ಅಂತರ್ಜಾತಿ ವಿವಾಹವಾಗಿ ಬಹಿಷ್ಕಾರಗೊಂಡ ದಂಪತಿಗಳನ್ನು ಮರಳಿ ಮನೆ ಸೇರಿಸಿದ ಅಧಿಕಾರಿಗಳು ಮಂದಹಾಸ ಬೀರಿದ ದಂಪತಿಗಳು..

by | 30/09/23 | ಸುದ್ದಿ


ಚಳ್ಳಕೆರೆ ಸೆ.30 ಅಂತರ್ಜಾತಿ ವಿವಾಹವಾದ ಹಿನ್ನೆಲೆಯಲ್ಲಿ ತಿಂಗಳ ಮಗುವಿನೊಂದಿಗೆ ದಂಪತಿಗೆ ಸಾಮಾಜಿಕ ಬಹಿಷ್ಕಾರಕ್ಕೊಳಗಾಗಿದ್ದ ದಂಪತಿ ಹಾಗೂ ಒಂದು ತಿಂಗಳ ಮಗುವನ್ನು ಎನ್. ದೇವರಹಳ್ಳಿ ಗ್ರಾಮದ ತವರು ಮನೆಗೆ ಜಿಲ್ಲಾಡಳಿತ ಸೇರಿಸುವಲ್ಲಿ ಯಶಸ್ವಿಯಾಗಿದೆ.


ತಾಲ್ಲೂಕು, ಜಿಲ್ಲಾಡಳಿತಹಾಗೂ ವಿವಿಧ ಇಲಾಲೆಯ ಅಧಿಕಾರಿಗಳು ಆರತಿ ಮಾಡಿ ಬರಮಾಡಿಕೊಂಡ ಸಮುದಾಯದ ಜನ ದಂಪತಿಗಳಲ್ಲಿ ಮೂಡಿದ ಮಂದಹಾಸ.

