ಗ್ರಾಮ ಪಂಚಾಯಿತಿಗಳಲ್ಲಿ ಈ ಸ್ವತ್ತನ್ನು ಮಾಡುತ್ತಿಲ್ಲ ರೈತಮುಖಂಡ ಕೆ.ಟಿ.ತಿಪ್ಪೇಸ್ವಾಮಿರಿಂದ ಆರೋಪ

by | 25/01/24 | ಸುದ್ದಿ


ಹಿರಿಯೂರು :
ನಮ್ಮ ತಾಲೂಕಿನಲ್ಲಿ ಬಹುತೇಕ ಗ್ರಾಮ ಪಂಚಾಯತಿಗಳಲ್ಲಿ ರೈತರಿಗೆ ಈ ಸ್ವತ್ತು ಮಾಡಿಸಿಕೊಡದೆ ತಿಂಗಳಗಟ್ಟಲೆ ಕಾಯಿಸುತ್ತಾರೆ ಮತ್ತು ಯಾವ ಗ್ರಾಮ ಪಂಚಾಯಿತಿಯವರೂ ಈ ಸ್ವತ್ತು ಮಾಡದೆ ಖಾಸಗಿ ಕಂಪ್ಯೂಟರ್ ನಲ್ಲಿ ಮಾಡಿಸಬೇಕಾಗಿದೆ ಎಂಬುದಾಗಿ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾದ ಕೆ.ಟಿ.ತಿಪ್ಪೇಸ್ವಾಮಿ ಆರೋಪಿಸಿದ್ದಾರೆ.
ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ರೈತ ಸಂಘದ ಪದಾಧಿಕಾರಿಗಳೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸಭೆಯನ್ನು ಉದ್ದೇಶಿಸಿ, ಅವರು ಮಾತನಾಡಿದರು.
ಈ ಸ್ವತ್ತು ಮಾಡಿಸಲು ಸರ್ಕಾರದ ನಿಯಮದ ಪ್ರಕಾರ ಕೇವಲ 50 ರೂ ಧರ ವಿಧಿಸಬಹುದಾಗಿದ್ದು, ಆದರೆ ಈ ಸ್ವತ್ತು ಖಾತೆ ಮಾಡಲು 10 ಸಾವಿರದಿಂದ 1 ಲಕ್ಷದವರೆಗೆ ಸಾರ್ವಜನಿಕರಿಂದ ಹಣ ಪಡೆಯುತ್ತಿದ್ದಾರೆ ಈ ದಂದೆ ಮೊದಲು ನಿಲ್ಲಬೇಕು ಮತ್ತು ಗ್ರಾಮ ಪಂಚಾಯಿತಿಯಲ್ಲಿ ಈ ಸ್ವತ್ತು ಕೆಲಸ ಕಡ್ಡಾಯವಾಗಿ ಮಾಡಬೇಕು ಎಂಬುದಾಗಿ ಅವರು ಒತ್ತಾಯಿಸಿದ್ದಾರೆ.
ವಿವಿಧ ವಸತಿ ಯೋಜನೆಯಲ್ಲಿ ಬಡವರಿಗೆ ನಿರ್ಗತಿಕರಿಗೆ ಸೂರು ಕಲ್ಪಿಸುವ ಸರ್ಕಾರದ ಯೋಜನೆಯಲ್ಲಿ ನಮ್ಮ ತಾಲೂಕಿನಲ್ಲಿ ಸಾವಿರಾರು ಬೋಗಸ್ ಬಿಲ್ ಆಗಿರುತ್ತದೆ ಇದರ ಬಗ್ಗೆ ತನಿಖೆ ನಡೆಸಲು ನಾಲ್ಕು ಬಾರಿ ಗ್ರಾಮ ಪಂಚಾಯಿತಿಗೆ ನೋಟಿಸ್ ನೀಡಿದರು ಇದುವರೆಗೂ ಯಾವುದೇ ಉತ್ತರ ಕೊಡದೆ ಮೌನವಾಗಿರುತ್ತಾರೆ ಕೂಡಲೇ ಇದರ ಬಗ್ಗೆ ತನಿಕೆ ನಡೆಸಿ ತಪ್ಪಿಸಸ್ಥ ಅಧಿಕಾರಿಗಳ ವಿರುದ್ಧ ಸೂಕ್ತಕ್ರಮ ಜರುಗಿಸಬೇಕು
ಜೊತೆಗೆ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಕೈಗಾರಿಕೆಗಳು ಮತ್ತು ವಾಣಿಜ್ಯ ಉತ್ಪಾದಕ ಕಂಪನಿಗಳಿಂದ ತೆರಿಗೆ ವಸೂಲಾತಿ ಮಾಡದೆ ಕಂಪನಿಯವರು ಶಾಮೀಲಾಗಿ ಲಕ್ಷಾಂತರ ತೆರಿಗೆ ವಸೂಲಾತಿ ಮಾಡಲಾಗುತ್ತಿಲ್ಲ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅನೇಕ ಕಾಮಗಾರಿಗಳ ಕೆಲಸ ಮಾಡದೆ ಬಿಲ್ ಮಾಡಿಕೊಂಡಿರುತ್ತಾರೆ ಇದರ ಬಗ್ಗೆ ಕೂಡ ಸಮಗ್ರ ತನಿಖೆ ನಡೆಸಬೇಕು ಎಂಬುದಾಗಿ ಅವರು ಒತ್ತಾಯಿಸಿದರು.
