ಸಾರ್ವಜನಿಕ ಶೌಚಾಲಯಗಳಿಗೆ ಹೈಟೆಕ್ ಸ್ಪರ್ಶ ನೀಡಿದ ಸ್ಪರ್ಶಮಾಂತ್ರಿಕ ಪೌರಾಯುಕ್ತರಾದ : ಹೆಚ್.ಮಹಂತೇಶ್.

by | 01/01/24 | ಸುದ್ದಿ


ಹಿರಿಯೂರು :
ನಗರದಲ್ಲಿ ಸಾರ್ವಜನಿಕ ಶೌಚಾಲಯಕ್ಕೆ ಹೈಟೆಕ್ ಸ್ಪರ್ಶದ ಜೊತೆಗೆ ಅದರ ಅದರ ಅಂಧ ಹೆಚ್ಚಿಸುವ ಕಾರ್ಯಬರದಿಂದ ಸಾಗುತ್ತಿದ್ದು, ಖಾಸಗಿ ಬಸ್ ನಿಲ್ದಾಣದ ಶೌಚಾಲಯವನ್ನು ಸ್ವಚ್ಛಗೊಳಿಸಿ ಸಾರ್ವಜನಿಕರ ಮನಸೆಳೆಯಲು ಶೌಚಾಲಯದ ಒಳಗಡೆ ಮತ್ತು ಹೊರಗಡೆ ವಿವಿಧರೀತಿಯ ಸುಂದರವಾದ ಚಿತ್ರಗಳನ್ನು ಬರೆಸುವುದರ ಮೂಲಕ ನಗರದ ಶೌಚಾಲಯಗಳಿಗೆ ಸ್ಪರ್ಶಮಾಂತ್ರಿಕ ಎಂದೇ ಪ್ರಸಿದ್ಧರಾದ ನಗರಸಭೆ ಪೌರಾಯುಕ್ತ ಮಹಂತೇಶ್ ಮೆರುಗು ನೀಡಿದ್ದಾರೆ.
ಸಾರ್ವಜನಿಕರ ಶೌಚಗೃಹಗಳು ಅಸ್ವಚ್ಛತೆಯ ತಾಣ ಎಂಬ ಅಭಿಪ್ರಾಯ ಸರ್ವೇಸಾಮಾನ್ಯವಾಗಿದ್ದು, ಇದೇ ಕಾರಣಕ್ಕೆ ಬಹಳಷ್ಟು ನಗರದಲ್ಲಿ ಇವುಗಳನ್ನು ತೆರವುಗೊಳಿಸಲಾಗಿದೆ, ಆದರೆ ಹಿರಿಯೂರು ನಗರದ ಖಾಸಗಿ ಬಸ್ ನಿಲ್ದಾಣದ ಶೌಚಾಲಯದ ಗೋಡೆಗಳನ್ನು ಬಣ್ಣಬಣ್ಣದ ಚಿತ್ತಾರಗಳಿಂದ ಅಲಂಕರಿಸುವ ಮೂಲಕ ಬಸ್ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಕಣ್ಣಿಗೆ ಕಂಗೊಳಿಸುವಂತೆ ಮಾಡಲಾಗಿದೆ.
ದಕ್ಷಿಣಕಾಶಿ ಎಂದೇ ಪ್ರಸಿದ್ಧವಾದ ಹಿರಿಯೂರು ನಗರದ ಸೌಂದರ್ಯ ಹೆಚ್ಚಿಸಲು ನಗರಸಭೆ ಈ ವಿಶೇಷ ಯೋಜನೆ ರೂಪಿಸಿದ್ದು, ರಾಜಕಾಲುವೆ ಒತ್ತುವರಿ ತೆರವು, ಪಾರ್ಕ್ ಗಳ ಅಭಿವೃದ್ಧಿ, ಸ್ವಚ್ಛತೆ, ವೇದಾವತಿ ಎಡಬಲದಂಡೆ ಕಾಲುವೆಗಳಿಗೆ ಕಸ ಹಾಕದಂತೆ ತಡೆಗೋಡೆ , ಶೌಚಗೃಹದ ಗೋಡೆ, ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ಗೋಡೆಗಳ ಸೌಂದರ್ಯ ಹೆಚ್ಚಿಸಲು ಗೋಡೆಬರಹ, ಸೇರಿದಂತೆ ಬಣ್ಣಬಣ್ಣದ ಚಿತ್ತಾರ ಬಿಡಿಸುವ ಮೂಲಕ ನಗರವನ್ನು ಆಕರ್ಷಕಗೊಳಿಸುವ ಕಾರ್ಯದಲ್ಲಿ ತೊಡಗಿದೆ.
