ ಹೇಳಿ ಹೋಗುತ್ತಾರೆ.

ದೀಪಾವಳಿ ಆರಂಭದಿಂದ ಮುಗಿಯುವ ವರೆಗೆ ಬಂಜಾರ ಸಮುದಾಯದವರು ಮನೆಯಿಂದ ದನಕರುಗಳ ಸಗಣಿಯನ್ನು ಹೊರಗೆ ಚೆಲ್ಲುವುದಿಲ್ಲ. ಇದರಲ್ಲಿ ಲಕ್ಷ್ಮಿ ಇರುತ್ತಾಳೆ ಎಂಬ ನಂಬಿಕೆ ಅವರಲ್ಲಿದೆ. ಒಟ್ಟಾರೆ, ಬಂಜಾರ ಜನಾಂಗಕ್ಕೆ ದೀಪಾವಳಿ ಅತಿದೊಡ್ಡ ಹಬ್ಬವಾಗಿದ್ದು, ಹತ್ತು ಹಲವು ವಿಶಿಷ್ಟತೆಯೊಂದಿಗೆ ಹಬ್ಬ ಮುಂದುವರೆಸಿಕೊಂಡು ಬರುತ್ತಿದ್ದಾರೆ.

ಈ ವೇಳೆ ಮಾತನಾಡಿದ ಗ್ರಾಮ ಪಂಚಾಯಿತಿ ಸದಸ್ಯ ರಂಗಸ್ವಾಮಿ ಹಬ್ಬಕ್ಕೆ ಬರುವುದು ಕಡ್ಡಾಯ ಉದ್ಯೋಗ ಅರಸಿ ಬೆಂಗಳೂರು ಮತ್ತು ನಗರಗಳಿಗೆ ಹೋದವರು ಕಾಫಿ ತೋಟ ಇತರ ಕೆಲಸಕ್ಕೆ ಎಂದು ಬೇರೆ ಕಡೆ ತೆರಳಿದ ಕಾರ್ಮಿಕರು ಸರ್ಕಾರಿ ಕೆಲಸದಲ್ಲಿರುವ ನೌಕರರು ದೀಪಾವಳಿಗೆ ತಮ್ಮ ಹುಟ್ಟೂರಿಗೆ ಬರುವುದು ಕಡ್ಡಾಯ ತಾಂಡಗಳಲ್ಲಿ ಎಲ್ಲಾ ಹಬ್ಬಗಳಿಗಿಂತ ದೀಪಾವಳಿಯನ್ನು ಹೆಚ್ಚು ಸಡಗರದಿಂದ ಆಚರಿಸಲಾಗುವುದರಿಂದ ಎಲ್ಲರೂ ಸೇರುತ್ತಾರೆ ಪೂರ್ವಜರ ಕಟ್ಟುಪಾಡುಗಳನ್ನು ಇಂದಿಗೂ ಉಳಿಸಿಕೊಂಡಿದ್ದು ಪ್ರತಿ ಮನೆಗಳಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟುತ್ತದೆ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಎಸ್. ರವಿ ನಾಯ್ಕ್ ಜಿ.ದೇಶ ನಾಯ್ಕ್ .ಹೇಮಾ ನಾಯ್ಕ್. ಗೌರಿ ಬಾಯಿ. ಸೊಮ್ಲಿ ಬಾಯಿ. ಸಾಲಿ ಬಾಯಿ.ಜಯ ಬಾಯಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page