ನಮ್ಮ ತಾಲೂಕಿನಲ್ಲಿ ಅನೇಕ ಗ್ರಾಮಗಳಲ್ಲಿ ಶುದ್ಧ ಕುಡಿವ ನೀರಿನ ಘಟಕಗಳು ಕೆಟ್ಟು ಹೋಗಿದ್ದು, ಗ್ರಾಮೀಣ ಭಾಗದ ರೈತರಿಗೆ ಕುಡಿಯುವ ನೀರಿನ ಸಮಸ್ಯೆ ಆಗಿರುತ್ತದೆ ಸುಮಾರು 50 ಆರ್ ಓ ಪ್ಲಾಂಟ್ ಗಳು ಕಾರ್ಯನಿರ್ವಹಿಸುತ್ತಿಲ್ಲ, ಮುಂದುವರಿದು ಗ್ರಾಮಗಳಲ್ಲಿ ನೈರ್ಮಲ್ಯ ಕೆಲಸ ಮಾಡದೆ ಬ್ಲೀಚಿಂಗ್ ಪೌಡರ್, ಪೆನಾಯಿಲ್ ಸಿಂಪಡಿಸದೇ ಬಿಲ್ ಪಾವತಿ ಮಾಡಿಕೊಂಡಿರುತ್ತಾರೆ ಎಂಬುದಾಗಿ ಅವರು ಆಪಾದಿಸಿದರು.
ರೈತರ ಮನವಿಗೆ ಸ್ಪಂದಿಸಿದ ತಾಲೂಕು ಪಂಚಾಯತಿಯ ಕಾರ್ಯನಿರ್ವಹಣಾ ಅಧಿಕಾರಿ ಸತೀಶ್ ಕುಮಾರ್ ಮಾತನಾಡಿ, ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಮಾಡಿದರಲ್ಲದೆ, ಇನ್ನು ಮುಂದೆ ಪಂಚಾಯತಿಯಲ್ಲಿಯೇ ಕಡ್ಡಾಯವಾಗಿ ಈಸ್ವತ್ತು ಮಾಡಿಕೊಡಬೇಕು, ವಾಣಿಜ್ಯ ಕಂಪನಿಗಳಿಗೆ ನೋಟಿಸ್ ನೀಡಿ, ಕಂದಾಯ ವಸೂಲಾತಿ ಮಾಡಬೇಕು, ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸಬೇಕು.
ಅಲ್ಲದೆ ವಸತಿ ಯೋಜನೆ ಮನೆಗಳ ಬಗ್ಗೆ ತನಿಖೆ ನಡೆಸಿ, ಒಂದು ತಿಂಗಳ ಒಳಗಾಗಿ ವರದಿ ನೀಡಲು ಸೂಚಿಸಿದರಲ್ಲದೆ, ಮುಂದಿನ ಸಭೆಗಳಲ್ಲಿ ಈ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂಬುದಾಗಿ ರೈತಮುಖಂಡರುಗಳಿಗೆ ಭರವಸೆ ನೀಡಿದರು. ಈ ಸಭೆಯಲ್ಲಿ ರೈತಮುಖಂಡರುಗಳಾದ ಆಲೂರು ಸಿದ್ದರಾಮಣ್ಣ, ತಿಮ್ಮಾರೆಡ್ಡಿ, ರಂಗಸ್ವಾಮಿ, ಶಿವಣ್ಣ ಮತ್ತು ವಿವಿಧ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page