ಒಪಿಎಸ್ ಜಾರಿಗೊಳಿಸುವಂತೆ ಒತ್ತಾಯಿಸಿ ಸರ್ಕಾರದ ವಿರುದ್ಧ ವಿವಿಧ ಇಲಾಖೆಗಳ ನೌಕರರ ಹಕ್ಕೊತ್ತಾಯ

by | 21/01/24 | ಪ್ರತಿಭಟನೆ


ಚಳ್ಳಕೆರೆ: ನಗರದ ಶಿಕ್ಷಕರ ಸಂಘ ಬೆಸ್ಕಾಂ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಎನ್‌ಪಿಎಸ್ ನೌಕರರು ಓಪಿಎಸ್ ಹಕ್ಕೊತ್ತಾಯದ ಚಿಂತನ ಮಂಥನ ಸಭೆಯನ್ನು ಹಮ್ಮಿಕೊಂಡಿದ್ದರು ಇದರ ಅಂಗವಾಗಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಓಪಿಎಸ್ ಜಾರಿಗೊಳಿಸುವಂತೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಸರ್ಕಾರವನ್ನು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಎನ್‌ಪಿಎಸ್ ನೌಕರ ಸಂಘದ ತಾಲೂಕು ಅಧ್ಯಕ್ಷ ಹೆಚ್ ಓ  ರಾಜಣ್ಣ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಚುನಾವಣಾ ಪೂರ್ವದಲ್ಲಿ ಎಲ್ಲಾ ಇಲಾಖೆಗಳ ಎನ್‌ಪಿಎಸ್ ನೌಕರರನ್ನು ಓಪಿಎಸ್ ಅಡಿಯಲ್ಲಿ ತಂದು ನ್ಯಾಯ ದೊರಕಿಸಿಕೊಡುವ ಭರವಸೆ ನೀಡಿ ಮತ ಗಿಟ್ಟಿಸಿಕೊಂಡು ಅಧಿಕಾರಕ್ಕೆ ಬಂದಿದೆ ಅಧಿಕಾರಕ್ಕೆ ಬಂದು 8 ತಿಂಗಳು ಕಳೆದರು ಇದುವರೆಗೂ ಆ ವಿಚಾರವಾಗಿ ಯಾವೊಬ್ಬ ಸಚಿವರು ಶಾಸಕರು ಮಾತನಾಡುತ್ತಿಲ್ಲ ಇದರಿಂದಾಗಿ ನೌಕರರಿಗೆ ಅತಂತ್ರ ಸ್ಥಿತಿ ಉಂಟಾಗಿದ್ದು ತಮ್ಮ ಜೀವನ ನಿರ್ವಹಣೆ ಕಷ್ಟಕರವಾಗುತ್ತಿದೆ ಸರ್ಕಾರ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದ ಸರ್ಕಾರ ಎಂಬ ಖ್ಯಾತಿ ಪಡೆದಿದೆ ಹಾಗಾಗಿ ನಮ್ಮ ನೌಕರರಿಗೂ ಸಹ ಓ ಪಿ ಎಸ್ ಜಾರಿಗೊಳಿಸಿ ಕೊಟ್ಟ ಮಾತನ್ನು ಮುಖ್ಯಮಂತ್ರಿಗಳು ಉಳಿಸಿಕೊಳ್ಳುತ್ತಾರೆ ಎಂಬ ಭರವಸೆ ಇದೆ ಈಗಾಗಲೇ ಒಪಿಎಸ್ ಜಾರಿ ಗೊಳಿಸಲು ಸರ್ಕಾರ ಒಂದು ಹಂತದವರೆಗೂ ಮುಂದೆ ಹೋಗಿದ್ದು ಶೀಘ್ರದಲ್ಲಿ ಅಂತಿಮ ನಿರ್ಧಾರ ಕೈಗೊಂಡು ಎಲ್ಲ ನೌಕರರ ಹಿತವನ್ನು ಕಾಪಾಡುತ್ತದೆ ಎಂಬ ಭರವಸೆ ಇದೆ ಕೂಡಲೇ ಸರ್ಕಾರ ತಮ್ಮ ನಿಲುವನ್ನು ತಿಳಿಸಬೇಕು ಇಲ್ಲದಿದ್ದರೆ ನೌಕರರು ಪ್ರತಿಭಟನೆ ಹಾದಿ ತುಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸರ್ಕಾರಿ ಅನುದಾನಿತ ಶಾಲೆಗಳ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸುರೇಶ್ ಮಹಾಂತಣ್ಣ ಬೆಸ್ಕಾಂ ರುದ್ರಮನಿ ಸುರೇಶ್ ಬಾಬು ಪ್ರಸನ್ನ ಸಿಟಿ ವೀರೇಶ್ ಜಿಟಿ ವೀರಭದ್ರ ಸ್ವಾಮಿ ಈರಣ್ಣ ರಾಮೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page