ಹೀಗೆ ನಗರದ ಸಮಗ್ರ ಅಭಿವೃದ್ಧಿಗಾಗಿ ನಗರಸಭೆ ಮಾಸ್ಟರ್ ಪ್ಲಾನ್ ರೂಪಿಸಿದ್ದು, ನಗರದಲ್ಲಿನ ಸ್ವಚ್ಛತೆ ಜೊತೆಗೆ ಸಾರ್ವಜನಿಕ ಶೌಚಗೃಹಗಳ ಅಂದ ಹೆಚ್ಚಿಸುವ ಕೆಲಸ ಆರಂಭಿಸಲಾಗಿದೆ, ನಗರದ ಹೃದಯ ಭಾಗದಲ್ಲಿರುವ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿನ ಸಾರ್ವಜನಿಕ ಶೌಚಗೃಹದ ಗೋಡೆಯ ಮೇಲೆ ಕಲಾವಿದರ ಕುಂಚದಿಂದ ಅರಳಿದ ಚಿತ್ರಗಳು ನಗರದ ಜನರ ಗಮನ ಸೆಳೆಯುತ್ತಿವೆ.
ನಗರದ ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ, ಸುಂದರ ನಗರದ ನಿರ್ಮಾಣ ಮಾಡುವಲ್ಲಿ ನಗರದ ಅಭಿವೃದ್ಧಿ ಕುರಿತಂತೆ ವಿನೂತನ ಕಾರ್ಯಕ್ರಮಗಳನ್ನು ರೂಪಿಸಿರುತ್ತಿರುವ ಹಿನ್ನೆಲೆಯಲ್ಲಿ ಹಿರಿಯೂರು ನಗರಸಭೆ ಜನಮನ್ನನೆ ಪಡೆದಿದ್ದು, ನಗರಸಭೆ ಪೌರಾಯುಕ್ತರಾದ ಹೆಚ್.ಮಹಂತೇಶ್ ರವರ ಸೃಜನಶೀಲ ಚಟುವಟಿಕೆಗಳು ಹಾಗೂ ಕಾರ್ಯವೈಖರಿಗೆ ಸಾರ್ವಜನಿಕರು ಅತ್ಯಂತ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ, ಸರ್ಕಾರಿ ಶಾಲೆ ಮೈದಾನದಲ್ಲಿ ಹಾಗೂ ಬಸ್ ನಿಲ್ದಾಣದ ಅಕ್ಕಪಕ್ಕದ ಜಾಗದಲ್ಲಿ ಸಾರ್ವಜನಿಕರು ದಿನನಿತ್ಯ ಮಲಮೂತ್ರ ವಿಸರ್ಜನೆ ಮಾಡುತ್ತಿರುವುದನ್ನು ಗಮನಿಸಿ, ತರಕಾರಿ ಮಾರ್ಕೆಟ್ ಹಾಗೂ ಗಾಂಧಿವೃತ್ತ ಸೇರಿದಂತೆ ನಗರದ ಎಲ್ಲಾ ಶೌಚಾಲಯಗಳನ್ನು ಸ್ವಚ್ಛಗೊಳಿಸಿ, ಸುಂದರವಾಗಿ ವಿನ್ಯಾಸಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ಅವಕಾಶ ಮಾಡಿಕೊಡಲಾಗಿದೆ.
ನಗರಸಭೆ ಪೌರಾಡಳಿತ ಇಲಾಖೆ ನಿರ್ದೇಶನದಂದೆ ಸ್ವಚ್ಛ ಶೌಚಾಲಯ ನಿರ್ಮಿಸುವ ಮೂಲಕ ಸಾರ್ವಜನಿಕರ ಗಮನ ಸೆಳೆದಿದ್ದಾರೆ, ಸಾರ್ವಜನಿಕರ ಹಿತ ದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು, ನಗರದ ಆರು ಶೌಚಾಲಯಗಳನ್ನು ಸ್ವಚ್ಛ ಹಾಗೂ ಸುಂದರಗೊಳಿಸಲಾಗಿದೆ, ಈ ರೀತಿ ನಗರದಲ್ಲಿ ಅತ್ಯುತ್ತಮ ಕೆಲಸ ನಿರ್ವಹಿಸುತ್ತಿರುವ ನಗರಸಭೆ ಪೌರಾಯುಕ್ತ ಹೆಚ್,ಮಹಂತೇಶ್ ರಂತಹ ದಕ್ಷ ಹಾಗೂ ಸೃಜನಶೀಲ ಅಧಿಕಾರಿಗಳಿಗೆ ಸಾರ್ವಜನಿಕರು ಸ್ಪೂರ್ತಿತುಂಬಬೇಕಾಗಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page