ಹೆಚ್ಐವಿ ಸೋಂಕಿತರನ್ನು ಸಮಾಜದಲ್ಲಿ ವಿಶಿಷ್ಟ ವರ್ಗದಂತೆ ಕಾಣಬಾರದು: ಅಪರ ನ್ಯಾಯಾಧೀಶೆ ಹೆಚ್ಆರ್ ಹೇಮ ಅಭಿಮತ

by | 05/12/23 | ಆರೋಗ್ಯ


ಚಳ್ಳಕೆರೆ ಡಿ,5: ಹೆಚ್ಐವಿ ಸೋಂಕಿತರನ್ನು ಸಮಾಜದಲ್ಲಿ ತಾರತಮ್ಯದಿಂದ ಕಾಣುವುದರಿಂದ ಅವರ ಸಮಾನತೆ ಹಕ್ಕಿಗೆ ಧಕ್ಕೆಯಾಗಲಿದ್ದು ಕಾನೂನು ಬಾಹಿರವು ಆಗಿದೆ ಎಂದು ಅಪಾರ ಸಿವಿಲ್ ನ್ಯಾಯಾಧೀಶೆ ಹೆಚ್ಆರ್ ಹೇಮ ತಿಳಿಸಿದರು.


ನಗರದ ವಾಸವಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ, ಮತ್ತು ವಾಸವಿ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕೆಲವು ಸಂದರ್ಭಗಳನ್ನು ಹೊರತುಪಡಿಸಿ ಹೆಚ್ ಐವಿ ಸೋಂಕಿತರನ್ನು ಸಮಾನವಾಗಿ ಕಾಣಬೇಕು ಸಮಾಜದಲ್ಲಿ ಶಿಕ್ಷಿತರು ವಿಶಿಷ್ಟ ವರ್ಗವನ್ನು ಸೃಷ್ಟಿಸಬಾರದು ಕಳೆದ ಸುಮಾರು ವರ್ಷಗಳಿಂದ ಹೆಚ್ಐವಿ ಕುರಿತು ಮಾತನಾಡುತ್ತಿದ್ದು ಹೆಚ್ಐ ವಿ ಬಗೆಗಿರುವ ತಪ್ಪು ಕಲ್ಪನೆಗಳನ್ನು ಬಿಡಬೇಕು ಮುಂಜಾಗ್ರತ ಕ್ರಮಗಳನ್ನು ಸಕಾಲದಲ್ಲಿ ಕೈಗೊಂಡು ಜಾಗೃತರಾಗಬೇಕು ಮಾಧ್ಯಮಗಳ ಮೂಲಕ ಸಮಾಜಕ್ಕೆ ಜಾಗೃತಿ ಸಂದೇಶ ತಲುಪಿಸಬೇಕು ಎಂದರು.

ತಾಲೂಕು ಆರೋಗ್ಯ ಅಧಿಕಾರಿ ಡಾ. ಕಾಶಿ ಮಾತನಾಡಿ ಪ್ರತಿಯೊಬ್ಬರಿಂದಲೂ ಹೆಚ್ಐ ವಿ ಸೋಂಕಿತರನ್ನು ನಕಾರಾತ್ಮಕವಾಗಿ ನೋಡುವ ದೃಷ್ಟಿಕೋನ ಬದಲಾಗಬೇಕಿದ್ದು ಜಾಗೃತಿ ಮೂಡಿಸುವ ಕಾರ್ಯ ಪ್ರಾರಂಭವಾಗಬೇಕು ಅರಿವಿಲ್ಲದೆ ಬರುವ ರೋಗ ಇದಾಗಿದ್ದು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಎಆರ್‌ಟಿ ಚಿಕಿತ್ಸೆ ನೀಡಲಾಗುತ್ತಿದ್ದು  ಪದವಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಹೆಚ್ಐವಿ ರೋಗದ ಬಗ್ಗೆ ಮಾಹಿತಿ ನೀಡಲಾಗುತ್ತದೆ ಹಾಗೂ ಹೆಚ್ಐವಿ ಪೀಡಿತರಿಗೆ ಆಪ್ತ ಸಮಾಲೋಚನೆ ನಡೆಸಲಾಗುವುದು.ಸಾರ್ವಜನಿಕರು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಹೆಚ್ಐವಿ ಸೋಂಕಿತರನ್ನು ಸಹೋದರತೆಯ ಭಾವನೆಯಿಂದ ಕಾಣುವ ಮೂಲಕ ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಸಂದೇಶ ಸಾರಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ತಾಲೂಕು ಸರ್ಕಾರಿ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಜೆ ಡಿ ವೆಂಕಟೇಶ್ ಸಮಾಜದಲ್ಲಿ ಹೆಚ್ಐವಿ ಸೋಂಕಿತರನ್ನು ಶೋಷಿತರಂತೆ ಕಾಣಬಾರದು ಅವರು ಸಮಾಜಕ್ಕೆ ಕಳಂಕಿತ ವ್ಯಕ್ತಿಗಳಲ್ಲ ಈ ಕುರಿತು ಸಮಾಜದಲ್ಲಿ ಅರಿವು ಮೂಡಿಸುವ ಉದ್ದೇಶಕ್ಕಾಗಿ ವಿಶ್ವಸಂಸ್ಥೆ ವಿಶ್ವ ಏಡ್ಸ್ ದಿನಾಚರಣೆಗೆ ಕರೆ ನೀಡಿದ್ದು ವೈದ್ಯರ ಸಲಹೆಯಂತೆ ಸಕಾಲದಲ್ಲಿ ಎಚ್ಐವಿ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ  ವೈದ್ಯಕೀಯ ನೆರವು ಪಡೆದುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ವಾಸವಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಜೆ ಶ್ರೀರಾಮುಲು ವಕೀಲರ ಸಂಘದ ಉಪಾಧ್ಯಕ್ಷ ಟಿ ಪಾಲಯ್ಯ ಕಾರ್ಯದರ್ಶಿ ಸಿದ್ದರಾಜು ತಿಪ್ಪೇಸ್ವಾಮಿ ಸ್ಕಂದ ಜ್ಯೋತಿ, ಕಿರಣ, ನಂದ ,ನೇಮ ನಾಯಕ್ ಶಂಕರ್ ಬಸವರಾಜು, ಹರೀಶ್, ಭೀಮಣ್ಣ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಉಪನ್ಯಾಸಕರು ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page