ಅಂತರ್ಜಾತಿ ವಿವಾಹವಾಗಿದ್ದಕ್ಕಾಗಿ ಸಮುದಾಯದಿಂದ ಸಾಮಾಜಿಕ ಬಹಿಷ್ಕಾರಕ್ಕೊಳಪಟ್ಟ ದಂಪತಿಗಳನ್ನು ತಾಲ್ಲೂಕು, ಜಿಲ್ಲಾಡಳಿತ ಜಾಗೃತ ಸಭೆ ನಡೆಸಿ ಶನಿವಾರ ಮರಳಿ ಮನೆ ಸೇರಿಸಿದರು.
ಜೋಗಿ ಸಮುದಾಯದ ಶ್ರವಣ ಮತ್ತು‌ ವಾಕ್‌ದೋಷವುಳ್ಳ ದಂಪತಿಗಳು ಅಂತರ್ಜಾತಿ ವಿವಾಹವಾದ ಕಾರಣ ಸಾಮಾಜಿಕ ಬಹಿಷ್ಕಾರಕ್ಕೊಳಗಾಗಿದ್ದರು.
ಜಿ.ಪಂ.ಸಿಇಒ ಸೇರಿದಂತೆ ತಾಲ್ಲೂಕು ಮತ್ತು ಜಿಲ್ಲಾಡಳಿತ ಗ್ರಾಮದಲ್ಲಿ ಸರಣಿ ಜಾಗೃತ ಸಭೆ ನಡೆಸಿ ಶನಿವಾರ ದಂಪತಿ ಹಾಗೂ ಒಂದು ತಿಂಗಳ ಮಗುವನ್ನು ಮರಳಿ ಮನೆ ಸೇರಿಸಿದರು.
ಮಹಿಳಾ ಸಾಂತ್ವಾನ ಕೇಂದ್ರದಲ್ಲಿದ್ದ ಬಾಣಂತಿ ಮಗುವನ್ನು ಶನಿವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಕರೆತಂದರು ಅಧಿಕಾರಿಗಳ ಸಮ್ಮುಖದಲ್ಲಿ ದೇವಸ್ಥಾನದ ಬಳಿ ಆರತಿ ಮಾಡಿ ಬರಮಾಡಿಕೊಂಡರು. ಬಾಣಂತಿ ಸಾವಿತ್ರಮ್ಮ ತನ್ನ ತಾಯಿ ಮನೆಗೆ ಹೋದಾಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಭಾರತಿ ಸೀರೆ, ಅರಿಶಿಣ, ಕುಂಕುಮ ನೀಡಿ ಆರತಿ ಬೆಳಗಿದರು. ಮತ್ತು ಐದು ಜನ ಮುತ್ತೈದೆ ಮಹಿಳೆಯರು ಆರತಿ ಮಾಡಿ ಮುಂದೆ ಸುಖವಾಗಿರು ಎಂದು ಮಗು ಹಾಗು ದಂಪತಿಗಳನ್ನು ಆಶೀರ್ವದಿಸಿದರು.
ನಂತರ ಸಭೆಯಲ್ಲಿ ಮಾತನಾಡಿದು. ತಹಶೀಲ್ದಾರ್ ರೆಹಾನ್‌ಪಾಷ, ಈ ಗ್ರಾಮದಲ್ಲಿ ಕಳೆದ ಮೂರು ದಿನಗಳಿಂದ ಜಿಲ್ಲಾಡಳಿತದ ವತಿಯಿಂದ ಎಲ್ಲಾ ಅಧಿಕಾರಿ ವರ್ಗದವರು ಜಾಗೃತ ಸಭೆ ನಡೆಸಿ ಕಾನೂನು ಅರಿವು ಮೂಡಿಸಿದ್ದೇವೆ. ಮುಂದೆ ಇಂತಹ ಅನಿಷ್ಟ ಪದ್ಧತಿ ಹೆಸರಿನಲ್ಲಿ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಒಂದು ವೇಳೆ ಅಂತಹ ಘಟನೆಗಳು ಗಮನಕ್ಕೆ ಬಂದಲ್ಲಿ ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ತಾಪಂ ಇ ಒ ಹೊನ್ನಯ್ಯ ಮಾತನಾಡಿ ಗ್ರಾಮಗಳಲ್ಲಿ ಮೌಢ್ಯಗಳ ಹೆಸರಿನಲ್ಲಿ ಅಸ್ಪೃಶ್ಯತೆ. ಬಹಿಷ್ಕಾರದಂತಹ ಪ್ರಕರಣಗಳು ನಡೆದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಗ್ರಾಮ ಪಂಚಾಯತ್ ವತಿಯಿಂದ ಗ್ರಾಮದಲ್ಲಿ ಕಾನೂನು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ನಿಮ್ಮ ಗ್ರಾಮಕ್ಕೆ ಪೋಲಿಸರ ಭೇಟಿ ಹಾಗೂ ಕಣ್ಣಿಟ್ಟಿರುತ್ತಾರೆ ಮತ್ತೆ ಇಂತಹ ಪ್ರಕರಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಹಾಗೂ ಜಾತಿ ಬೇದ ಮರೆತು ಒಗ್ಗಟ್ಟಿನಿಂದ ನೆಮ್ಮದಿಯ ಜೀವನ ನಡೆಸುವಂತೆ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಭಾರತಿ ಮಾತನಾಡಿ, ಅನಿಷ್ಟ ಪದ್ಧತಿಗಳನ್ನು ಆಚರಿಸುವುದು ಖಂಡನೀಯ. ಬಹಿಷ್ಕಾರದಂತ ಕಾನೂನು ಬಾಹಿರ ಚಟುವಟಿಕೆಗಳ ಮೂಲಕ ಬಾಣಂತಿ ಮಗುವನ್ನು ಹೊರಹಾಕುವುದು ನಾಗರೀಕ ಸಮಾಜಕ್ಕೆ ಶೋಭೆ ತರುವಂತಹುದಲ್ಲ. ಈ ಪ್ರಕರಣ ಇಲ್ಲಿಗೆ ಸುಖಾಂತ್ಯ ಗೊಂಡಿದೆ. ದಂಪತಿಗಳಿಗೆ ನಮ್ಮ ಇಲಾಖೆಯಿಂದ ದೊರಕುವ ಎಲ್ಲಾ ಸೌಲಭ್ಯಗಳನ್ನು ಪ್ರಾಮಾಣಿಕ ಕವಾಗಿ ಕೊಡಿಸಲಾಗುವುದು ಎಂದು ತಿಳಿಸಿದರು.
ಸಾಮಾಜಿಕ ಹೋರಾಟಗಾರ್ತಿ ರಶ್ಮಿ ಮಾತನಾಡಿ, ನಮ್ಮ ಬಳಿ ಬಾಣಂತಿ ಮಗುವು ಬಂದಾಗ ನಾವು ತಾಲ್ಲೂಕು ಆಡಳಿತಕ್ಕೆ ಮಾಹಿತಿ ನೀಡಿದಾಗ ಎಲ್ಲಾ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಸ್ಪಂದಿಸಿ ದಂಪತಿಗಳಿಗೆ ನ್ಯಾಯ ಒದಗಿಸುವಲ್ಲಿ ಶ್ರಮಿಸಿದ್ದೀರಿ. ಮಾನವೀಯ ದೃಷ್ಟಿಯಿಂದ ಯಾರ ಮೇಲೂ ಪ್ರಕರಣ ದಾಖಲಿಸಿಲ್ಲ. ಇಂತಹ ಘಟನೆಗಳು ಮತ್ತೊಮ್ಮೆ ಜರುಗದಂತೆ ನೋಡಿಕೊಳ್ಳಿ ದಂಪತಿಗಳಿಗೆ ಯಾವುದೇ ತೊಂದರೆ ನೀಡಿದರೆ ಅಂತವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದರು.
ಮಾತು ಬಾರದ ದಂಪತಿಗಳು ಅಧಿಕಾರಿಗಳಿಗೆ ತಾವು ಅನುಭವಿಸಿದ ನೋವುಗಳನ್ನು ಕಿವುಡ ಮತ್ತು ಮೂಗ ಶಾಲೆಯ ಶಿಕ್ಷಕಿ ಅಂಬಿಕಾ ಮುಖಾಂತರ ಸಂಜ್ಞೆಗಳ ಮೂಲಕ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಸಿಎಂ ಅಧಿಕಾರಿ ಡಾ. ಸುಬ್ರನಾಯ್ಕ, ತಾಲ್ಲೂಕು ಬಿಸಿಎಂ ಅಧಿಕಾರಿ ದಿವಾಕರ್ ಹಾಗು ಗ್ರಾಮಸ್ಥರಾದ ಮಂಜುನಾಥ್, ನಾಗರಾಜ್, ತಾ.ಪಂ. ಮಾಜಿ ಸದಸ್ಯ ತಿಪ್ಪೇಸ್ವಾಮಿ ಮಾತನಾಡಿದರು. ಸಿಪಿಐ ಸಮೀವುಲ್ಲಾ, ಸಿಡಿಪಿಒ ಹರಿಪ್ರಸಾದ್, ತಾಲ್ಲೂಕು ಮಟ್ಟದ ಅಧಿಕಾರಿಗಳು, ಅರುಣ್‌ಕುಮಾರ್ ಮತ್ತು ಜೋಗಿ ಸಮುದಾಯದ ಮುಖಂಡರು ಹಾಜರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page